ETV Bharat / state

ವಿಧಾನಸಭೆ: ಲೇವಾದೇವಿದಾರರ, ಪೌರಸಭೆಗಳ ತಿದ್ದುಪಡಿ ವಿಧೇಯಕಗಳಿಗೆ ಅಂಗೀಕಾರ

ಕುಷ್ಠರೋಗವು ಗುಣಪಡಿಸಬಹುದಾದ ಕಾಯಿಲೆಯಾಗಿದ್ದು, ಅದರಿಂದ ನರಳುತ್ತಿರುವ ವ್ಯಕ್ತಿಗಳ ವಿರುದ್ಧ ತಾರತಮ್ಯವನ್ನು ತೊಡೆದು ಹಾಕುವ ತಿದ್ದುಪಡಿ ವಿಧೇಯಕ ಇದಾಗಿದೆ. ಯಾವುದೇ ಅಪಾಯಕಾರಿ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯನ್ನು ಮಾರುಕಟ್ಟೆಗೆ ಪ್ರವೇಶಿಸಲು ತಡೆಯುವಂತಿಲ್ಲ. ಯಾವುದೇ ವ್ಯಕ್ತಿಯು ಗಲಭೆ ಮಾಡಿದರೆ ಅಂತಹವರ ಮೇಲೆ ಕ್ರಮ ಕೈಗೊಳ್ಳಲು ಅವಕಾಶ ನೀಡಲಾಗಿದೆ.

Assembly
ವಿಧಾನಸಭೆ ಕಲಾಪ
author img

By

Published : Mar 15, 2021, 9:00 PM IST

ಬೆಂಗಳೂರು: ವಿಧಾನಸಭೆಯಲ್ಲಿ ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕ ಅಂಗೀಕಾರಗೊಂಡಿತು.

ಲೇವಾದೇವಿ ವಿಧೇಯಕದಲ್ಲಿ ಕಾನೂನು ಪ್ರಕಾರ ಸಾಲಗಾರನಿಂದ ಸಾಲ ವಸೂಲಿ ಮಾಡಬೇಕು. ಸಾಲಗಾರನಿಗೆ ಕಿರುಕುಳ, ಹಿಂಸಾಚಾರ, ಬೆದರಿಕೆ ಮಾಡುವಂತಿಲ್ಲ. ಒಂದು ವೇಳೆ ಈ ಕೃತ್ಯವನ್ನು ಎಸಗಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಮೊದಲ ಅಪರಾಧಕ್ಕೆ 6 ತಿಂಗಳವರೆಗೆ ವಿಸ್ತರಿಸಬಹುದಾದ ಜೈಲು ಅಥವಾ 5 ಸಾವಿರ ರೂ.ವರೆಗೆ ವಿಧಿಸಬಹುದಾದ ದಂಡದ ಬದಲಿಗೆ ಒಂದು ವರ್ಷದವರೆಗೆ ಶಿಕ್ಷೆ ಅಥವಾ 50 ಸಾವಿರ ರೂ.ವರೆಗೆ ದಂಡ ವಿಧಿಸುವುದಕ್ಕೆ ತಿದ್ದುಪಡಿ ತರಲಾಗಿದೆ.

ಇನ್ನು 2ನೇ ಬಾರಿಯ ಅಪರಾಧಕ್ಕೆ 2 ವರ್ಷವರೆಗೆ ಸೆರೆಮನೆವಾಸ ಹಾಗೂ 1 ಲಕ್ಷ ರೂ. ವರೆಗೆ ದಂಡ ವಿಸ್ತರಣೆ ಮಾಡಲಾಗಿದೆ.

ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕವೂ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿತು.

ಕುಷ್ಠರೋಗವು ಗುಣಪಡಿಸಬಹುದಾದ ಕಾಯಿಲೆಯಾಗಿದ್ದು, ಅದರಿಂದ ನರಳುತ್ತಿರುವ ವ್ಯಕ್ತಿಗಳ ವಿರುದ್ಧ ತಾರತಮ್ಯವನ್ನು ತೊಡೆದು ಹಾಕುವ ತಿದ್ದುಪಡಿ ವಿಧೇಯಕ ಇದಾಗಿದೆ. ಯಾವುದೇ ಅಪಾಯಕಾರಿ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯನ್ನು ಮಾರುಕಟ್ಟೆಗೆ ಪ್ರವೇಶಿಸಲು ತಡೆಯುವಂತಿಲ್ಲ. ಯಾವುದೇ ವ್ಯಕ್ತಿಯು ಗಲಭೆ ಮಾಡಿದರೆ ಅಂತಹವರ ಮೇಲೆ ಕ್ರಮ ಕೈಗೊಳ್ಳಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಮೀಸಲಾತಿ ಸಂಬಂಧ ಕೂಡಲೇ ಆದೇಶ.. ಸಚಿವ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.