ETV Bharat / state

ಇಂದಿನಿಂದ ಶೈಕ್ಷಣಿಕ‌ ವರ್ಷ ಆರಂಭ.. ಯಾವುದೇ ಕಾರಣಕ್ಕೂ ಮುಂದೂಡಲ್ಲ ಎಂದ ಶಿಕ್ಷಣ ಇಲಾಖೆ

ಇಂದಿನಿಂದ ಶೈಕ್ಷಣಿಕ‌ ವರ್ಷ ಆರಂಭವಾಗಲಿದ್ದು, ಯಾವುದೇ ಕಾರಣಕ್ಕೂ ಮುಂದೂಡಲ್ಲ ಎಂದ ಶಿಕ್ಷಣ ಇಲಾಖೆ ಹೇಳಿದೆ.

Academic year begins, Academic year begins by june 15th, Education department, Education department news, ಇಂದಿನಿಂದ ಶೈಕ್ಷಣಿಕ‌ ವರ್ಷ ಆರಂಭ, ಇಂದಿನಿಂದ ಶೈಕ್ಷಣಿಕ‌ ವರ್ಷ ಆರಂಭ ಸುದ್ದಿ, ಶಿಕ್ಷಣ ಇಲಾಖೆ, ಶಿಕ್ಷಣ ಇಲಾಖೆ ಸುದ್ದಿ,
ಇಂದಿನಿಂದ ಶೈಕ್ಷಣಿಕ‌ ವರ್ಷ ಆರಂಭ
author img

By

Published : Jun 15, 2021, 4:55 AM IST

ಬೆಂಗಳೂರು: ಇಂದಿನಿಂದ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. ಶೈಕ್ಷಣಿಕ ವರ್ಷದ ಆರಂಭದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಇಂದಿನಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಆರಂಭಿಸಲು ಸೂಚಿಸಲಾಗಿದೆ. ಜುಲೈ 1 ರಿಂದ ಶೈಕ್ಷಣಿಕ ವರ್ಷ ಶಾಲಾ ತರಗತಿಗಳು ಆರಂಭವಾಗಲಿವೆ. ಹೀಗಾಗಿ ಇಂದಿನಿಂದ ಮಕ್ಕಳ‌ ಶಾಲಾ ದಾಖಲಾತಿ ಪ್ರಾರಂಭಿಸಿ 31/08/2021 ರ ಒಳಗೆ ಮುಕ್ತಾಯಗೊಳಿಸಬೇಕು ಎಂದು ನಿರ್ದೇಶಿಸಿದ್ದಾರೆ.

ಲಾಕ್​ಡೌನ್ ಜಾರಿಯಲ್ಲಿರುವ ಜಿಲ್ಲೆಯವರು ಪಾಸ್​ನೊಂದಿಗೆ ಶಾಲೆಗೆ ಬರಬೇಕು. ಈಗಾಗಲೇ ಒಂದು ಶೈಕ್ಷಣಿಕ ವರ್ಷ ತಡವಾಗಿದೆ. ಶಿಕ್ಷಕರು ಕೂಡ ಅನ್ಯ ಕಾರಣ ನೀಡದೆ, ವೈದ್ಯರು, ಪೌರ ಕಾರ್ಮಿಕರ ಕೆಲಸದ ಮಾದರಿಯಲ್ಲಿ ಕಾರ್ಯ ನಿರ್ವಹಿಸಬೇಕು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮುಂದೂಡವ ಪ್ರಶ್ನೆಯೇ ಇಲ್ಲ. ಕೋವಿಡ್ ಹಿನ್ನೆಲೆ ತರಗತಿಗಳನ್ನು ಭೌತಿಕವಾಗಿ ನಡೆಸಲು ಸಾಧ್ಯವಾಗದಿದ್ದರೆ, ಪರ್ಯಾಯವಾಗಿ ಆನ್ ಲೈನ್, ದೂರದರ್ಶನ, ಅಂತರ್ಜಾಲ ಕಲಿಕೆಯನ್ನು ನೀಡುವಂತೆ ಶಿಕ್ಷಕರಿಗೆ ಸೂಚಿಸಲಾಗಿದೆ.

ಈ ವಿಚಾರವಾಗಿ ಖಾಸಗಿ ಶಾಲಾ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕೋಟೆ ಮಾತನಾಡಿ, ಖಾಸಗಿ ಶಾಲಾ ಒಕ್ಕೂಟಗಳು ಕೆಲವು ನಿರ್ಧಾರಗಳನ್ನ ತೆಗೆದುಕೊಂಡಿದ್ದಾರೆ‌‌. ಪೋಷಕರು ಶುಲ್ಕ ಕಟ್ಟಲು ಸಾಧ್ಯವಾಗದಿದ್ದರೆ ಆನ್​ಲೈನ್ ಕ್ಲಾಸ್​ ನಿಲ್ಲಿಸಲ್ಲ. ಕೋವಿಡ್​ ಬಿಕ್ಕಟ್ಟು ಇರೋದರಿಂದ ಎಲ್ಲರೂ ನಷ್ಟದಲ್ಲಿದ್ದಾರೆ. ಸರಿಯಾದ ಸಮಯಕ್ಕೆ ಫೀಸ್​​ ಕಟ್ಟಲು ಆಗದಿರಬಹುದು. ಹಾಗಾಗಿ ಪೋಷಕರ ಮೇಲೆ ಒತ್ತಡ ಹಾಕಲ್ಲ ಎಂದು ಸ್ಪಷ್ಟಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.