ETV Bharat / state

ಸಕ್ಕರೆ ಕಾರ್ಖಾನೆಗಳು ರೈತರಿಗೆ ಅನ್ಯಾಯ ಮಾಡಿರುವುದು ಕಂಡುಬಂದರೆ ಸೂಕ್ತ ಕ್ರಮ: ಸಚಿವ ಎಂಟಿಬಿ ‌ನಾಗರಾಜ್

ಐದು ವರ್ಷದ ಅವಧಿಯಲ್ಲಿ ಸಕ್ಕರೆ ಕಾರ್ಖಾನೆಗಳು ರೈತರಿಗೆ 77,890 ಕೋಟಿ ರೂ. ಪಾವತಿಸಬೇಕಾಗಿದೆ. ಇದರಲ್ಲಿ 76,518 ಕೋಟಿ ರೂ. ಪಾವತಿಸಲಾಗಿದೆ. 3878 ಕೋಟಿ ರೂ. ಪಾವತಿಸಬೇಕಾಗಿದ್ದು, ಈ ಮೊತ್ತವನ್ನು ರೈತರಿಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಜರುಗಿಸಲಾಗುವುದು. ಒಂದು ವೇಳೆ ಕಬ್ಬಿನ ಬಿಲ್​ ಬಾಕಿ ವಿಚಾರದಲ್ಲಿ ರೈತರಿಗೆ ಅನ್ಯಾಯ ಮಾಡುವುದು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

Minister MTB Nagaraj
ಸಚಿವ ಎಂ.ಟಿ.ಬಿ.‌ನಾಗರಾಜ್
author img

By

Published : Feb 5, 2021, 9:13 PM IST

ಬೆಂಗಳೂರು: ಸಕ್ಕರೆ ಕಾರ್ಖಾನೆಗಳ ಕಬ್ಬಿನ ಬಿಲ್​ ಬಾಕಿ ವಿಚಾರದಲ್ಲಿ ರೈತರಿಗೆ ಅನ್ಯಾಯ ಮಾಡುವುದು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಕ್ಕರೆ ಕಾರ್ಖಾನೆಗಳು ಸುಳ್ಳು ಹೇಳುತ್ತಿರುವ ಆರೋಪದ ಕುರಿತು ಸಭೆ ನಡೆಸಿ ಮಾಹಿತಿ ಪಡೆಯಲಾಗುವುದು ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ ಉತ್ತರಿಸಿದ ಅವರು, ಐದು ವರ್ಷದ ಅವಧಿಯಲ್ಲಿ ಸಕ್ಕರೆ ಕಾರ್ಖಾನೆಗಳು ರೈತರಿಗೆ 77,890 ಕೋಟಿ ರೂ. ಪಾವತಿಸಬೇಕಾಗಿದೆ. ಇದರಲ್ಲಿ 76,518 ಕೋಟಿ ರೂ. ಪಾವತಿಸಲಾಗಿದೆ. 3878 ಕೋಟಿ ರೂ. ಪಾವತಿಸಬೇಕಾಗಿದ್ದು, ಈ ಮೊತ್ತವನ್ನು ರೈತರಿಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಜರುಗಿಸಲಾಗುವುದು. ರಾಜ್ಯದಲ್ಲಿ 87 ಸಕ್ಕರೆ ಕಾರ್ಖಾನೆಗಳಿವೆ. ಬಹಳಷ್ಟು ಕಾರ್ಖಾನೆಗಳು ಕಬ್ಬಿನ ಬಿಲ್​​ ಪಾವತಿಸಿವೆ. ಕೆಲ ಕಾರ್ಖಾನೆಗಳು ಮಾತ್ರ ಬಾಕಿ ಉಳಿಸಿಕೊಂಡಿವೆ ಎಂದು ಹೇಳಿದರು.

