ETV Bharat / state

ಎಸ್​ಸಿ - ಎಸ್​ಟಿ ಮೀಸಲು ಹೆಚ್ಚಳ 9ನೇ ಪರಿಚ್ಛೇದಕ್ಕೆ ಸೇರ್ಪಡೆ: ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರದ ನಿರ್ಧಾರ? - ದಶಕಗಳ ಬೇಡಿಕೆ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಅಸ್ತು

ಕೆಲ ತಿಂಗಳ ಹಿಂದೆಯಷ್ಟೆ ಪರಿಶಿಷ್ಟ ವರ್ಗಗಳ ದಶಕಗಳ ಬೇಡಿಕೆ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಅಸ್ತು ಎಂದಿದ್ದು, ಅದಕ್ಕೆ ಕಾನೂನಿನ ಬಲ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Vidhana Soudha
ವಿಧಾನಸೌಧ
author img

By

Published : Feb 9, 2023, 4:33 PM IST

ಬೆಂಗಳೂರು: ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ಹೆಚ್ಚಳ ಸಂಬಂಧ ಸಂವಿಧಾನದ 9ನೇ ಪರಿಚ್ಛೇದಕ್ಕೆ (ಶೆಡ್ಯೂಲ್) ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಇಂದಿನ ಸಂಪುಟ ಸಭೆಯಲ್ಲಿ ಇದು ಚರ್ಚೆಗೆ ಬಂದಿಲ್ಲ. ಮೀಸಲಾತಿ ಕುರಿತು 9ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ನೀಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಆದರೆ, ಮೀಸಲಾತಿ ಬಗ್ಗೆ ಚರ್ಚೆ ನಡೆದಿದ್ದು, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. ಸ್ವಾಮೀಜಿ ಸೇರಿದಂತೆ ಸಮುದಾಯದ ಹಲವರ ಹೋರಾಟದ ಫಲವಾಗಿ ಕೆಲ ತಿಂಗಳ ಹಿಂದೆ ಸರ್ಕಾರ ಪರಿಶಿಷ್ಟ ವರ್ಗಗಳ ದಶಕಗಳ ಬೇಡಿಕೆ ಈಡೇರಿಸಿದ್ದು, ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಅನುಮೋದನೆ ನೀಡಿತ್ತು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ವಿಧಾನಸಭೆಯಲ್ಲಿ ಮಂಡಿಸಿದ್ದ ವಿಧೇಯಕಕ್ಕೆ ಆಡಳಿತ ಹಾಗೂ ಪ್ರತಿಪಕ್ಷಗಳ ಎಲ್ಲ ಸದಸ್ಯರು ಒಕ್ಕೊರಲಿನ ಸಹಮತ ವ್ಯಕ್ತಪಡಿಸಿ ಸರ್ವಾನುಮತದ ಬೆಂಬಲ ಸೂಚಿಸಿದ್ದರು.

ಈ ಸಂಬಂಧ ನಾಗಮೋಹನ್ ದಾಸ್ ಆಯೋಗದ ಶಿಫಾರಸಿಗೆ ಸಂಪುಟ ಸಭೆ ಸಮ್ಮತಿ ನೀಡಿತ್ತು. ಎಸ್​ಸಿ ಮೀಸಲಾತಿಯನ್ನು ಶೇ.15 ರಿಂದ ಶೇ. 17 ಕ್ಕೆ ಅಂದರೆ ಶೇ.2 ರಷ್ಟು ಏರಿಕೆ ಮಾಡಿದ್ದರೆ, ಎಸ್​ಟಿ ಮೀಸಲಾಯಿತಿಯನ್ನು ಶೇ.3 ರಿಂದ ಶೇ. 7ಕ್ಕೆ ಅಂದರೆ ಶೇ. 4 ಕ್ಕೆ ಏರಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಆ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಒಟ್ಟು ಮೀಸಲಾತಿಯನ್ನು ಶೇ.6ಕ್ಕೆ ಹೆಚ್ಚಳ ಮಾಡಲಾಗಿದೆ. ಇದೀಗ ಕಾನೂನು ರಕ್ಷಣೆ ಪಡೆಯಲು ಶೆಡ್ಯೂಲ್ 9 ರ ವ್ಯಾಪ್ತಿಗೆ ಮೀಸಲಾತಿ ತರಲು ಸರ್ಕಾರ ಮುಂದಾಗಿದೆ.

ಮೀಸಲಾತಿಗೆ ಕಾನೂನು ಬಲ ಕೊಡುವ ನಿಟ್ಟಿನಲ್ಲಿ ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬ ಬೇಡಿಕೆಯನ್ನು ಪ್ರತಿಪಕ್ಷಗಳು ಮುಂದಿಟ್ಟಿದ್ದವು. ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಸ್ ಟಿ ಮತ್ತು ಎಸ್ ಸಿ ಮೀಸಲಾತಿ ಹೆಚ್ಚಳ ಮಾಡಿರುವ ನಿರ್ಣಯಕ್ಕೆ ಕಾನೂನಿನ ರಕ್ಷಣೆ ಕೊಡಲು ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು.

ಆದರೆ 9 ನೇ ಪರಿಚ್ಚೇದಕ್ಕೆ ಸೇರಿಸುವ ಕುರಿತಾದ ಶಿಫಾರಸು ಮಾಡುವ ನಿಟ್ಟಿನಲ್ಲಿ ಕಾನೂನು ತಜ್ಞರ ಅಂದರೆ ಕಾನೂನು ಸಚಿವರು, ಲಾ ಕಮಿಷನ್, ಅಡ್ವಕೇಟ್ ಜನರಲ್ ಜೊತೆ ಚರ್ಚೆ ಮಾಡಬೇಕು. ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಆದರೆ ಇದೀಗ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ದಾವಣಗೆರೆ ಜಿಲ್ಲೆಯಲ್ಲಿ ಇಂದು ನಡೆಯುವ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಈ ಘೋಷಣೆಯನ್ನು ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ SC ST ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.