ETV Bharat / state

ಸಚಿವ ಬಿ.ಸಿ ನಾಗೇಶ್ ಮನೆಗೆ ನುಗ್ಗಿ ದಾಂಧಲೆ ನಡೆಸಿದವರ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ - attack on minister nagesh house

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

CM Basavaraja Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Jun 1, 2022, 7:56 PM IST

ಬೆಂಗಳೂರು: ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

  • ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ NSUI ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕುಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು.@BCNagesh_bjp

    — Basavaraj S Bommai (@BSBommai) June 1, 2022 " class="align-text-top noRightClick twitterSection" data=" ">

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿದ ಎನ್​ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕುವೆಂಪುಗೆ ಅವಮಾನ ಆರೋಪ: ಸಚಿವ ಬಿ ಸಿ ನಾಗೇಶ್ ಮನೆ ಎದುರು ಪ್ರತಿಭಟನೆ

ಘಟನೆ: ಪರಿಷ್ಕೃತ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಕುವೆಂಪು ಅವರಿಗೆ ಅವಮಾನ ಮಾಡಿದ್ದು, ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎನ್​ಎಸ್​ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಕಾರ್ಯಕರ್ತರು ಇಂದು ತಿಪಟೂರಿನಲ್ಲಿ ಇರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.