ಬೆಂಗಳೂರು: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಇದುವರೆಗೆ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಕ್ರಿಮಿನಲ್ ಹಿನ್ನೆಲೆಯಿರುವ ಆರೋಪಿಗಳು ಈ ಹಿಂದೆ ಪೊಲೀಸರು ಕೈಗೊಂಡ ಕ್ರಮಗಳ ಬಗ್ಗೆ ಇನ್ನೊಂದು ವಾರದಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ನೀಡುವಂತೆ ಡಿ. ಜಿ ಪ್ರವೀಣ್ ಸೂದ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪತ್ರ ಬರೆದಿದ್ದಾರೆ.
ಬಂಧಿತರಾದ ಆರೋಪಿಗಳು ಒಂದಕ್ಕಿಂತ ಹೆಚ್ಚು ಅಪರಾಧ ಕೃತ್ಯಗಳನ್ನು ಮಾಡಿದ್ದು, ಇವರ ಬೆಳವಣಿಗೆಗೆ ಕಡಿವಾಣ ಹಾಕಲು ವಿಫಲರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಬಂದಿದೆ. ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದ್ದು, ಈ ಬಗ್ಗೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದು, ಒಂದು ವಾರದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ.
ಬಂಧಿತ ಆರೋಪಿಗಳ ವಿರುದ್ಧ ದೊಡ್ಡಪೇಟೆ ಹಾಗೂ ಕೋಟೆ ಪೊಲೀಸ್ ಠಾಣೆಗಳಲ್ಲಿ ಅಪರಾಧ ಪ್ರಕರಣ ದಾಖಲಾಗಿವೆ. ಕ್ರಿಮಿನಲ್ ಹಿನ್ನೆಲೆ ಇರುವ ಆರೋಪಿಗಳ ಮೇಲೆ ಈ ಎರಡು ಪೊಲೀಸ್ ಠಾಣೆಯಲ್ಲಿ ಕಳೆದ ಐದು ವರ್ಷಗಳಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ಕೈಗೊಂಡಿರುವ ಕ್ರಮಗಳೇನು?. ಈ ಅವಧಿಯಲ್ಲಿ ನಿರ್ಲಕ್ಷಿಸಿದ ಲೋಪಗಳ ಬಗ್ಗೆ ಹಾಗೂ ಮೇಲಧಿಕಾರಿಗಳು ನೀಡಿರುವ ನಿರ್ದೇಶನ ಪಾಲನೆಯಾಗಿದೆಯೇ? ಎಂಬುದರ ವಿಸ್ಕೃತ ವರದಿ ನೀಡುವಂತೆ ತಾಕೀತು ಮಾಡಿದ್ದಾರೆ.
ಓದಿ: ಇಂಟಿಗ್ರೇಟೆಡ್ ಟೆಂಪಲ್ ಮ್ಯಾನೇಜ್‌ಮೆಂಟ್ ಸಿಸ್ಟ್ಮ್ಗೆ ಸಿಎಂ ಚಾಲನೆ