ETV Bharat / state

ಮತದಾರರಿಗೆ ತವಾ ಹಂಚಿಕೆ ಆರೋಪ; ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಡಿ.ಕೆ‌.ಸುರೇಶ್ ವಿರುದ್ಧ ಪ್ರಕರಣ

ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹಾಗು ಸಂಸದ ಡಿ.ಕೆ‌.ಸುರೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.

Case against Congress candidate Kusuma and DK Suresh
ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ್ತು ಡಿ.ಕೆ‌.ಸುರೇಶ್ ವಿರುದ್ಧ ಪ್ರಕರಣ
author img

By

Published : Apr 7, 2023, 10:18 PM IST

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರನ್ನು ಸೆಳೆಯುವ ಕಾರ್ಯಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಮುಂದಾಗಿದ್ದು, ಇದೀಗ ಮತದಾರಿಗೆ ಆಮಿಷವೊಡ್ಡಿದ ಆರೋಪದಡಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಹಾಗೂ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಮೂವರ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಕ್ಷೇತ್ರದಲ್ಲಿ ಮತದಾರರಿಗೆ ತವಾ ಹಂಚುತ್ತಿದ್ದ ಬಗ್ಗೆ ಮಾಹಿತಿ ಪಡೆದ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದು, ಸ್ಥಳದಲ್ಲಿದ್ದವರು ಪರಾರಿಯಾಗಿದ್ದಾರೆ. ಈ ಸಂದರ್ಭದಲ್ಲಿ ಓರ್ವ ಆರೋಪಿ ಸಿಕ್ಕಿಬಿದ್ದಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಪತ್ತೆಯಾದ ತವಾ ಬಾಕ್ಸ್​ಗಳನ್ನು ಪರಿಶೀಲಿಸಿದಾಗ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹಾಗೂ ಡಿ.ಕೆ.ಸುರೇಶ್ ಭಾವಚಿತ್ರಗಳು ಕಂಡುಬಂದಿದೆ. ಸದ್ಯ 3 ಕರ್ಟನ್ ಬಾಕ್ಸ್ ಹಾಗೂ 3 ತವಾ ಬಾಕ್ಸ್​ಗಳನ್ನ ವಶಕ್ಕೆ‌ ಪಡೆಯಲಾಗಿದ್ದು, ಚುನಾವಣಾ ಅಧಿಕಾರಿಗಳು ನೀಡಿದ ದೂರಿನನ್ವಯ ಕೇಸು ದಾಖಲಾಗಿದೆ.

ಇದನ್ನೂ ಓದಿ : ಫೋಟೋ ವೈರಲ್: ದೂರು ನೀಡಲು ನಿರ್ಧರಿಸಿದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.