ಬೆಂಗಳೂರು: ಭ್ರಷ್ಟಾಚಾರದಲ್ಲಿ ತೊಡಗಿದ್ದ ಸರ್ಕಾರಿ ನೌಕರರ 12 ಸ್ಥಳಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಜ್ಯದ 3 ವಿವಿಧ ಸರ್ಕಾರಿ ನೌಕರರು, ನೌಕರಿಯಲ್ಲಿದ್ದುಕೊಂಡು ಅಕ್ರಮವಾಗಿ ಹಣ ಹಾಗೂ ಆಸ್ತಿ ಸಂಪಾದನೆ ಮಾಡಿದ್ದರು. ಹೀಗಾಗಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಳಗಾವಿಯ ಕಾನೂನು ಮಾಪನ ಶಾಸ್ತ್ರ ಸಹಾಯಕ ನಿಯಂತ್ರಣಕರನಾಗಿ ಕೆಲಸ ಮಾಡುತ್ತಿದ್ದ ಸುಭಾಷ್ ಸುರೇಂದ್ರ,ಕೊಪ್ಪಳದ ಭೂ ದಾಖಲೆಗಳ ಉಪ ನಿರ್ದೇಶಕರಾದ ಗೋಪಾಲ ಎಲ್ ಮಾಲಗತ್ತಿ, ಹಾಗೂ ಯಾದಗಿಯ ಅಭಿವೃದ್ಧಿ ಅಧಿಕಾರಿ ಜಗದೇವಪ್ಪ ಇವರ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಕಲೆಹಾಕಿದ್ದಾರೆ.