ETV Bharat / state

ರಾಜ್ಯಕ್ಕೆ ರಸಗೊಬ್ಬರ ಕೊರತೆಯಾಗದಂತೆ ಕ್ರಮ: ಕೇಂದ್ರ ಸಚಿವ ಸದಾನಂದಗೌಡ ಭರವಸೆ - ಕೇಂದ್ರ ಸಚಿವ ಸದಾನಂದಗೌಡ ಭರವಸೆ ಸುದ್ದಿ

ನವದೆಹಲಿ ಪ್ರವಾಸದಲ್ಲಿರಯವ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡರನ್ನು ಭೇಟಿಯಾದರು. ರಸಗೊಬ್ಬರ ಪೂರೈಕೆ ಹಾಗೂ ವಿತರಣೆ ಕುರಿತು ಮಾತುಕತೆ ನಡೆಸಿದರು.

ಕೇಂದ್ರ ಸಚಿವ ಸದಾನಂದಗೌಡ ಭರವಸೆ
ಕೇಂದ್ರ ಸಚಿವ ಸದಾನಂದಗೌಡ ಭರವಸೆ
author img

By

Published : Aug 27, 2020, 1:26 PM IST

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯದ ಅವಶ್ಯಕತೆಗಿಂತಲೂ ಹೆಚ್ಚಿನ ರಸಗೊಬ್ಬರವನ್ನು ಪೂರೈಸಿದ್ದು, ಮುಂದಿನ ದಿನಗಳಲ್ಲೂ ಸಹ ರಸಗೊಬ್ಬರದ ಕೊರತೆಯಾಗುವುದಿಲ್ಲ ಎಂದು‌ ಡಿ.ವಿ.ಸದಾನಂದಗೌಡ ಭರವಸೆ ನೀಡಿದ್ದಾರೆ.

ನವದೆಹಲಿ ಪ್ರವಾಸದಲ್ಲಿರಯವ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡರನ್ನು ಭೇಟಿಯಾದರು. ರಸಗೊಬ್ಬರ ಪೂರೈಕೆ ಹಾಗೂ ವಿತರಣೆ ಕುರಿತು ಮಾತುಕತೆ ನಡೆಸಿದರು.

ಈ ಬಾರಿ ಉತ್ತಮ ಮಳೆಯಾಗಿದೆ. ಅಲ್ಲದೆ ಕೋವಿಡ್‌ನಿಂದಾಗಿ ಗ್ರಾಮೀಣ ಭಾಗದಲ್ಲಿ ಕೃಷಿಯೆಡೆಗೆ ರೈತಾಪಿವರ್ಗದ ಜೊತೆಗೆ ಯುವಜನತೆ ಕೃಷಿಗೆ ಹೆಚ್ಚು ಒತ್ತು ನೀಡಿರುವುದರಿಂದ ಈ ಬಾರಿ ಬಿತ್ತನೆಯೂ ಹೆಚ್ಚಾಗಿದೆ. ಆದ್ದರಿಂದ ಕೃಷಿಗೆ ಅಗತ್ಯವಾದ ರಸಗೊಬ್ಬರ ಹೆಚ್ಚಿನದಾಗಿ ಬಳಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ರೈತರಿಗೆ ಯಾವುದೇ ಕಾರಣಕ್ಕೂ ರಸಗೊಬ್ಬರದ ಕೊರತೆಯಾಗಲಿ, ಯೂರಿಯಾದ ಕೊರತೆಯಾಗಲಿ ಆಗದಂತೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಕೇಂದ್ರದ ಸಚಿವರೊಂದಿಗೆ ಚರ್ಚಿಸಿದರು.

ನಕಲಿ ಬೀಜ ತಡೆ, ನಕಲಿ ರಾಸಾಯನಿಕ ಗೊಬ್ಬರ ಜಾಲವನ್ನು ಭೇದಿಸುವಲ್ಲಿ ಕೃಷಿ‌ ಇಲಾಖೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಬಿ.ಸಿ.ಪಾಟೀಲ್, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ನಕಲಿ ಬೀಜ, ರಾಸಾಯನಿಕ ಗೊಬ್ಬರ ಹಾಗೂ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಅವರ ಪರವಾನಗಿ ರದ್ದುಗೊಳಿಸುವ ಬಗ್ಗೆಯೂ ಕೇಂದ್ರ ಸಚಿವರ ಜೊತೆ ಮಾಹಿತಿ ಹಂಚಿಕೊಂಡರು.

ಕೃಷಿ ಸಚಿವರ ಈ ದಿಟ್ಟ ಕ್ರಮ ಹಾಗೂ ರೈತರ ಬಗೆಗಿನ ಕಾಳಜಿಗೆ ಸದಾನಂದಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕರ್ನಾಟಕಕ್ಕೆ ಅವಶ್ಯಕ ಗೊಬ್ಬರವನ್ನು ಪೂರೈಸಲು ಅಧಿಕಾರಿಗಳಿಗೆ ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.