ಬೆಂಗಳೂರು : ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ನಂಟು ಸಂಬಂಧ ನಟಿ ಸಂಜನಾ ಗಲ್ರಾನಿ ಸಿಸಿಬಿ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ತನಿಖಾಧಿಕಾರಿಯಾದ ಇನ್‌ಸ್ಪೆಕ್ಟರ್ ಪುನೀತ್ ಅವರ ಮುಂದೆ ಹಾಜರಾಗಿದ್ದಾರೆ. ಡ್ರಗ್ಸ್ ಕೇಸ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಸಂಜನಾ ಅನಾರೋಗ್ಯ ಹಿನ್ನೆಲೆ ಹೈಕೋರ್ಟ್ ಷರತ್ತು ಬದ್ದ ಜಾಮೀನು ನೀಡಿತ್ತು.
15 ದಿನಕ್ಕೊಮ್ಮೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂದು ಸಂಜನಾಗೆ ನ್ಯಾಯಾಲಯ ತಾಕೀತು ಮಾಡಿತ್ತು. ಈ ಹಿನ್ನೆಲೆ ಸಂಜನಾ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಆಗಮಿಸಿ ವಿಚಾರಣೆಗೆ ಒಳಗಾಗಿದ್ದಾರೆ.
ಓದಿ : ಪ್ರೀತಿಸಿ ಮದುವೆಯಾಗಿದ್ದಕ್ಕೆ ವಿರೋಧ : ಮಗಳ ಅಪಹರಣ ಮಾಡಿದ ತಾಯಿ