ETV Bharat / state

ಕೋವಿಡ್ ನಿರ್ವಹಣೆಗೆ ನಿಯೋಜನೆಗೊಂಡ ಸಿಬ್ಬಂದಿ ಗೈರಾದರೆ ಕ್ರಮ: ಸಿಎಂ ಎಚ್ಚರಿಕೆ - Bangalore Corona Case

ಕೊರೊನಾ ನಿರ್ವಹಣೆಯ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೇ ನಿರ್ಲಕ್ಷ್ಯ ತೋರಿರುವ ಹಲವು ಪ್ರಕರಣಗಳು ಗಮನಕ್ಕೆ ಬಂದಿವೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.

Action will be taken those who absent to Covid duty: CM Warning
ಕೋವಿಡ್ ನಿರ್ವಹಣೆಗೆ ನಿಯುಕ್ತಗೊಂಡ ಸಿಬ್ಬಂದಿ ಗೈರಾದರೆ ಕ್ರಮ: ಸಿಎಂ ಎಚ್ಚರಿಕೆ
author img

By

Published : Jul 2, 2020, 9:46 PM IST

ಬೆಂಗಳೂರು: ಕೋವಿಡ್-19 ನಿರ್ವಹಣೆಯ ಕರ್ತವ್ಯಕ್ಕೆ ನಿಯೋಜಿತಗೊಂಡ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ನಿರ್ವಹಣೆಯ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೇ ನಿರ್ಲಕ್ಷ್ಯ ತೋರಿರುವ ಹಲವು ಪ್ರಕರಣಗಳು ಗಮನಕ್ಕೆ ಬಂದಿವೆ. ಇಂತಹ ಲೋಪವನ್ನು ಸಹಿಸಲಾಗುವುದಿಲ್ಲ. ಅಂತಹವರ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಬ್ಬಂದಿ ವರ್ಗಕ್ಕೆ ಕಟು ಶಬ್ದಗಳ ಮೂಲಕ ಸಂದೇಶ ರವಾನಿಸಿದ್ದಾರೆ.

ಜಾಗತಿಕ ಸಂಕಷ್ಟದ ಸಮಯದಲ್ಲಿ ಹೆಚ್ಚಿನ ಮಾನವ ಸಂಪನ್ಮೂಲದ ಅಗತ್ಯವಿದೆ. ಎಲ್ಲರೂ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮೇಲುಗೈ ಸಾಧಿಸೋಣ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ಕರೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.