ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಭಾಷಾ ನಟಿ ಸಂಜನಾ ಗಲ್ರಾನಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಿಸಿಬಿ ಕಚೇರಿಯಲ್ಲಿ ಸತತವಾಗಿ ವಿಚಾರಣೆ ನಡೆಸಿದ ಪೊಲೀಸರು ಬಳಿಕ ಸಂಜನಾ ಅವರನ್ನು ಬಂಧಿಸಿದ್ದಾರೆ. ಬೆಳಗ್ಗೆ ಸಂಜನಾ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ನಂತರ ವಶಕ್ಕೆ ಪಡೆದಿದ್ದರು. ಇದಾದ ನಂತರ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು.
ವಿಚಾರಣೆಯಲ್ಲಿ ಸಂಜನಾ ಅವರು ಶಾಸಕರೊಬ್ಬರ ಪುತ್ರ, ತಮ್ಮ ಸಮಕಾಲೀನರಾದ ಮತ್ತೊಬ್ಬ ನಟಿ ಹಾಗೂ ಇಬ್ಬರು ಸೀರಿಯಲ್ ನಟರ ಹೆಸರನ್ನು ಬಹಿರಂಗಪಡಿಸಿದ್ದಾರೆ ಎನ್ನಲಾಗ್ತಿದೆ. ಇದೀಗ ಬಂಧನಕ್ಕೊಳಗಾಗಿರುವ ಸಂಜನಾ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಕೆ.ಸಿ. ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.