ಬೆಂಗಳೂರು: ಮಹಿಳಾ ಅಧಿಕಾರಿಗಳೇ ಕಾರ್ಯನಿರ್ವಹಿಸುವ ಸಖಿಮತಗಟ್ಟೆ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿಯೂ ಸ್ಥಾಪನೆಯಾಗಿದೆ. ಮಹಿಳಾ ಮತದಾರರು ಸರತಿ ಸಾಲಿನಲ್ಲಿ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.
ಇದೇ ವೇಳೆ, ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್, ಮತಗಟ್ಟೆಗೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು ಕೆ.ಆರ್. ಪುರ ವಿಧಾನಸಭಾ ಕ್ಷೇತ್ರದಲ್ಲಿ 437 ಮತಗಟ್ಟೆಗಳಿದ್ದು, ಎಲ್ಲ ಮತಗಟ್ಟೆಗಳಿಗೂ ಸೂಕ್ತ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ ಎಂದರು.
ಈ ಕ್ಷೇತ್ರದಲ್ಲಿ ಕೇಂದ್ರ ಅರಸೇನಾ ಪಡೆ ಸೇರಿದಂತೆ 3000 ಪೊಲೀಸರನ್ನು ನಿಯೋಜಿಸಲಾಗಿದೆ. ಒಂದು ಬೂತ್ ಮಾತ್ರ ತಾಂತ್ರಿಕ ಕಾರಣಗಳಿಂದ ತಡವಾಗಿದ್ದು, ಬಿಟ್ಟರೆ ಬೇರೇನೂ ತೊಂದರೆಯಾಗಿಲ್ಲ ಎಂದು ಮಾಹಿತಿ ನೀಡಿದ್ರು.