ETV Bharat / state

ಮನೆಗಳ್ಳತನ: ನಗರದಲ್ಲಿ ಅಂತರರಾಜ್ಯ ಆರೋಪಿ ಸೆರೆ

ಮನೆಗಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿ, ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.

one arrested who involved in kengeri theft case
ಅಂತರ್ ರಾಜ್ಯ ಮನೆಗಳ್ಳ ಅಂದರ್​!
author img

By

Published : Apr 1, 2021, 7:17 PM IST

ಬೆಂಗಳೂರು: ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕೆಂಗೇರಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 16.41 ಲಕ್ಷ ರೂ. ವೌಲ್ಯದ 333 ಗ್ರಾಂ ಚಿನ್ನ ಹಾಗೂ ಬೆಳ್ಳಿ ಸಾಮಾನುಗಳು ವಶಪಡಿಸಿಕೊಳ್ಳಲಾಗಿದೆ.

one arrested who involved in kengeri theft case
ಆರೋಪಿಯಿಂದ ವಶಪಡಿಸಿಕೊಂಡ ವಸ್ತುಗಳು

ತೆಲಂಗಾಣ ಮೂಲದ ಬಸವರಾಜು ಪ್ರಕಾಶ್ (33) ಬಂಧಿತ ಆರೋಪಿ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಕಿಟಕಿ ಪಕ್ಕದಲ್ಲೇ ಇಟ್ಟಿದ್ದ ಚಿನ್ನದ ಸರವನ್ನು ಕಳ್ಳತನ ಮಾಡಿದ್ದ. ಈ ಸಂಬಂಧ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: ಸಿಡಿ ಕೇಸ್​: ನಾಳೆ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗ್ತಾರಾ ಮಾಜಿ ಸಚಿವ?

ಆರೋಪಿಯ ಬಂಧನದಿಂದ ಕೆಂಗೇರಿ ಪೊಲೀಸ್ ಠಾಣೆಯಲ್ಲಿ 1 ಕನ್ನಗಳ್ಳತನ, 2 ಮನೆಗಳ್ಳತನ ಹಾಗೂ 2 ಸಾಮಾನ್ಯ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ.

ಆರೋಪಿಯ ಮೇಲೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ 32 ಕ್ಕೂ ಅಧಿಕ ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.