ಬೆಂಗಳೂರು: ನಗರದಲ್ಲಿ ಮನೆ ಮುಂದೆ ನಿಲ್ಲಿಸುವ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಜ್ಞಾನ ಭಾರತಿ ಪೊಲೀಸ್ ಠಾಣೆ ಸಿಬ್ಬಂದಿ ಬಂಧಿಸಿದ್ದಾರೆ.
ಜ್ಞಾನ ಭಾರತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನದ ದೂರುಗಳು ದಾಖಲಾಗಿದ್ದವು. ಪೊಲೀಸರು ತನಿಖೆ ನಡೆಸಿ ಆರೋಪಿ ಸಂಪತ್ ಎಂಬಾತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮತ್ತಷ್ಟು ಕಳ್ಳತನದ ಪ್ರಕರಣಗಳು ಬೆಳಕಿಗೆ ಬಂದಿವೆ.
ಓದಿ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು
ಸದ್ಯಕ್ಕೆ ಬಂಧಿತನಿಂದ ರೂ. 3,50,000 ಬೆಲೆ ಬಾಳುವ 4 ಬಜಾಜ್ ಪಲ್ಸರ್ ಬೈಕ್ ವಶಕ್ಕೆ ಪಡೆದ ಜ್ಞಾನ ಭಾರತಿ ಪೊಲೀಸ್ ಠಾಣೆ ಸಿಬ್ಬಂದಿ, ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.