ಬೆಂಗಳೂರು: ನಗರದ ಟ್ಯಾನರಿ ರಸ್ತೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ತಳ್ಳುವ ಬಂಡಿಗಳನ್ನು ನಿಲ್ಲಿಸಿದ್ದ ಶೆಡ್ಗೆ ಬೆಂಕಿ ತಗುಲಿದೆ.
ಕ್ಷಣಾರ್ಧದಲ್ಲಿ ಇಡೀ ಶೆಡ್ಗೆ ಬೆಂಕಿ ಆವರಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಶುಕ್ರವಾರ ತಡರಾತ್ರಿ ಅವಘಡ ಸಂಭವಿಸಿದೆ.
ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.