ETV Bharat / state

ಲೋಕಾಯುಕ್ತ ಅಧಿಕಾರಿಯ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗಳಿಂದ ಸುಲಿಗೆ ಮಾಡುತ್ತಿದ್ದ ಆರೋಪಿ ಬಂಧನ

ಆರೋಪಿ ವಿರುದ್ಧ ಈ ಹಿಂದೆ ಕಳ್ಳತನ ಪ್ರಕರಣಗಳು ಸೇರಿದಂತೆ ಬೆಂಗಳೂರು ಹಾಗೂ ಆಂಧ್ರಪ್ರದೇಶದ ಠಾಣೆಗಳಲ್ಲಿ ಹಣ ವಸೂಲಿ ಮಾಡಿರುವ ಪ್ರಕರಣಗಳು ದಾಖಲಾಗಿವೆ.

Accused arrested
ಆರೋಪಿ ಬಂಧನ
author img

By ETV Bharat Karnataka Team

Published : Jan 2, 2024, 3:25 PM IST

ಬೆಂಗಳೂರು: ಲೋಕಾಯುಕ್ತ ಅಧಿಕಾರಿಯ ಸೋಗಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿಯ ಪೂರ್ವ ವಿಭಾಗದ ಸಂಘಟಿತ ಅಪರಾಧ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಶ್ರೀನಾಥ್ ರೆಡ್ಡಿ ಬಂಧಿತ ಆರೋಪಿ.

ಇತ್ತೀಚಿಗೆ ಸರ್ಕಾರಿ ಅಧಿಕಾರಿಯೊಬ್ಬರಿಗೆ ಕರೆ ಮಾಡಿದ್ದ ಆರೋಪಿಯು ತಾನು ಲೋಕಾಯುಕ್ತ ಇನ್​ಸ್ಪೆಕ್ಟರ್ ಚಂದ್ರಶೇಖರ್ ಎಂದು ಪರಿಚಯಿಸಿಕೊಂಡು 'ನಮ್ಮ ಎಡಿಜಿಪಿ ಸಾಹೇಬರು ಮಾತನಾಡುತ್ತಾರೆ ಎಂದು ಹೇಳಿ, ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ಪಿಟಿಷನ್ ಇದೆ. ಇದನ್ನು ವಿಚಾರಣೆ ಮಾಡದೆ ಇಲ್ಲೇ ಮುಕ್ತಾಯಗೊಳಿಸಬೇಕಾದರೆ ಹಣ ನೀಡಬೇಕಾಗುತ್ತದೆ. ನೀವು ಹಣ ಕೊಟ್ಟರೆ ಪಿಟಿಷನ್‌ ಅನ್ನು ನಮ್ಮ ಟೆಕ್ನಿಕಲ್ ಟೀಂನಿಂದ ವಿಚಾರಣೆ ನಡೆಸಿ "ಬಿ" ರಿಪೋರ್ಟ್ ಸಲ್ಲಿಸಲಾಗುವುದು' ಎಂದು ತಿಳಿಸಿದ್ದ. ಹಣಕ್ಕಾಗಿ ಬೇಡಿಕೆ ಇಟ್ಟು ಸರ್ಕಾರಿ ಅಧಿಕಾರಿ ಸರ್ಕಾರಿ ಕೆಲಸ ಮಾಡದಂತೆ ಮಾನಸಿಕವಾಗಿ ತೊಂದರೆ ನೀಡುತ್ತಿರುವ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯ ಹೊಣೆ ವಹಿಸಿಕೊಂಡ ಸಿಸಿಬಿ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯು 'ತಾನೇ ಲೋಕಾಯುಕ್ತ ಇನ್​ಸ್ಪೆಕ್ಟರ್ ಚಂದ್ರಶೇಖರ್ ಎಂದು ಮಾತನಾಡಿದ್ದು ಮತ್ತು ಕೇಶವರಾವ್, ಎಡಿಜಿಪಿ ಅವರ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ, ಹೆದರಿಸಿ ಹಣ ವಸೂಲು ಮಾಡಲು ಪ್ರಯತ್ನಿಸಿರುವುದಾಗಿ' ತನಿಖಾ ಸಂದರ್ಭದಲ್ಲಿ ಒಪ್ಪಿಕೊಂಡಿದ್ದಾನೆ. ಹತ್ತನೇ ತರಗತಿಯವರೆಗೆ ವ್ಯಾಸಂಗ ಮಾಡಿದ್ದ ಆರೋಪಿ ಈ ಹಿಂದೆ 2007-08 ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ. ನಂತರ ಸಿನಿಮಾಗಳ ಪ್ರೇರಣೆಯಿಂದ ತನ್ನ ಕೃತ್ಯವನ್ನು ಬದಲಿಸಿದ್ದ. ಆಂಧ್ರಪ್ರದೇಶದಲ್ಲಿ ಸಹ ಸರ್ಕಾರಿ ನೌಕರರಿಗೆ ಇದೇ ರೀತಿ ಕರೆ ಮಾಡಿ, ಬೆದರಿಸಿ ಹಣ ವಸೂಲಿ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.

ಆರೋಪಿಯ ವಿರುದ್ಧ ಬೆಂಗಳೂರಿನ ಸಿದ್ದಾಪುರ, ಹೈಗ್ರೌಂಡ್ಸ್ ಮತ್ತು ಆಂಧ್ರದ ಅನಂತಪುರ ಜಿಲ್ಲೆಯ ಟೂ ಟೌನ್ ಹಾಗೂ ರಾಜಮಂಡ್ರಿಯ ತ್ರಿಟೌನ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಅಲ್ಲದೆ ಬೆಂಗಳೂರಿನ ಬೇಗೂರು, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಹೆಬ್ಬಗೋಡಿ, ಜಿಗಣಿ, ಸೂರ್ಯಸಿಟಿ, ಹಾಗೂ ಕೋಲಾರ ಟೌನ್​ಗಳಲ್ಲಿ ಮನೆ ಕಳವು ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ತಿಳಿದು ಬಂದಿದೆ.

ಲೋಕಾಯುಕ್ತ ಬಲೆಗೆ ಬಿದ್ದ ಹಿರಿಯೂರು ನಗರಸಭೆ ಸದಸ್ಯ, ಕ್ಲರ್ಕ್​: ಮತ್ತೊಂದೆಡೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರಸಭೆ ಪಕ್ಷೇತರ ಸದಸ್ಯ ಡಿ. ಸಣ್ಣಪ್ಪ ಹಾಗೂ ಕ್ಲರ್ಕ್ ರಮೇಶ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದು, ಇಬ್ಬರನ್ನೂ ಅಧಿಕಾರಿಗಳು ಬಂಧಿಸಿದ್ದಾರೆ.

ಪಿ.ನಟರಾಜು ಎಂಬುವರ ಮನೆಯ ಇ-ಸ್ವತ್ತು ಮಾಡಿಸಿಕೊಡಲು ಸಣ್ಣಪ್ಪ ಹಾಗೂ ರಮೇಶ್​ 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಿರಿಯೂರು ಬಸ್ ನಿಲ್ದಾಣದ ಬಳಿ ನಟರಾಜು ಅವರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದ ತಂಡ ದಾಳಿ ನಡೆಸಿದೆ.

ಇದನ್ನೂ ಓದಿ: ಕೋವಿಡ್ ಅಕ್ರಮ ಆರೋಪ; ಶಾಸಕ‌ ಯತ್ನಾಳ್ ಹೇಳಿಕೆ ಪಡೆಯುವಂತೆ ಲೋಕಾಯುಕ್ತಕ್ಕೆ ದೂರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.