ETV Bharat / state

ಸೋಂಕಿತರನ್ನು ದಾಖಲಿಸಿಕೊಳ್ಳದಿದ್ದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ; ಹೈಕೋರ್ಟ್​ಗೆ ಸರ್ಕಾರದ ಮಾಹಿತಿ - Disaster Act

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಪಿಐಎಲ್ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆ-2005 ರ ಸೆಕ್ಷನ್ 24(ಎಫ್) ಅಡಿ ಬಿಬಿಎಂಪಿಗೆ ಅಧಿಕಾರ ನೀಡಿ ಸರ್ಕಾರದ ಮಖ್ಯ ಕಾರ್ಯದರ್ಶಿಗಳು ಭಾನುವಾರ ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಶೇ. 50 ರಷ್ಟು ಹಾಸಿಗೆಗಳನ್ನು ಕೊರೊನಾ ಚಿಕಿತ್ಸೆಗೆ ಮೀಸಲಿಡುವಂತೆಯೂ ಖಾಸಗಿ ಆಸ್ಪತ್ರೆಗಳಿಗೆ ಆದೇಶಿಸಲಾಗಿದೆ ಎಂದು ತಿಳಿಸಿದರು.

ಸೋಂಕಿತರನ್ನು ದಾಖಲಿಸಿಕೊಳ್ಳದಿದ್ದರೆ ವಿಪತ್ತು ಕಾಯ್ದೆಯಡಿ ಕ್ರಮ

author img

By

Published : Jul 21, 2020, 12:06 AM IST

ಬೆಂಗಳೂರು : ಖಾಸಗಿ ಆಸ್ಪತ್ರೆಗಳು ಯಾವುದೇ ನೆಪ ಹೇಳದೆ ಕೊರೊನಾ ಸೋಂಕಿತರನ್ನು ದಾಖಲಿಸಿಕೊಳ್ಳಬೇಕು ಎಂದು ಆದೇಶ ಹೊರಡಿಸಲಾಗಿದ್ದು, ಚಿಕಿತ್ಸೆ ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕ್ರಮ ಜರುಗಿಸಲು ಬಿಬಿಎಂಪಿಗೆ ಅಧಿಕಾರ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಪಿಐಎಲ್ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆ-2005 ರ ಸೆಕ್ಷನ್ 24(ಎಫ್) ಅಡಿ ಬಿಬಿಎಂಪಿಗೆ ಅಧಿಕಾರ ನೀಡಿ ಸರ್ಕಾರದ ಮಖ್ಯ ಕಾರ್ಯದರ್ಶಿಗಳು ಭಾನುವಾರ ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಶೇ. 50 ರಷ್ಟು ಹಾಸಿಗೆಗಳನ್ನು ಕೊರೊನಾ ಚಿಕಿತ್ಸೆಗೆ ಮೀಸಲಿಡುವಂತೆಯೂ ಖಾಸಗಿ ಆಸ್ಪತ್ರೆಗಳಿಗೆ ಆದೇಶಿಸಲಾಗಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಶೇ. 50 ರಷ್ಟು ಹಾಸಿಗೆಗಳನ್ನು ಕೇವಲ ಕೋವಿಡ್ ರೋಗಿಗಳಿಗೆ ಮಾತ್ರವೇ ಅಥವಾ ಎಲ್ಲ ರೋಗಿಗಳಿಗೂ ಒಟ್ಟು ಸೇರಿಸಿ ಮೀಸಲಿರಿಸಲಾಗಿದೆಯೇ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಸರ್ಕಾರದ ಪರ ವಕೀಲರು ಕೊರೊನಾ ಚಿಕಿತ್ಸೆಗೆ ಮಾತ್ರವೇ ಮೀಸಲಿರಿಸಲು ಆದೇಶಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ತುಮಕೂರು ರಸ್ತೆಯ ವಸ್ತು ಪ್ರದರ್ಶನಾ ಕೇಂದ್ರದಲ್ಲಿ 7 ಸಾವಿರ ಬೆಡ್​ಗಳುಳ್ಳ ಕೋವಿಡ್ ಕೇರ್ ಸೆಂಟರ್ ಸಿದ್ಧಪಡಿಸಲಾಗುತ್ತಿದೆ. ಇನ್ನು ಸೋಂಕಿತರು ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಆಯ್ಕೆಯನ್ನು ರೋಗಿಗಳಿಗೆ ನೀಡಲಾಗಿದೆ ಎಂದರು.

