ETV Bharat / state

ಕೆಪಿಎಸ್‌ಸಿ ಭ್ರಷ್ಟಾಚಾರ ವಿರುದ್ಧ ಪ್ರತಿಭಟನೆ: ಬೆಂಗಳೂರಲ್ಲಿ ಆಪ್ ಮುಖಂಡರ ಬಂಧನ - ಪ್ರತಿಭಟನೆ ಮಾಡುತ್ತಿದ್ದ ಆಪ್ ಮುಖಂಡರ ಬಂಧನ

ಕೆಪಿಎಸ್‌ಸಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಆಮ್‌ ಆದ್ಮಿ ಪಾರ್ಟಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೆಪಿಎಸ್‌ಸಿ ಭ್ರಷ್ಟಾಚಾರ ಆಪ್​ ಪಕ್ಷದಿಂದ ವಿರುದ್ಧ ಪ್ರತಿಭಟನೆ

author img

By

Published : May 4, 2022, 6:54 PM IST

Updated : May 4, 2022, 7:41 PM IST

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಇಂದು ಆಮ್‌ ಆದ್ಮಿ ಪಾರ್ಟಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ ಬಳಿಕ ಕೆಪಿಎಸ್‌ಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ಆಪ್ ಕಾರ್ಯಕರ್ತರನ್ನು ಪೊಲೀಸರು ಆರಂಭದಲ್ಲೇ ಬಂಧಿಸಿದರು.

ಈ ವೇಳೆ, ಮಾಧ್ಯಮಗಳ ಜೊತೆ ಮಾತನಾಡಿದ ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ, ಭ್ರಷ್ಟಾಚಾರದ ತಾಣ ಎಂಬ ಕುಖ್ಯಾತಿಗೆ ಒಳಗಾಗಿರುವ ಕರ್ನಾಟಕ ಲೋಕಸೇವಾ ಆಯೋಗವನ್ನು ಸರಿದಾರಿಗೆ ತರುವ ಕುರಿತು ಎಲ್ಲ ಸರ್ಕಾರಗಳು ಮಾತನಾಡಿವೆ. ಆದರೆ, ಇದಕ್ಕೆ ಕಾಯಕಲ್ಪ ಮಾತ್ರ ಇನ್ನೂ ಆಗಿಲ್ಲ.

ರಾಜ್ಯದ ಮೂರು ಕೋಟಿ ಯುವಜನತೆಯ ಪರವಾಗಿ ಹಾಗೂ ಈವರೆಗೂ ರಾಜ್ಯವನ್ನಾಳಿದ ಸರ್ಕಾರಗಳ ವಿರುದ್ಧ ಒಗ್ಗಟ್ಟಿನಿಂದ ಬಲ ಪ್ರದರ್ಶಿಸುವ ಸಮಯ ಇದೀಗ ಬಂದಿದೆ. ಒಂದು ಕಡೆ ವಿದ್ಯಾರ್ಹತೆಗೆ ಯೋಗ್ಯವಾದ ಕೆಲಸ ಸಿಗುತ್ತಿಲ್ಲ. ಮತ್ತೊಂದು ಕಡೆ ಸರ್ಕಾರಿ ಉದ್ಯೋಗಗಳನ್ನು ಮಾರಿಕೊಂಡು, ಅರ್ಹರಿಗೆ ಬಿಜೆಪಿ ಸರ್ಕಾರವು ಅನ್ಯಾಯ ಮಾಡುತ್ತಿದೆ. ಇದರಿಂದಾಗಿ ಸರ್ಕಾರಿ ಉದ್ಯೋಗಗಳು ಉಳ್ಳವರು ಹಾಗೂ ಭ್ರಷ್ಟರ ಪಾಲಾಗುತ್ತಿವೆ ಎಂದು ಹೇಳಿದರು.

ಕೆಪಿಎಸ್‌ಸಿ ಭ್ರಷ್ಟಾಚಾರ ವಿರುದ್ಧ ಪ್ರತಿಭಟನೆ: ಬೆಂಗಳೂರಲ್ಲಿ ಆಪ್ ಮುಖಂಡರ ಬಂಧನ

ಇದನ್ನೂ ಓದಿ: ಶಿರಡಿಯಲ್ಲಿ ಶೀಘ್ರದಲ್ಲೇ ವೃದ್ಧಾಶ್ರಮ ಪ್ರಾರಂಭಿಸಲಿದ್ದಾರೆ ಸೋನು ಸೂದ್​!

ಪ್ರತಿಭಟನೆಯಲಿ ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಜಗದೀಶ್‌ ವಿ ಸದಂ, ಚನ್ನಪ್ಪಗೌಡ ನೆಲ್ಲೂರು, ಲಕ್ಷ್ಮೀಕಾಂತ್‌ ರಾವ್‌, ರವಿಚಂದ್ರ ನೆರಬೆಂಚಿ, ಸಮೀರ್‌, ಫರೀದ್‌, ಡಾ. ಸತೀಶ್‌ ಕುಮಾರ್‌, ಶಾಶಾವಲ್ಲಿ, ಗೀತಾ, ಪ್ರಕಾಶ್‌ ನೆಂಡುಗಂಡಿ, ಮರಿಯಾ ಮತ್ತಿತ್ತರ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.

Last Updated : May 4, 2022, 7:41 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.