ETV Bharat / state

ಮಾಹಿತಿ ನೀಡದ ಆರೋಪ: ಮಹೇಶ್​ ಜೋಶಿಗೆ ವಿಧಿಸಿದ್ದ ದಂಡಕ್ಕೆ ತಡೆ ನೀಡಿದ ಹೈಕೋರ್ಟ್ ದ್ವಿಸದಸ್ಯ ಪೀಠ - ಮಹೇಶ್‌ ಜೋಶಿ ದೂರದರ್ಶನದ ಸಾರ್ವಜನಿಕ ಮಾಹಿತಿ ಅಧಿಕಾರಿ

ಮಹೇಶ್‌ ಜೋಶಿ ದೂರದರ್ಶನದ ಸಾರ್ವಜನಿಕ ಮಾಹಿತಿ ಅಧಿಕಾರಿಯಾಗಿದ್ದ ವೇಳೆ ದೂರದರ್ಶನಕ್ಕೆ ಸಂಬಂಧಿಸಿದಂತೆ ಮಾಹಿತಿ ಕೋರಿ ಎಸ್‌. ಭಜಂತ್ರಿ ಅವರು 2009ರ ಫೆಬ್ರವರಿ 26 ರಂದು ಅರ್ಜಿ ಸಲ್ಲಿಸಿದ್ದರು. ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿ ನೀಡದಿದ್ದಕ್ಕೆ ಹೈಕೋರ್ಟ್​ನ ಏಕಸದಸ್ಯ ಪೀಠ 25 ಸಾವಿರ ರೂ ದಂಡ ವಿಧಿಸಿದೆ.

high court
ಹೈಕೋರ್ಟ್​
author img

By

Published : May 23, 2023, 8:54 PM IST

ಬೆಂಗಳೂರು:ಈ ಹಿಂದೆ ಬೆಂಗಳೂರಿನ ದೂರದರ್ಶನ ಕೇಂದ್ರದ ಸಹಾಯಕ ನಿರ್ದೇಶಕ ಹಾಗೂ ಕೇಂದ್ರ ಮಾಹಿತಿ ಅಧಿಕಾರಿಯಾಗಿದ್ದ ಹಾಲಿ ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷ ಮಹೇಶ್​ ಜೋಷಿ ಅವರಿಗೆ ಹೈಕೋರ್ಟ್​ನ ಏಕ ಸದಸ್ಯ ಪೀಠ ವಿಧಿಸಿದ್ದ 25 ಸಾವಿರ ರೂ ದಂಡಕ್ಕೆ ದ್ವಿಸದಸ್ಯ ಪೀಠ ತಡೆ ನೀಡಿದೆ. ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಾ ಮಹೇಶ್​ ಜೋಶಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್​.ಟಿ.ನರೇಂದ್ರ ಪ್ರಸಾದ್​ ಮತ್ತು ಎಸ್​.ರಾಜಯ್ಯ ಅವರಿದ್ದ ನ್ಯಾಯಪೀಠ, ಮುಂದಿನ ವಿಚಾರಣೆ ವರೆಗೂ ಏಕ ಸದಸ್ಯ ಪೀಠಕ್ಕೆ ತಡೆ ನೀಡಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ ಏನು ?: ಮಹೇಶ್‌ ಜೋಶಿ ದೂರದರ್ಶನದ ಸಾರ್ವಜನಿಕ ಮಾಹಿತಿ ಅಧಿಕಾರಿಯಾಗಿದ್ದಾಗ ದೂರದರ್ಶನಕ್ಕೆ ಸಂಬಂಧಿಸಿದಂತೆ ಎಸ್‌. ಭಜಂತ್ರಿ ಎಂಬ ವ್ಯಕ್ತಿಯೊಬ್ಬರು 2009ರ ಫೆಬ್ರವರಿ 26 ರಂದು ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಮಾಹಿತಿ ನೀಡಿರಲಿಲ್ಲ. ಹಾಗಾಗಿ, ಅವರು ಎರಡನೇ ಮೇಲ್ಮನವಿ ಪ್ರಾಧಿಕಾರದ ಮೊರೆ ಹೋಗಿದ್ದರು. ಆ ಪ್ರಾಧಿಕಾರ ಅರ್ಜಿದಾರರಿಗೆ ಮಾಹಿತಿ ನೀಡುವಂತೆ ಆದೇಶಿಸಿತ್ತು.

ಅದರಂತೆ ಮಾಹಿತಿ ಒದಗಿಸುವುದನ್ನು ಬಿಟ್ಟು, ಮೇಲ್ಮನವಿ ಪ್ರಾಧಿಕಾರದ ಆದೇಶವನ್ನೇ ಅರ್ಜಿದಾರರು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದರು. ಆಗ ಏಕ ಸದಸ್ಯಪೀಠ, ಮಾಹಿತಿ ಹಕ್ಕು ಕಾಯಿದೆಯಡಿ ಸಾರ್ವಜನಿಕ ಮಾಹಿತಿ ಅಧಿಕಾರಿ(ಪಿಐಒ)ಗೆ ಮೇಲ್ಮನವಿ ಸಲ್ಲಿಸುವ ಅಧಿಕಾರವಿಲ್ಲ ಎಂದು ಆದೇಶ ನೀಡಿತ್ತುತ್ತಲ್ಲದೆ, ಅರ್ಜಿ ವಜಾಗೊಳಿಸಿ 25 ಸಾವಿರ ರೂ. ದಂಡ ವಿಧಿಸಿತ್ತು.

