ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ಅಧಿಕಾರಿಗಳು ಶಾಸಕ ಜಮೀರ್ ಅವರಿಗೆ ನೋಟಿಸ್ ನೀಡಿದ್ದಾರೆ. ಆಗಸ್ಟ್ 6 ರಂದು ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗುವಂತೆ ತಿಳಿಸಲಾಗಿದೆ. ಕಳೆದ ಜುಲೈ 5 ರಂದು ಜಮೀರ್ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಫ್ಲ್ಯಾಟ್ಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದರು.
ಅಪಾರ ಪ್ರಮಾಣದ ಅಕ್ರಮ ಆಸ್ತಿಗಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ಆಸ್ತಿಗೆ ಸಂಬಂಧಿಸಿದ ಆದಾಯದ ಮೂಲದ ದಾಖಲೆ ತರುವಂತೆ ಸೂಚನೆ ನೀಡಲಾಗಿತ್ತು. ಆದರೆ ಬಕ್ರೀದ್ ಕಾರಣ ನೀಡಿದ ಜಮೀರ್, ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ್ದರು. ಸದ್ಯ ಸಿದ್ದರಾಮೋತ್ಸವದಲ್ಲಿ ಇರುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಆದ್ದರಿಂದ ಕಡ್ಡಾಯವಾಗಿ ಆಗಸ್ಟ್ 6ರಂದು ಎಸಿಬಿ ಕಚೇರಿಗೆ ಹಾಜರಾಗಲು ಶಾಸಕರಿಗೆ ಸೂಚಿಸಲಾಗಿದೆ.
ಇದನ್ನೂ ಓದಿ:ಶಾಸಕ ಜಮೀರ್ ಮನೆ ಮೇಲೆ ಎಸಿಬಿ ದಾಳಿ ಪ್ರಕರಣ: ಮುಂದುವರೆದ ತನಿಖೆ