ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಸಿದ ಆರೋಪ ಸಂಬಂಧ ಸ್ಯಾಂಡಲ್ವುಡ್ ನಟ, ನಿರ್ದೇಶಕ ಉಪೇಂದ್ರ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಉಪೇಂದ್ರ, ಒಂದು ವರ್ಗದ ಬಗ್ಗೆ ಅವಮಾನಕಾರಿಯಾಗಿ ಮಾತನಾಡಲು ನನಗೆ ಹುಚ್ಚೇ. ಅದರಿಂದ ನನಗಾಗುವ ಲಾಭವಾದರೂ ಏನು ಎಂದು ಪ್ರಶ್ನಿಸಿದ್ದಾರೆ.
ಶನಿವಾರ ತಮ್ಮ ಸಾಮಾಜಿಕ ಜಾಲತಾಣ ಖಾತೆಯ ಲೈವ್ನಲ್ಲಿ ಮಾತನಾಡಿದ್ದ ಉಪೇಂದ್ರ, ಸಮುದಾಯವೊಂದರ ಕುರಿತು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದಾಗಿ ಎಚ್ಚೆತ್ತ ಉಪೇಂದ್ರ ತಾವು ಮಾತನಾಡಿದ್ದ ವಿಡಿಯೋವನ್ನು ಡಿಲೀಟ್ ಮಾಡಿ, ಕ್ಷಮೆಯಾಚನೆ ಮಾಡಿದ್ದರು. ಇದರ ಬೆನ್ನಲ್ಲೇ ಅವರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
'ಹಲವರು ಅಂದು ಹುಟ್ಟೇ ಇರಲಿಲ್ಲ': ಈ ಬಗ್ಗೆ ಟ್ವೀಟ್ ಮಾಡಿರುವ ಉಪೇಂದ್ರ, "ಇಂದು ನನ್ನ ವಿರುದ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ, ನಾನು ಎಂತಹ ಪರಿಸರದಲ್ಲಿ ಬೆಳೆದೆ, ಆ ಬಾಲ್ಯದಲ್ಲಿ ನಾನು ಕಂಡ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ನಡೆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ ಇದನ್ನೆಲ್ಲ ಅನುಭವಿಸಿ ನಾನು ಬೆಳೆದೆ. ಹೀಗಿದ್ದೂ ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ?" ಎಂದು ಬರೆದಿದ್ದಾರೆ.
-
ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ.
— Upendra (@nimmaupendra) August 13, 2023 " class="align-text-top noRightClick twitterSection" data="
50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ.. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ …. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ…
">ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ.
— Upendra (@nimmaupendra) August 13, 2023
50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ.. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ …. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ…ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ.
— Upendra (@nimmaupendra) August 13, 2023
50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ.. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ …. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ…
ಎಫ್ಐಆರ್ ವಿವರ : ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ನಲ್ಲಿ, ಉಪೇಂದ್ರ ಸಾಮಾಜಿಕ ಜಾಲತಾಣದ ಕಾರ್ಯಕ್ರಮದ ನೇರಪ್ರಸಾರದಲ್ಲಿ ಮಾತನಾಡುವಾಗ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಇದರಿಂದ ಒಂದು ಸಮಾಜದ ಭಾವನೆಗಳಿಗೆ ಘಾಸಿ ಉಂಟಾಗಿದೆ. ನಟನಾಗಿ ಉಪೇಂದ್ರ ಅವರು ಎಲ್ಲರಿಗೂ ಮಾದರಿಯಾಗಿ ನಡೆದುಕೊಳ್ಳಬೇಕಿತ್ತು. ಈ ಸಂಬಂಧ ನಟನ ವಿರುದ್ಧ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ ಕಾಯ್ದೆ -1989) ಕ್ರಮ ಕೈಗೊಳ್ಳುವಂತೆ ಕೋರಲಾಗಿತ್ತು.
ಹೇಳಿಕೆಗೆ ಕ್ಷಮೆ ಯಾಚಿಸಿದ್ದ ಉಪೇಂದ್ರ: ಶನಿವಾರ ಫೇಸ್‌ಬುಕ್ ಮತ್ತು ಇನ್ಸ್‌ಟಾಗ್ರಾಮ್ ಲೈವ್ನಲ್ಲಿ ಮಾತನಾಡಿದ್ದ ಉಪೇಂದ್ರ, ಬಾಯ್ತಪ್ಪಿ ಒಂದು ಗಾದೆ ಮಾತು ಬಳಸಿದ್ದೆ. ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡುಬಂದಿದೆ. ತಕ್ಷಣವೇ ಆ ಲೈವ್ ವಿಡಿಯೋವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿದ್ದೇನೆ. ನನ್ನ ಮಾತಿಗೆ ಕ್ಷಮೆ ಇರಲಿ ಎಂದು ಹೇಳಿದ್ದಾರೆ.
ಇದನ್ನೂ ಓದಿ : Upendra: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಆರೋಪ; ಉಪೇಂದ್ರ ವಿರುದ್ಧ FIR