ETV Bharat / state

ಮಗಳ ಮೇಲೆ ಅತ್ಯಾಚಾರ; ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ - ಏಳು ಲಕ್ಷ ಪರಿಹಾರ

ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ 2022ರಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
author img

By ETV Bharat Karnataka Team

Published : Oct 20, 2023, 2:29 PM IST

Updated : Oct 20, 2023, 5:36 PM IST

ಬೆಂಗಳೂರು: ಮಗಳ ಮೇಲೆ ಅತ್ಯಾಚಾರ ಎಸಗಿದ್ದ ದುರುಳನಿಗೆ ಇಪ್ಪತ್ತು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಬೆಂಗಳೂರಿನ ಪೋಕ್ಸೋ ಪ್ರಕರಣಗಳ ನ್ಯಾಯಾಲಯ ತೀರ್ಪು ನೀಡಿದೆ. 2022ರಲ್ಲಿ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಮಗಳ ಮೇಲೆ 38 ವರ್ಷ ವಯಸ್ಸಿನ ತಂದೆ ನಿರಂತರ ಅತ್ಯಾಚಾರವೆಸಗಿದ್ದನು. ನೊಂದ ಬಾಲಕಿಯ ತಾಯಿ ನೀಡಿದ ದೂರಿನನ್ವಯ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ತನಿಖೆ ನಡೆಸಿದ್ದ ಅಂದಿನ ಠಾಣಾ ಇನ್​ಸ್ಪೆಕ್ಟರ್ ಲೋಹಿತ್.ಬಿ.ಎನ್, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಧೀಶೆ ಎನ್. ನರಸಮ್ಮ, ಅಪರಾಧಿಗೆ ದಂಡಸಮೇತ ಜೈಲು ಶಿಕ್ಷೆ ವಿಧಿಸಿದ್ದಾರೆ. ಬಾಲಕಿಗೆ ಕಾನೂನು ಪ್ರಾಧಿಕಾರದಿಂದ 7 ಲಕ್ಷ ರೂ ಪರಿಹಾರ ನೀಡುವಂತೆ ಶಿಫಾರಸು ಮಾಡಿದ್ದಾರೆ.

ಉದ್ಯೋಗದ ಆಸೆ ತೋರಿಸಿ ಅತ್ಯಾಚಾರ: ಉದ್ಯೋಗ ಕೊಡಿಸುವುದಾಗಿ ಹೇಳಿ ಯುವತಿಯೊಬ್ಬಳನ್ನು ಹೈದರಾಬಾದ್​ನಿಂದ ಉತ್ತರ ಪ್ರದೇಶದ ಲಕ್ನೋಗೆ ಕರೆಯಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಪ್ರಕರಣದಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಮೂವರನ್ನು ಬಂಧಿಸಲಾಗಿತ್ತು.

ಹೈದರಾಬಾದ್​ ಮೂಲದ ಮನೀಷ್ ಶರ್ಮಾ ಎಂಬಾತ ಹಾಗೂ ಸಂತ್ರಸ್ತೆ ಸ್ನೇಹಿತರಾಗಿದ್ದರು. ಯುವತಿಗೆ ಈತ ಉತ್ತರಪ್ರದೇಶದ ಲಕ್ನೋದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿದ್ದನು. ಗೆಳೆಯನ ಮಾತು ಕೇಳಿ ಯುವತಿ ಲಕ್ನೋಗೆ ತೆರಳಿದ್ದಳು. ಅಲ್ಲಿ ಮನೀಷ್​, ಯುವತಿಯನ್ನು ಬರಮಾಡಿಕೊಂಡು ಹೊಟೇಲೊಂದರಲ್ಲಿ ಇರಿಸಿ, ಅಲ್ಲೇ ಇರುವಂತೆ ಹೇಳಿದ್ದನು. ಮರುದಿನ ಮನೀಷ್​ ತನ್ನಿಬ್ಬರು ಸ್ನೇಹಿತರೊಂದಿಗೆ ಹೊಟೇಲ್​ ಕೊಠಡಿಗೆ ಹೋಗಿದ್ದು, ಮೂವರು ಮಾತನಾಡಿ, ಯುವತಿ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಯುವತಿ ದೂರಿನಲ್ಲಿ ಹೇಳಿದ್ದಳು. ಪ್ರಕರಣ ದಾಖಲಿಸಿಕೊಂಡಿದ್ದ ಜಾನಕೀಪುರ ಪೊಲೀಸರು ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು.

ಬಾಲಕಿ ಮೇಲೆ ಸ್ನೇಹಿತರಿಂದ ಅತ್ಯಾಚಾರ: ವಾಕಿಂಗ್​ಗೆಂದು ಹೊರಟಿದ್ದ ಬಾಲಕಿ ಮೇಲೆ ಆಕೆಯ ಸ್ನೇಹಿತರೇ ಅತ್ಯಾಚಾರ ಮಾಡಿದ್ದ ಘಟನೆ ಇತ್ತೀಚೆಗೆ ಜಾರ್ಖಂಡ್​ನ ರಾಂಚಿಯಲ್ಲಿ ನಡೆದಿತ್ತು. ಹರಿದ ಬಟ್ಟೆಯಲ್ಲೇ ಬಂದು ಪೊಲೀಸ್​ ಠಾಣೆಗೆ ಬಂದು ಬಾಲಕಿ ದೂರು ನೀಡಿದ್ದಳು. ದೂರಿನ ಅನ್ವಯ ಪೊಲೀಸರು ಆರು ಜನರನ್ನು ಬಂಧಿಸಿದ್ದರು. ಅದರಲ್ಲಿ ಐವರು ಅಪ್ರಾಪ್ತರಾಗಿದ್ದರು.

ಇದನ್ನೂ ಓದಿ: 5ನೇ ತರಗತಿ ವಿದ್ಯಾರ್ಥಿನಿ ಅತ್ಯಾಚಾರ.. ಆರೋಪಿಯನ್ನು ಒಪ್ಪಿಸುವಂತೆ ಆಗ್ರಹಿಸಿ ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Last Updated : Oct 20, 2023, 5:36 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.