ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ನಗರದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಿದರು. ಬೆಂಗಳೂರಿನ ಜಯಮಹಲ್ನ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಹಾಗೂ ಕಠಿಣ ಕ್ರಮ ಕೈಗೊಳ್ಳದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಸುಮಾರು 50 ಕಾರ್ಯಕರ್ತರು ಗೃಹ ಸಚಿವರ ನಿವಾಸದ ಗೇಟ್ ತಳ್ಳಿ ಒಳನುಗ್ಗಿ ಮುತ್ತಿಗೆ ಹಾಕಿದರು. ಬಳಿಕ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಿವಾಸದ ಮುಂದೆ ಧರಣಿ ನಡೆಸಿದರು.
ಈ ವೇಳೆ, ಗೃಹ ಸಚಿವರು ನಿವಾಸದಲ್ಲಿ ಇರಲಿಲ್ಲ. ಈ ಸಂದರ್ಭ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಕ್ಸಮರ ನಡೆಯಿತು. ಮುತ್ತಿಗೆ ಹಾಕಿದ ಎಬಿವಿಪಿ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದರು. ಬಳಿಕ ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ಪಡೆದರು. ಸದ್ಯ ನಿವಾಸದ ಸುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಇದನ್ನೂ ಓದಿ: ಸುರತ್ಕಲ್ ಯುವಕ ಫಾಜಿಲ್ ಹತ್ಯೆ ಪ್ರಕರಣ: 21 ಮಂದಿ ಪೊಲೀಸರ ವಶಕ್ಕೆ