ETV Bharat / state

ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರಲ್ಲೇ ಠಿಕಾಣಿ... ಬಾಂಗ್ಲಾ ಪ್ರಜೆಯನ್ನು ಜೈಲಿಗಟ್ಟಿದ ಕೋರ್ಟ್​ - undefined

ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಬೆಂಗಳೂರಲ್ಲಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ ಪ್ರಜೆಗೆ ಎಸಿಎಂಎಂ ನ್ಯಾಯಾಲಯ ಮೂರು ವರ್ಷ ಜೈಲು ಹಾಗೂ 5 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

ಬಾಂಗ್ಲಾದೇಶದ ನಹೀಮ್ ಬಂಧಿತ ಆರೋಪಿ
author img

By

Published : Apr 25, 2019, 8:00 AM IST

ಬೆಂಗಳೂರು: ನಕಲಿ ಆಧಾರ್ ಕಾರ್ಡ್, ಗುರುತಿನ ಚೀಟಿ, ಪಾಸ್‌ಪೋರ್ಟ್ ಸೃಷ್ಟಿಸಿಕೊಂಡು ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗೆ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ.

ಬಾಂಗ್ಲಾದೇಶದ ನಹೀಮ್ ಬಂಧಿತ ಆರೋಪಿ. ತಾನು ಭಾರತೀಯ ಎಂಬ ಸುಳ್ಳು ಮಾಹಿತಿ ನೀಡಿ ನಗರದಲ್ಲಿ ನೆಲೆಸಿದ್ದ. ಅದಕ್ಕೆ ಪೂರಕ ಎಂಬಂತೆ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾಸ್‌ಪೋರ್ಟ್‌ಗಳನ್ನು ಸೃಷ್ಟಿಸಿಕೊಂಡಿದ್ದ.

ನಹೀಮ್​ ವಿರುದ್ಧ ಐಪಿಸಿ ಸೆಕ್ಷನ್ 468, ಸೆಕ್ಷನ್ 471, ಸೆಕ್ಷನ್ 420 ಹಾಗೂ ಪಾಸ್‌ಪೋರ್ಟ್ ಕಾಯ್ದೆ ಕಲಂ 12ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಎಫ್​ಆರ್​ಆರ್​ಒ ಅಧಿಕಾರಿಗಳು ನೀಡಿದ ಸುಳಿವು ಆಧರಿಸಿ 2017ರಲ್ಲಿ ನಹೀಮ್ ಬಂಧಿಸಿದ್ದ ಹಲಸೂರು ಠಾಣೆ ಪೊಲೀಸರು ವಿಚಾರಣೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 10ನೇ ಎಸಿಎಂಎಂ ಕೋರ್ಟ್​ ಆರೋಪಿಗೆ 3 ವರ್ಷ ಜೈಲು ಹಾಗೂ 5 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

Intro:Body:

ಅಕ್ರಮವಾಗಿ ಭಾರತದಲ್ಲಿ‌‌ ನೆಲೆಸಿದ್ದ ಬಾಂಗ್ಲಾ ಪ್ರಜೆಗೆ 3 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ಬೆಂಗಳೂರು: ನಕಲಿ ಆಧಾರ್ ಕಾರ್ಡ್, ಗುರುತಿನ ಚೀಟಿ, ಪಾಸ್‌ಪೋರ್ಟ್ ಸೃಷ್ಟಿಸಿಕೊಂಡು ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ.
ಬಾಂಗ್ಲಾದೇಶದ ನಹೀಮ್ ಬಂಧಿತ ಆರೋಪಿ.
ಆರೋಪಿ ನಹೀಮ್ ನಗರದ ಹಲಸೂರು ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ನಾನು ಭಾರತೀಯ ಎಂಬ ಸುಳ್ಳು ಮಾಹಿತಿ ನೀಡಿ ನಗರದಲ್ಲಿ ನೆಲೆಸಿದ್ದ. ಅದಕ್ಕೆ ಪೂರಕವೆಂಬಂತೆ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾಸ್‌ಪೋರ್ಟ್‌ಗಳನ್ನು ಸೃಷ್ಟಿಸಿಕೊಂಡಿದ್ದ. ಆ ಹಿನ್ನೆಲೆಯಲ್ಲಿ ಹಲಸೂರು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಆತನ ವಿರುದ್ಧ ಐಪಿಸಿ ಸೆಕ್ಷನ್ 468 (ವಂಚನೆಯ ಉದ್ದೇಶದಿಂದ ನಕಲಿ ದಾಖಲೆಗಳ ಸೃಷ್ಟಿ), ಸೆಕ್ಷನ್ 471 (ರಾಷ್ಟ್ರೀಯ ಗುರುತಿನ ದಾಖಲೆಗಳ ನಕಲು) ಹೊಂದಿರುವುದು. 420 (ನಂಬಿಕೆ ದ್ರೋಹ) ಹಾಗೂ ಪಾಸ್‌ಪೋರ್ಟ್ ಕಾಯಿದೆ ಕಲಂ 12 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಸಾಕ್ಷಿಗಳ ವಿಚಾರಣೆ ನಡೆಸಿ ದೋಷಾರೋಪಣೆ ಸಲ್ಲಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಆರೋಪಿಗೆ 10 ನೇ ಎಸಿಎಂಎಂ ನ್ಯಾಯಾಲಯದಿಂದ 3 ವರ್ಷ ಜೈಲು ಹಾಗೂ 5 ಸಾವಿರ ರೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ಸದ್ಯ ಆರೋಪಿ ಜೈಲು ಸೇರಿದ್ದಾನೆ.Conclusion:Bharath

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.