ETV Bharat / state

ದೇಶದ್ರೋಹ ಆರೋಪ : ವಿದ್ಯಾರ್ಥಿಗೆ ಜಾಮೀನು ನಿರಾಕರಿಸಿದ ಕೋರ್ಟ್

ಆರೋಪಿ 2019ರ ಫೆಬ್ರವರಿ ತಿಂಗಳಲ್ಲಿ ಪುಲ್ವಾಮಾ ದಾಳಿ ಘಟನೆಯಲ್ಲಿ ಹುತಾತ್ಮರಾಗಿದ್ದ 40 ಮಂದಿ ಸಿಆರ್​ಪಿಎಫ್​ ಭದ್ರತಾ ಪಡೆಯ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಈ ಸಂಬಂಧ ಸಿಸಿಬಿ ಪೊಲೀಸರು 2019ರ ಫೆಬ್ರವರಿ 18ರಂದು ಆರೋಪಿ ಯುವಕನನ್ನು ಬಂಧಿಸಿದ್ದರು.

Accused of treason
ದೇಶದ್ರೋಹ ಆರೋಪ : ವಿದ್ಯಾರ್ಥಿಗೆ ಜಾಮೀನು ನಿರಾಕರಿಸಿದ ಕೋರ್ಟ್
author img

By

Published : Jan 1, 2021, 5:18 PM IST

ಬೆಂಗಳೂರು : ಪುಲ್ವಾಮಾ ದಾಳಿ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿ, ದೇಶದ್ರೋಹ ಆರೋಪದಡಿ ಬಂಧನಕ್ಕೆ ಒಳಗಾಗಿರುವ ವಿದ್ಯಾರ್ಥಿಗೆ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.

ದೇಶದ್ರೋಹ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ರಶೀದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನಗರದ 51 ನೇ ಹೆಚ್ಚುವರಿ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಆರ್. ಎಚ್. ವೆಂಕಟೇಶ್ ಅವರು ಜಾಮೀನು ನೀಡಲು ನಿರಾಕರಿಸಿದ್ದಾರೆ.

ನಗರದ ಕಾಚರಕನಹಳ್ಳಿ ನಿವಾಸಿಯಾಗಿರುವ ರಶೀದ್ ಈತ ಬಿಇ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದಲ್ಲಿ 4 ನೇ ಸೆಮಿಸ್ಟರ್ ಓದುತ್ತಿದ್ದ. ಈತ 2019ರ ಫೆಬ್ರವರಿ ತಿಂಗಳಲ್ಲಿ ಪುಲ್ವಾಮಾ ದಾಳಿ ಘಟನೆಯಲ್ಲಿ ಹುತಾತ್ಮರಾಗಿದ್ದ 40 ಮಂದಿ ಸಿಆರ್​ಪಿಎಫ್​ ಭದ್ರತಾ ಪಡೆಯ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ.

ಈ ಸಂಬಂಧ ಸಿಸಿಬಿ ಪೊಲೀಸರು 2019ರ ಫೆಬ್ರವರಿ 18ರಂದು ಆರೋಪಿ ಯುವಕನನ್ನು ಬಂಧಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಭದ್ರತಾಪಡೆ ಸಾವಿನ ಕುರಿತು ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ಹಾಗೂ ಧಾರ್ಮಿಕ ಭಾವನೆ ಕೆರಳಿಸುವ ರೀತಿಯಲ್ಲಿ ಪೋಸ್ಟ್ ಹಾಕಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 153 ಎ, 124ಎ, 201 ಹಾಗೂ ಯುಎಪಿಎ ಸೆಕ್ಷನ್ 16 ಅಡಿ ಪ್ರಕರಣ ದಾಖಲಿಸಿದ್ದರು.

ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿ 2019ರಲ್ಲಿಯೇ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ, ನ್ಯಾಯಾಲಯ ಅರ್ಜಿ ತಿರಸ್ಕರಿಸಿತ್ತು. ಮತ್ತೆ ಎರಡನೇ ಬಾರಿ ಅರ್ಜಿ ಸಲ್ಲಿಸಿದ್ದ ಆರೋಪಿ ರಶೀದ್, ತಾನು ಪ್ರಕರಣದಲ್ಲಿ ಸಂಪೂರ್ಣ ಅಮಾಯಕ. ಜತೆಗೆ ವೃದ್ಧ ತಂದೆ ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ಇದೆ. ಹೀಗಾಗಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.