ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಿದ್ದು, ಸಾವಿರಾರು ಮಂದಿ ಈಗಾಗಲೇ ಬೆಂಗಳೂರು ಬಿಟ್ಟು ಊರು ಸೇರುತ್ತಿದ್ದಾರೆ. ಇಂದು ಪ್ರಯಾಣಿಕರ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಗಳನ್ನು ಓಡಿಸುತ್ತಿದೆ. ಸುಮಾರು 500 ಹೆಚ್ಚುವರಿ ಬಸ್ಗಳನ್ನು ಬೆಂಗಳೂರಿನಿಂದ ಇತರ ಸ್ಥಳಗಳಿಗೆ ಕಾರ್ಯಾಚರಣೆ ಮಾಡಲಾಗುತ್ತಿದೆ.
ಈ ಬಗ್ಗೆ ಮಾತನಾಡಿರುವ ಡಿಸಿಎಂ ಲಕ್ಷ್ಮಣ ಸವದಿ, ಕೊರೊನಾ ಕರ್ಫ್ಯೂ ಹಿನ್ನೆಲೆ ಊರುಗಳತ್ತ ಪ್ರಯಾಣಿಕರು ತೆರಳುತ್ತಿರುವ ಪ್ರಯಾಣಿಕರಿಗಾಗಿ ನಾಳೆ ಸಾರಿಗೆ ನಿಗಮಗಳಿಂದ ವಿಶೇಷ ಹೆಚ್ಚುವರಿ ಬಸ್ ವ್ಯವಸ್ಥೆ ಇರಲಿದೆ. ನಾಳೆಯಿಂದ ಕರ್ಫ್ಯೂ ಬಿಗಿಗೊಳಿಸಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ತಮ್ಮತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ 3 ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ 12 ಸಾವಿರಕ್ಕೂ ಹೆಚ್ಚು ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಈ ಬಸ್ಗಳ ಬೆಂಗಳೂರಿನಿಂದ ಹೊರಗಡೆ ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ. ನಾಳೆ ರಾತ್ರಿಯ ಒಳಗೆ ತಮ್ಮ ಉರುಗಳಿಗೆ ತಲುಪಬೇಕಾದ ಪ್ರಯಾಣಿಕರು ಯಾವುದೇ ಆತಂಕವಿಲ್ಲದೇ, ನಿಗದಿತ ಕೋವಿಡ್ ಮಾರ್ಗಸೂಚಿ ಅನ್ವಯ ಮುಂಜಾಗ್ರತೆ ವಹಿಸಿ ಸಂಚರಿಸುವಂತೆ ಮನವಿ ಮಾಡಿದ್ದಾರೆ.