ಮೊದಲನೇ ಮೇಲ್ಮನವಿ ಪ್ರಾಧಿಕಾರವ 15 ದಿನದಲ್ಲಿ ಮಾಹಿತಿ ಒದಗಿಸುವಂತೆ 2009ರ ಮೇ 5ರಂದು ಸೂಚನೆ ನೀಡಿತ್ತು. ಆದರೂ ಮಾಹಿತಿ ಒದಗಿಸಿರಲಿಲ್ಲ. ಇದರಿಂದ ಅರ್ಜಿದಾರರು 2009ರ ಸೆಪ್ಟೆಂಬರ್​ 21 ರಂದು ಎರಡನೇ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಎರಡನೇ ಮೇಲ್ಮನವಿ ಪ್ರಾಧಿಕಾರ ಕೇಳಿದ ಮಾಹಿತಿಯನ್ನು 10 ದಿನದಲ್ಲಿ ಒದಗಿಸುವಂತೆ ಸೂಚನೆ ನೀಡಿದ್ದರು.

ಈ ಸಂಬಂಧ ಸಿಐಪಿಒ ಅವರಿಗೆ ಸಂಸ್ಥೆಯ ಇತರ ಅಧಿಕಾರಿಗಳು ದೂರು ಸಲ್ಲಿಸಿದ್ದರು. ಅಲ್ಲದೇ, ದೂರಿಗೆ ಸಂಬಂಧಿಸಿದಂತೆ ಕಾಯಿದೆಯ ಮೂಲಕ ಮಾಹಿತಿ ಪಡೆದು ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಹೀಗಾಗಿ ಮಾಹಿತಿಯನ್ನು ನೀಡುವುದಕ್ಕೆ ನಿರಾಕರಿಸಿರುವುದಾಗಿ ತಿಳಿಸಿದ್ದರು.

ಏಕ ಸದಸ್ಯದ ಪೀಠದ ಆದೇಶದಲ್ಲೇನಿತ್ತು ?: ಮಾಹಿತಿ ಹಕ್ಕು ಕಾಯಿದೆಯಡಿ ಪ್ರಕಾರ ಸಾರ್ವಜನಿಕರು ಯಾವುದೇ ಮಾಹಿತಿ ಕೇಳಿದರೂ ಸಂಬಂಧಪಟ್ಟ ಅಧಿಕಾರಿಗಳು ನಿರಾಕರಿಸುವಂತಿಲ್ಲ. ಕೋರಿದ ಮಾಹಿತಿಗೆ ಕಾರಣವನ್ನು ನೀಡಿಲ್ಲ ಎಂಬುದಾಗಿ ಸಬೂಬು ನೀಡಿ, ಮಾಹಿತಿ ನೀಡುವ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಅರ್ಜಿದಾರರ ವಾದ ಅಂಗೀಕರಿಸಿದಲ್ಲಿ ಕಾಯ್ದೆಯನ್ನು ನಿಷ್ಪ್ರಯೋಜಕ ಗೊಳಿಸಬೇಕಾಗುತ್ತದೆ ಎಂದು ಪೀಠ ತಿಳಿಸಿದೆ.

ಕಾಯ್ದೆ ಪ್ರಕಾರ ಮಾಹಿತಿ ಅಧಿಕಾರಿಯು ಸಾರ್ವಜನಿಕರು ಕೇಳಿದ ಮಾಹಿತಿಯನ್ನು ನಿಯಮಗಳ ಪ್ರಕಾರ ಒದಗಿಸಬೇಕಾಗುತ್ತದೆ. ಇದನ್ನು ಹೊರತು ಪಡಿಸಿ ಇತರ ಅಧಿಕಾರ ಇಲ್ಲ. ಆದರೆ, ಮೇಲ್ಮನವಿ ಪ್ರಾಧಿಕಾರ ನೀಡಿದ ಆದೇಶ ಪಾಲಿಸುವ ಬದಲು ಅದನ್ನು ಪ್ರಶ್ನೆ ಮಾಡುವುದಕ್ಕೆ ಮುಂದಾಗಿದ್ದಾರೆ. ಜತೆಗೆ, ಈ ಅರ್ಜಿ ಸಲ್ಲಿಸುವುದಕ್ಕೆ ಯಾವುದೇ ಅಧಿಕಾರವನ್ನು ಹೊಂದಿಲ್ಲ. ಹೀಗಾಗಿ ಅರ್ಜಿ ವಿಚಾರಣೆಗೆ ಅರ್ಹವಿಲ್ಲ ಎಂದು ತಿಳಿಸಿ, 25 ಸಾವಿರ ರೂ.ಗಳ ದಂಡ ವಿಧಿಸಿ ಆದೇಶಿಸಿತ್ತು. ಅಲ್ಲದೇ ಈ ಮೊದಲು ಮಾಹಿತಿ ಹಕ್ಕು ಮೇಲ್ಮನವಿ ಪ್ರಾಧಿಕಾರ 25 ಸಾವಿರ ರೂ.ಗಳ ದಂಡ ವಿಧಿಸಿದ್ದ ಕ್ರಮವನ್ನು ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು.

ಇದನ್ನೂಓದಿ:ಯುಪಿಎಸ್‌ಸಿ ಪರೀಕ್ಷೆಯಲ್ಲಿ ಡಾ ರಾಜ್​ಕುಮಾರ್ ಅಕಾಡೆಮಿಯಿಂದ 11 ಮಂದಿ ಪಾಸ್..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.