ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವ ಕುರಿತು ಹಿಂದುಳಿದ ವರ್ಗದ ಆಯೋಗದ ವರದಿ ಕೈಸೇರಿದ ನಂತರವೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರೂ ಆದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಆರ್.ಟಿ. ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗ ತನ್ನದೇ ಆದ ರೀತಿಯಲ್ಲಿ ಅಧ್ಯಯನ ನಡೆಸಿ ಕ್ರಮಬದ್ಧವಾಗಿ ವರದಿ ಕೊಡಲಿದೆ.
ಓದಿ:ಒಳ ಮೀಸಲಾತಿ ಎಂಬುವುದು ಅತಿ ಮೀಸಲಾತಿ : ಮುರುಘಾ ಶ್ರೀ
ಆಯೋಗವೇ ಮೀಸಲಾತಿ ಯಾವಾಗ ಕೊಡಬೇಕು ಅಂತ ನಿರ್ಧಾರ ಮಾಡುತ್ತದೆ. ಕಾನೂನು ಮತ್ತು ಸಂವಿಧಾನ ಬದ್ಧವಾಗಿ ಮೀಸಲಾತಿಗೆ ಆಯೋಗ ಕ್ರಮ ಕೈಗೊಳ್ಳುತ್ತದೆ ಎಂದರು.