ಬೆಂಗಳೂರು: ನಗರದ ಪಶ್ಚಿಮ ವಿಭಾಗದ ಮಾಗಡಿ ರಸ್ತೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಗೆ ನುಗ್ಗಿ ಚಿನ್ನದ ಸರ ಕದಿಯುತ್ತಿದ್ದ ಮೂವರು ಅಂತಾರಾಜ್ಯ ಖದೀಮರನ್ನು ಬಂಧಿಸಿದ್ದಾರೆ.
![accused-arrested-for-stealing-money-in-bengaluru](https://etvbharatimages.akamaized.net/etvbharat/prod-images/kn-bng-02-city-police-seize-16lakhs-worth-333gram-gold-arrest-4-accused-ka10032_11012022141531_1101f_1641890731_591.jpg)
ಮಾಗಡಿ ರಸ್ತೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀನಿವಾಸ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬರೋಬ್ಬರಿ ಎಂಟು ಮನೆಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ರಮೇಶ್, ಕೃಷ್ಣಮೂರ್ತಿ ಹಾಗು ವೆಂಕಟರಮಣ ಎನ್ನುವವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತರಿಂದ 16 ಲಕ್ಷ 65 ಸಾವಿರ ಮೌಲ್ಯದ 333 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.