ಬೆಂಗಳೂರು: ನಾಳೆ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ಮುಷ್ಕರ ನಡೆಸುತ್ತಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್‌ಟಿಸಿ ಹೆಚ್ಚುವರಿ ಬಸ್ಗಳ ಸೇವೆ ಕಲ್ಪಿಸಿದೆ.
ತೆಲಂಗಾಣ ಸಾರಿಗೆ ನೌಕರರ ಮುಷ್ಕರದಿಂದಾಗಿ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ತೆಲಂಗಾಣ ಸಾರಿಗೆ ಬಸ್ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಆದರೆ ಕೆಎಸ್ಆರ್‌ಟಿಸಿ ಬಸ್ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಭಯ ರಾಜ್ಯಗಳ ನಡುವೆ ನಾಳೆ ಕೆಎಸ್ಆರ್‌ಟಿಸಿ ಬಸ್ಗಳು ಎಂದಿನಂತೆ ಸಂಚರಿಸಲಿದ್ದು, ವಾರಾಂತ್ಯವಾದ ಕಾರಣ ಹೆಚ್ಚಿನ ಜನರು ಸಂಚಾರ ಮಾಡಲಿದ್ದಾರೆ. ಹಾಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ವಿಶೇಷ ಬಸ್ಗಳನ್ನು ಬಿಡಲಾಗುತ್ತಿದೆ ಎಂದು ಸಾರಿಗೆ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಷ್ಕರ ಮುಗಿಯುವವರೆಗೂ ಯಾವುದೇ ಷರತ್ತಿಲ್ಲದೇ ಕರ್ನಾಟಕ ಹಾಗು ತೆಲಂಗಾಣ ರಾಜ್ಯದ ನಡುವಿನ ಮಾರ್ಗದಲ್ಲಿ ಕೆಎಸ್ಆರ್‌ಟಿಸಿ ಬಸ್ಗಳ ಸಂಚಾರಕ್ಕೆ ನಿರ್ಧರಿಸಲಾಗಿದೆ.