ETV Bharat / state

ಕೆಕೆಆರ್​ಟಿಸಿ ಸಿಬ್ಬಂದಿಗೆ ₹1.20 ಕೋಟಿ ಮೊತ್ತದ ಅಪಘಾತ ಪರಿಹಾರ‌ ವಿಮಾ ಯೋಜನೆ

ಕೆಕೆಆರ್​ಟಿಸಿ ನಿಗಮದ ಸಿಬ್ಬಂದಿಗೆ ಪ್ರೀಮಿಯಂರಹಿತ 1.20 ಕೋಟಿ ರೂ ಮೊತ್ತದ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೆ ತರಲಾಗಿದೆ.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
author img

By ETV Bharat Karnataka Team

Published : Dec 21, 2023, 5:58 PM IST

ಬೆಂಗಳೂರು: ಕಲ್ಯಾಣ‌ ಕರ್ನಾಟಕ‌ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಕೆಆರ್‌ಟಿಸಿ) ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ಹಗಲಿರುಳು ಶ್ರಮಿಸುತ್ತಿರುವ ತನ್ನ ನಿಗಮದ ಸಿಬ್ಬಂದಿಗಾಗಿ ಸಂಸ್ಥೆಯಿಂದ ಹಲವು ಕಾರ್ಮಿಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಮುಂದುವರೆದ ಭಾಗವಾಗಿ ಇದೀಗ ಪ್ರೀಮಿಯಂರಹಿತ 1.20 ಕೋಟಿ ರೂ ಮೊತ್ತದ ಅಪಘಾತ ಪರಿಹಾರ‌ ವಿಮಾ ಯೋಜನೆ ಜಾರಿಗೆ ತಂದಿದೆ.

ಕೆಎಸ್ಆರ್​ಟಿಸಿ ಸಿಬ್ಬಂದಿಗೆ ಕೋಟಿ ರೂ.ಗಳ ಅಪಘಾತ ವಿಮೆ ಜಾರಿಯಾದ ಬೆನ್ನಲ್ಲೇ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ ಪ್ರೀಮಿಯಂರಹಿತ ಅಪಘಾತ ಪರಿಹಾರ‌ ವಿಮಾ ಯೋಜನೆ ಜಾರಿಗೆ ತರಲಾಗಿದೆ. ಮಹತ್ವದ ಯೋಜನೆ ಸಂಬಂಧ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತಿಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ವಲಯ ಮುಖ್ಯಸ್ಥ ನವನೀತ್ ಕುಮಾರ್ ಒಡಂಬಡಿಕೆ ವಿನಿಮಯ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ನಿಗಮದ ಸಿಬ್ಬಂದಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತದಿಂದಾಗಿ ಆಗುತ್ತಿರುವ ಸಾವು-ನೋವಿನ ಪ್ರಮಾಣ ಗಮನಿಸಿ, ನಿಗಮವು ನೌಕರರು ವೈಯಕ್ತಿಕ/ಕರ್ತವ್ಯನಿರತ ಸಮಯದಲ್ಲಿ ಅಪಘಾತದಿಂದಾಗಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅಂಗ ನ್ಯೂನತೆಗೆ ಒಳಗಾದಲ್ಲಿ ಸಿಬ್ಬಂದಿಗೆ ಗಣನೀಯ ಮೊತ್ತದಷ್ಟು ಹಣ ದೊರೆಯುವಂತೆ ಮಾಡುವ ಉದ್ದೇಶದಿಂದ ದಿನಾಂಕ 21-12-2023 ರಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅವರೊಂದಿಗೆ Union Super Salary Account (USSA) ಯೋಜನೆಯ ಸೌಲಭ್ಯ ನೀಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಪ್ರೀಮಿಯಂ ರಹಿತವಾಗಿ ಈ ಯೋಜನೆಯನ್ನು ಜಾರಿಗೊಳಿಸಲು ಸಹಕರಿಸಿದ ಯೂನಿಯನ್ ಬ್ಯಾಂಕ್ ಅವರಿಗೆ ಧನ್ಯವಾದ ತಿಳಿಸಿದರು.

ಯೋಜನೆಯಡಿ ಯೂನಿಯನ್ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ನೌಕರರು ಅಪಫಾತದಲ್ಲಿ ನಿಧನರಾದಲ್ಲಿ ಅಂತಹ ನೌಕರರ ಅವಲಂಬಿತರಿಗೆ 1.20 ಕೋಟಿ ರೂ ಅಪಘಾತ ವಿಮೆ ಹಣ ದೊರಕಲಿದೆ. ನೌಕರರು ಶಾಶ್ವತ ಅಂಗನ್ಯೂನತೆ/ಭಾಗಶಃ ಶಾಶ್ವತ ಅಂಗನ್ಯೂನತೆಗೆ ಒಳಗಾದಲ್ಲಿ ರೂ.1 ಕೋಟಿಗಳನ್ನು ಪಡೆಯಬಹುದಾಗಿದ್ದು, ಡೆಬಿಟ್ ಕಾರ್ಡ್​ ಮೇಲೆ 15 ಲಕ್ಷ ರೂ ಅಪಘಾತ ವಿಮಾ ಸೌಲಭ್ಯವನ್ನು ಜಾರಿ ಮಾಡಲಾಗಿದೆ. ಯೋಜನೆಯಡಿ ಅಪಘಾತವಲ್ಲದ ಸ್ವಾಭಾವಿಕ ಮರಣಕ್ಕೆ ರೂ.5 ಲಕ್ಷಗಳು ವಿಮೆಯೊಂದಿಗೆ ಇತರೆ ಹೆಚ್ಚುವರಿ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಕ್ಸಿಡೆಂಟ್ ಪ್ರಕರಣಗಳಲ್ಲಿ ಭಾರಿ ಏರಿಕೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.