ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ವೈಖರಿ, ವಿರೋಧ ಪಕ್ಷಗಳ ಶಾಸಕರ ರೆಸಾರ್ಟ್ ವಾಸ್ತವ್ಯ ವಿರೋಧಿಸಿ, ಕಾಂಗ್ರೆಸ್ ಶಾಸಕರು ತಂಗಿರುವ ತಾಜ್ ವಿವಾಂತ ಹೋಟೆಲ್ ಮುಂದೆ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾದ್ರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಂದಿಸಿದ್ರು.
ತಾಜ್ ವಿವಾಂತ ಹೋಟೆಲ್ ಗೇಟ್ ಬಳಿ ಸಗಣಿ ಹಾಕುವ ಮೂಲಕ ವಿನೂತನ ಪ್ರತಿಭಟನೆಗೆ ಸಂಘಟನೆ ಅಧ್ಯಕ್ಷ ನಾಗೇಶ್ ನೇತೃತ್ವದಲ್ಲಿ ಸಿದ್ಧತೆ ನಡೆಸಲಾಗಿತ್ತು. ಆದರೆ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. ಹೀಗಾಗಿ ಪ್ರತಿಭಟನೆ ನಡೆಯಲಿಲ್ಲ.
ಈ ಬಗ್ಗೆ ಈಟಿವಿ ಭಾರತ ಜೊತೆ ಮಾತನಾಡಿದ ಪ್ರತಿಭಟನಾಕಾರ ಲಿಂಗರಾಜಗೌಡ, ಶಾಸಕರು ಸಚಿವರು ರೆಸಾರ್ಟ್ನಲ್ಲಿರುವ ಬದಲು ವಿಧಾನಸೌಧ ಅಥವಾ ತಮ್ಮ ತಮ್ಮ ಕ್ಷೇತ್ರಗಳಿಗೆ ಮರಳಬೇಕು ಎಂದು ಆಗ್ರಹಿಸಿದರು.