ವಿಚಾರಣೆ ವೇಳೆ ವಕೀಲ ಎಚ್. ಸುನಿಲ್ ಕುಮಾರ್ ವಾದಿಸಿ, ನಗರದಲ್ಲಿ ಕೊರೊನಾ ವಾರಿಯರ್ಸ್​ಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಬಿಬಿಎಂಪಿ ಮಾರ್ಷಲ್ ಒಬ್ಬರು ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಒಂದು ತಿಂಗಳ ಮಗು ಕೂಡ ಚಿಕಿತ್ಸೆ ಲಭ್ಯವಾಗದೆ ಸಾವನ್ನಪ್ಪಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಿದರು.

ಇನ್ನು ವಕೀಲೆ ವಿದ್ಯುಲ್ಲತಾ ಅವರು ಪೀಠಕ್ಕೆ ಮಾಹಿತಿ ನೀಡಿ, ನಗರದಲ್ಲಿ 70 ಕ್ವಾರಂಟೈನ್ ಸೆಂಟರ್​ಗಳನ್ನು ಸ್ಥಾಪಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಆದರೆ, ಇವುಗಳಲ್ಲಿ 8 ಮಾತ್ರವೇ ಕಾರ್ಯ ನಿರ್ವಹಿಸುತ್ತಿವೆ. ಇಲ್ಲಿನ ಸಿಬ್ಬಂದಿಗೂ ಸುರಕ್ಷತಾ ಸಾಮಾಗ್ರಿಗಳನ್ನು ನೀಡಲಾಗಿಲ್ಲ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿ ಪೀಠ, ಸರ್ಕಾರ ಈ ವಿಚಾರದಲ್ಲಿ ಗಮನ ಹರಿಸಬೇಕು ಎಂದರು. ಸೋಂಕಿತರ ಮನೆಗಳ ಮುಂಭಾಗದಲ್ಲಿ ಕೊರೊನಾ ಎಚ್ಚರಿಕೆಯ ಪೋಸ್ಟರ್ ಹಚ್ಚುವುದಕ್ಕೆ ವಕೀಲರೊಬ್ಬರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇಂತಹ ಪೋಸ್ಟರ್ ಅನಗತ್ಯ ಮತ್ತು ಖಾಸಗಿತನದ ಉಲ್ಲಂಘನೆ ಎಂದು ಆರೋಪಿಸಿದರು. ಇದಕ್ಕೆ ಪೀಠ, ಈ ವಿಚಾರದಲ್ಲಿ ರೋಗಿಯ ಖಾಸಗಿತನಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿತು.

ಕ್ವಾರಂಟೈನ್ ವಿಚಾರ ಪ್ರಸ್ತಾಪಿಸಿದ ಪೀಠ ಸೋಂಕು ಲಕ್ಷಣಗಳಿದ್ದ ವ್ಯಕ್ತಿ ಪರೀಕ್ಷೆಗೊಳಗಾದ ಬಳಿಕ ಮತ್ತೆ ಹೋಮ್ ಕ್ವಾರಂಟೈನ್​ಗೆ ಒಳಗಾಗುವುದು ಅರ್ಥಹೀನ. ಪಾಸಿಟಿವ್ ಇದ್ದಲ್ಲಿ ಅವರು ಮತ್ತೆ ಮನೆಗೆ ಬಂದು ಕುಟುಂಬಸ್ಥರ ಜೊತೆ ಸೇರಿ ಕೊರೊನಾ ಹರಡಲು ಕಾರಣವಾಗುತ್ತಾರೆ. ಹೀಗಾಗಿ ಪ್ರತ್ಯೇಕ ಕ್ವಾರಂಟೈನ್ ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿತು. ಜತೆಗೆ ಪರೀಕ್ಷಾ ವರದಿಯನ್ನು ಶೀಘ್ರವಾಗಿ ಸಿದ್ಧಪಡಿಸಲು ಕ್ರಮ ಕೈಗೊಳ್ಳಬೇಕು ಮತ್ತು ರೋಗಿಗಳಿಗೆ ನೆಗೆಟಿವ್ ರಿಪೋರ್ಟ್ ಕೂಡ ನೀಡಬೇಕು ಎಂದು ಸೂಚಿಸಿ, ವಿಚಾರಣೆ ಮುಂದೂಡಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.