ಬೆಂಗಳೂರು: ''ಕೊಡಗು ಜಿಲ್ಲೆಯಲ್ಲಿ ಏರ್ ಸ್ಟ್ರಿಪ್ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನು ಜಿಲ್ಲಾಡಳಿತಕ್ಕೆ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು'' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೊಸರಾಜು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ಕೆಲವು ದಿನಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ ನಡೆಸಿದ ಕೆಡಿಪಿ ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂದಿಸಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ನನ್ನ ಗಮನ ಸೆಳೆಯಲಾಗಿತ್ತು.
![Krishnabaire Gowda air strip in Kodagu Action for space ಏರ್ ಸ್ಟ್ರಿಪ್ ನಿರ್ಮಾಣ ಕೃಷ್ಣಬೈರೇಗೌಡ](https://etvbharatimages.akamaized.net/etvbharat/prod-images/04-01-2024/kn-bng-10-ministers-meeting-script-7028080_04012024190503_0401f_1704375303_867.jpg)
ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಂದು (ಗುರುವಾರ) ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆಯನ್ನು ನಡೆಯಿತು. ಸಭೆಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ಹಾಗೂ ಆಡಳಿತ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಹಾಗೂ ಅನುಮತಿಯನ್ನು ದೊರಕಿಸಿಕೊಡುವ ಬಗ್ಗೆ ಚರ್ಚಿಸಲಾಯಿತು.
ಅಲ್ಲದೇ, ಕೊಡಗು ಜಿಲ್ಲೆಯಲ್ಲಿ ಏರ್ ಸ್ಟ್ರಿಪ್ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನು ಜಿಲ್ಲಾಡಳಿತಕ್ಕೆ ವರ್ಗಾವಣೆ ಮಾಡುವ ನಿಟ್ಟಿನಲ್ಲೂ ಚರ್ಚಿಸಲಾಯಿತು. ಈ ಎಲ್ಲಾ ವಿಷಯಗಳ ಬಗ್ಗೆ ಕಂದಾಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಚಿವ ಎನ್ ಎಸ್ ಬೋಸರಾಜು ತಿಳಿಸಿದರು. ಸಭೆಯಲ್ಲಿ ಶಾಸಕ ಎ ಎಸ್ ಪೊನ್ನಣ್ಣ ಮತ್ತು ಮಂತರ್ ಗೌಡ ಹಾಗೂ ಅಧಿಕಾರಿಗಳೂ ಉಪಸ್ಥಿತರಿದ್ದರು.
![Krishnabaire Gowda air strip in Kodagu Action for space ಏರ್ ಸ್ಟ್ರಿಪ್ ನಿರ್ಮಾಣ ಕೃಷ್ಣಬೈರೇಗೌಡ](https://etvbharatimages.akamaized.net/etvbharat/prod-images/04-01-2024/kn-bng-10-ministers-meeting-script-7028080_04012024190503_0401f_1704375303_173.jpg)
ಮಾನ್ವಿ ಹಾಗೂ ಸಿರವಾರದಲ್ಲಿ ಮಿನಿ ವಿಧಾನಸೌಧ: ಮಾನ್ವಿ ಹಾಗೂ ಸಿರವಾರದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಎನ್ ಎಸ್ ಬೋಸರಾಜು ತಿಳಿಸಿದರು.
![Krishnabaire Gowda air strip in Kodagu Action for place ಏರ್ ಸ್ಟ್ರಿಪ್ ನಿರ್ಮಾಣ ಕೃಷ್ಣಬೈರೇಗೌಡ](https://etvbharatimages.akamaized.net/etvbharat/prod-images/04-01-2024/kn-bng-10-ministers-meeting-script-7028080_04012024190503_0401f_1704375303_847.jpg)
ವಿಕಾಸಸೌಧದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ''ರಾಯಚೂರು ಜಿಲ್ಲೆಯ ಮಾನ್ವಿ ಹಾಗೂ ಸಿರವಾರ ತಾಲ್ಲೂಕಿನಲ್ಲಿ ಆಡಳಿತ ಭವನಗಳಿಲ್ಲ. ಇದರಿಂದಾಗಿ ಜನರು ಸರಕಾರಿ ಕಚೇರಿಗೆ ಭೇಟಿ ನೀಡುವುದು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾನ್ವಿ ಹಾಗೂ ಸಿರವಾರದಲ್ಲಿ ಮಿನಿ ವಿಧಾನಸೌದ ನಿರ್ಮಾಣಕ್ಕೆ ಅಗತ್ಯ ಅನುಮತಿ ನೀಡುವ ಬಗ್ಗೆ ಕಂದಾಯ ಸಚಿವರೊಂದಿಗೆ ಚರ್ಚಿಸಲಾಯಿತು. ಅಲ್ಲದೇ, ಕಂದಾಯ ಇಲಾಖೆಗೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಕೆಲವು ಸಮಸ್ಯೆಗಳ ಪರಿಹಾರಕ್ಕೆ ಕಂದಾಯ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ: ಏಳು ದಿನಗಳಲ್ಲಿ ಕನ್ನಡ ನಾಮಫಲಕ ಅಳವಡಿಸದಿದ್ದರೆ ವ್ಯಾಪಾರ ಪರವಾನಿಗೆ ರದ್ದು: ಬಿಬಿಎಂಪಿ ನೋಟಿಸ್