ಗೋದಾಮಿನಲ್ಲಿ ಸಕ್ಕರೆ ಇಲ್ಲದಿದ್ದರೂ ಇದೆ ಎಂದು ಸುಳ್ಳು ಹೇಳಿ ಕೆಲವು ಸಕ್ಕರೆ ಕಾರ್ಖಾನೆಗಳು ಸರ್ಕಾರದ ದಿಕ್ಕು ತಪ್ಪಿಸುತ್ತಿವೆ ಎಂಬ ಆರೋಪದ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಿ ಸತ್ಯಾಂಶ ತಿಳಿದುಕೊಳ್ಳಲಾಗುವುದು. ಒಂದು ವೇಳೆ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿರುವುದು ಗೊತ್ತಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಕಬ್ಬು ಸರಬರಾಜು ಮಾಡಿದ ರೈತರಿಗೆ 14 ದಿನದಲ್ಲಿ ಕಾರ್ಖಾನೆಯು ನ್ಯಾಯ ಮತ್ತು ಲಾಭದಾಯಕ ಬೆಲೆ ಪಾವತಿಸಬೇಕಾಗಿದೆ. ಹಂಗಾಮು ಪ್ರಾರಂಭವಾಗುವ ಮುಂಚೆ ಸಕ್ಕರೆ ನಿರ್ದೇಶಾಲನವು ಕಾರ್ಖಾನೆವಾರು ಎಫ್‌ಆರ್‌ಪಿ ದರವನ್ನು ಪ್ರಕಟಿಸಿ ಅದರ ಅನುಸಾರ ರೈತರಿಗೆ ಕಬ್ಬಿನ ಬಿಲ್​ ಪಾವತಿಸುವಂತೆ ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ನಿರ್ದೇಶನ ನೀಡಲಾಗುತ್ತದೆ. ಆದರೂ ಕಬ್ಬು ದರ ಪಾವತಿಸದಿದ್ದರೆ ನೋಟಿಸ್ ನೀಡಲಾಗುತ್ತದೆ. ತದನಂತರವೂ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಬಹಳಷ್ಟು ಸಕ್ಕರೆ ಕಾರ್ಖಾನೆಯಲ್ಲಿ ಸಕ್ಕರೆ ಇಲ್ಲ. ಯಾವ ಕಾರ್ಖಾನೆಯಲ್ಲಿ ಎಷ್ಟು ಸಕ್ಕರೆ ಇದೆ ಎಂಬುದರ ಬಗ್ಗೆ ತನಿಖೆ ನಡೆಸಬೇಕು. ಕಾರ್ಖಾನೆಯಲ್ಲಿ ಸಕ್ಕರೆ ಇಲ್ಲದಿದ್ದರೂ ಇದೆ ಎಂದು ಸುಳ್ಳು ಹೇಳಿ ಸರ್ಕಾರದ ದಿಕ್ಕು ತಪ್ಪಿಸುತ್ತಿವೆ ಎಂದು ಗಂಭೀರ ಆರೋಪ ಮಾಡಿದರು.

ಓದಿ: ರಾಜ್ಯದಲ್ಲಿಂದು 430 ಮಂದಿಗೆ ಕೊರೊನಾ ದೃಢ: 3 ಸೋಂಕಿತರು ಬಲಿ‌

ಕಾಂಗ್ರೆಸ್ ಸದಸ್ಯರ ಆಕ್ಷೇಪ: ರಾಜ್ಯದ ಪುರಸಭೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ವಾಟರ್‌ ಮ್ಯಾನ್ ಮತ್ತು ವಾಲ್‌ ಮ್ಯಾನ್‌ಗಳಿಗೆ ವೇತನವು 2021ರ ಮಾರ್ಚ್‌ವರೆಗೆ ಬಿಡುಗಡೆ ಮಾಡಲಾಗಿದೆ ಎಂಬ ಸರ್ಕಾರದ ಉತ್ತರಕ್ಕೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ವಿಧಾನಸಭೆಯಲ್ಲಿ ನಡೆಯಿತು.

ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಸದಸ್ಯ ತುಕಾರಂ ಕೇಳಿದ ಪ್ರಶ್ನೆಗೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್, ಎಸ್‌ಎಫ್‌ಸಿ ವೇತನ ನಿಧಿಯಡಿ ಮಾರ್ಚ್ 2021ರವರೆಗೆ ಈಗಾಗಲೇ ವೇತನ ಬಿಡುಗಡೆ ಮಾಡಲಾಗಿದೆ ಎಂದು ಉತ್ತರ ನೀಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ತುಕಾರಂ, ಮಾರ್ಚ್ ತಿಂಗಳು ಇನ್ನು ಬಂದೇ ಇಲ್ಲ. ಆಗಲೇ ವೇತನ ಹೇಗೆ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಸಚಿವರು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರಾದರೂ ಯಾವುದೇ ಪ್ರಯೋಜವಾಗಲಿಲ್ಲ. ಉತ್ತರವನ್ನು ಪರಿಶೀಲನೆ ನಡೆಸಲಾಗುವುದು. ತಪ್ಪಾಗಿದ್ದರೆ ಸರಿಪಡಿಸುತ್ತೇವೆ ಎಂದು ಎಂಟಿಬಿ ನಾಗರಾಜ್ ಹೇಳಿದರು.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಎಂಟಿಬಿ ನಾಗರಾಜ್ ನೆರವಿಗೆ ಧಾವಿಸುವಂತೆ ಸಲಹೆ ನೀಡಿದರು. ನಂತರ ನೆರವಿಗೆ ಬಂದ ಬಸವರಾಜ ಬೊಮ್ಮಾಯಿ, ಭಾಷೆಯಲ್ಲಿ ವ್ಯತ್ಯಾಸವಾಗಿದೆ. ಸರ್ಕಾರದ ಮಟ್ಟದಲ್ಲಿ ಬಿಡುಗಡೆಯಾಗಿರುತ್ತದೆ. ಸ್ಥಳೀಯ ಮಟ್ಟದಲ್ಲಿ ಬಿಡುಗಡೆಯಾಗುವುದಿಲ್ಲ. ಹೀಗಾಗಿ ಆ ರೀತಿಯಾಗಿ ಉತ್ತರ ನೀಡಲಾಗಿದೆ ಎಂದು ಸಮಜಾಯಿಷಿ ನೀಡಿದರು.

ಕೈಬಿಟ್ಟ ಗೃಹಲಕ್ಷ್ಮಿ ಯೋಜನೆ: ಹೆಚ್ಚಿನ ಬೇಡಿಕೆ ಇಲ್ಲದ ಕಾರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಯನ್ನು ಕೈ ಬಿಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಬಂಡೆಪ್ಪ ಕಾಶೆಂಪೂರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಒಂದು ವರ್ಷಕ್ಕೆ ಸೀಮಿತವಾಗುವಂತೆ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದೆ. ಯೋಜನೆಯನ್ನು ಮುಂದುವರಿಸಲು ಹೆಚ್ಚಿನ ಬೇಡಿಕೆ ಇಲ್ಲ. ಹೀಗಾಗಿ ಯೋಜನೆಯನ್ನು ಕೈ ಬಿಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆಭರಣಗಳ ಮೇಲೆ ಶೇ. 3ರಷ್ಟು ಬಡ್ಡಿ ದರದಲ್ಲಿ 2019-20ನೇ ಸಾಲಿನಲ್ಲಿ 1015 ರೈತರಿಗೆ 1014.34 ಲಕ್ಷ ರೂ. ಸಾಲ ನೀಡಲಾಗಿದೆ. 2020-21ನೇ ಸಾಲಿನಿಂದ ಯೋಜನೆ ಕೈ ಬಿಡಲಾಗಿದೆ. ಬೇಡಿಕೆ ಇದ್ದಿದ್ದರೆ ಯೋಜನೆಯನ್ನು ಮುಂದುವರಿಸಬಹುದಿತ್ತು. ಆದರೆ ಬೇಡಿಕೆ ಇಲ್ಲದ ಕಾರಣ ಕೈಬಿಡಲಾಗಿದೆ ಎಂದು ತಿಳಿಸಿದರು.

ಈ ವೇಳೆ ಬಂಡೆಪ್ಪ ಕಾಶೆಂಪೂರ ಮಾತನಾಡಿ, ಯೋಜನೆಯಿಂದ ರೈತರಿಗೆ ಬಹಳಷ್ಟು ಉಪಯೋಗ ಇದೆ. ಹೀಗಾಗಿ ಯೋಜನೆಯನ್ನು ಮುಂದುವರೆಸಬೇಕು. ಆಭರಣಗಳ ಮೇಲೆ ಕಡಿಮೆ ಬಡ್ಡಿ ದರದಲ್ಲಿ ಯಾರು ಸಹ ಸಾಲ ನೀಡುವುದಿಲ್ಲ. ಹೆಚ್ಚಿನ ಪ್ರಚಾರ ಕೊರತೆಯಿಂದಾಗಿ ಬಹಳಷ್ಟು ಮಂದಿಗೆ ಮಾಹಿತಿ ಇಲ್ಲ. ಸರ್ಕಾರ ಪ್ರಚಾರ ಕೈಗೊಂಡು ಯೋಜನೆಯನ್ನು ಮುಂದುವರೆಸಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.