ಬೆಂಗಳೂರು: ಇಂದು ಬೆಳಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಕೊರೊನಾ ದೃಢಪಟ್ಟ ಬೆನ್ನಲ್ಲೇ ಅವರ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ, "ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ" ಎಂದು ಟ್ವೀಟ್ ಮಾಡಿದ್ದಾರೆ.
-
ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ.
— Nikhil Kumar (@Nikhil_Kumar_k) April 17, 2021 " class="align-text-top noRightClick twitterSection" data="
">ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ.
— Nikhil Kumar (@Nikhil_Kumar_k) April 17, 2021ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ.
— Nikhil Kumar (@Nikhil_Kumar_k) April 17, 2021
ಅಲ್ಲದೇ ತಮ್ಮ ತಂದೆಗೆ ಕೋವಿಡ್ ತಗುಲಿರುವ ಬಗ್ಗೆಯೂ ಟ್ವೀಟ್ ಮಾಡಿದ್ದು, "ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ ಮತ್ತು ದೇವರ ದಯೆಯಿಂದ ಆದಷ್ಟು ಬೇಗ ಗುಣಮುಖರಾಗಲಿದ್ದಾರೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಯಾವುದೇ ಆತಂಕ ಬೇಡ ಎಂದು ಮನವಿ ಮಾಡಿಕೊಳ್ಳುತ್ತೇನೆ" ಎಂದಿದ್ದಾರೆ.