ನೆಲಮಂಗಲ : ತಾಲೂಕಿನ ಸುತ್ತಮುತ್ತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಬೆಂಗಳೂರು-ಶಿವಮೊಗ್ಗ ರೈಲು ಮಾರ್ಗದ ಹಳಿಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಈ ವೇಳೆ ರೈಲು ಸಂಚರಿಸಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಾಗಿತ್ತು. ಆದರೆ ರೈಲು ನಿಯಂತ್ರಕನ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ.
ತಾಲೂಕಿನ ದೊಡ್ಡಬೆಲೆ ನಿಡುವಂದ ಗ್ರಾಮದ ಬಳಿಯ ರೈಲ್ವೇ ಹಳಿಗಳ ಮೇಲೆ ಮಳೆಗಾಳಿಯಿಂದ ಮರಗಳು ಉರುಳಿ ಬಿದ್ದಿವೆ. ತಕ್ಷಣವೇ ರೈಲು ನಿಯಂತ್ರಕ ಸಮಯ ಪ್ರಜ್ಞೆ ತೋರಿ ಇದೇ ಮಾರ್ಗದಲ್ಲಿ ಸಂಚರಿಸುವ ರೈಲು ನಿಲ್ಲಿಸಿ ಸಂಭವನೀಯ ಅನಾಹುತ ತಪ್ಪಿಸಿದ್ದಾರೆ.
ಬೆಂಗಳೂರು-ಶಿವಮೊಗ್ಗ ರೈಲು ಮಾರ್ಗವಾಗಿದ್ದ ಹಳಿಗಳ ಮೇಲೆ ಬಿದ್ದ ಮರಗಳನ್ನು ತೆರವುಗೊಳಿಸಲು ರೈಲು ಸಂಚಾರ ಸ್ಥಗಿತಗೊಳಿಸಲಾಗಿದ್ದು, ನಾಲ್ಕು ರೈಲುಗಳ ಸಂಚಾರವನ್ನು ತಡೆ ಹಿಡಿಯಲಾಯಿತು, ಇದರಿಂದ ರೈಲುಗಳಲ್ಲಿದ್ದ ಸಾವಿರಾರು ಪ್ರಯಾಣಿಕರು ಪರದಾಟುವಂತಾಯಿತು.