ETV Bharat / state

ಶನಿವಾರ ಒಂದೇ ದಿನ ರಾಜ್ಯಾದ್ಯಂತ 31 ಅಪಘಾತದಲ್ಲಿ 38 ಮಂದಿ ಸಾವು.. ಅವಘಡ ತಡೆಗೆ ಅಲೋಕ್​ ಕುಮಾರ್ ಸಲಹೆ

Road accidents in Karnataka: ರಾಜ್ಯದಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಲೋಕ್​ ಕುಮಾರ್ 'ಕರಾಳ ಶನಿವಾರ' ಎಂದು​ ಬೇಸರ ವ್ಯಕ್ತಪಡಿಸಿದ್ದಾರೆ.

ಅಲೋಕ್​ ಕುಮಾರ್
ಅಲೋಕ್​ ಕುಮಾರ್
author img

By

Published : Aug 14, 2023, 1:12 PM IST

Updated : Aug 14, 2023, 1:50 PM IST

ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್​ ಕುಮಾರ್​

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಕುರಿತು ಆತಂಕ ವ್ಯಕ್ತಪಡಿಸಿರುವ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಶನಿವಾರ ಒಂದೇ ದಿನ ಸಂಭವಿಸಿದ ಅಪಘಾತಗಳನ್ನ ಆಧರಿಸಿ 'ಕರಾಳ ಶನಿವಾರ' ಎಂದಿದ್ದಾರೆ‌.

ಶನಿವಾರ ಒಂದೇ ದಿನ ರಾಜ್ಯದಲ್ಲಿ, ಚಿತ್ರದುರ್ಗದಲ್ಲಿ ಕಾರು-ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಸಾವನ್ನಪ್ಪಿದ ಪ್ರಕರಣ ಸೇರಿದಂತೆ ಶನಿವಾರ ಒಂದೇ ದಿನ ರಾಜ್ಯಾದ್ಯಂತ ವಿವಿಧ ಅಪಘಾತಗಳಲ್ಲಿ ಒಟ್ಟು 38 ಜನ ಪ್ರಾಣ ಕಳೆದುಕೊಂಡಿರುವ ಕುರಿತು ಎಕ್ಸ್ ಆ್ಯಪ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅಪಘಾತ ಪ್ರಕರಣಗಳಲ್ಲಿ ಹೆಚ್ಚು ದ್ವಿಚಕ್ರ ವಾಹನ ಸವಾರರೇ ಬಲಿಯಾಗುತ್ತಿದ್ದಾರೆ. ಆದ್ದರಿಂದ ಅವರ ಸುರಕ್ಷತೆಗಾಗಿ‌ ಹೆಲ್ಮೆಟ್ ಧರಿಸಬೇಕು. ಮತ್ತು ಅನುಭವವಲ್ಲದ ಚಾಲಕರು ರಾತ್ರಿ ಸಂಚಾರ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

ದಂಡ ಪಾವತಿಸಿದರಷ್ಟೇ ಸಾಲದು, ಸಂಚಾರಿ ನಿಯಮ ಪಾಲಿಸಬೇಕು: ರಾಜ್ಯದಲ್ಲಿ ಶನಿವಾರ ಒಂದೇ ದಿನ 31 ಅಪಘಾತಗಳಲ್ಲಿ 38 ಜನ ಸಾವನ್ನಪ್ಪಿರುವುದು ವರದಿಯಾಗಿದೆ. ಆ ಪೈಕಿ ಚಿತ್ರದುರ್ಗದಲ್ಲಿ 7 ಜನ, ಪಾವಗಡ 2, ತುಮಕೂರು 6, ಚಿಕ್ಕಮಗಳೂರು 4, ಬೆಂಗಳೂರು 2, ಮಂಡ್ಯದಲ್ಲಿ 3 ಜನ ಸಾವನ್ನಪ್ಪಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಎಡಿಜಿಪಿ ಅಲೋಕ್ ಕುಮಾರ್ "ಬಹಳಷ್ಟು ಪ್ರಕರಣಗಳಲ್ಲಿ ಚಾಲಕರಿಗೆ ನೈಪುಣ್ಯತೆ ಇರದಿರುವುದು ಅಪಘಾತಕ್ಕೆ ಕಾರಣವಾಗುತ್ತದೆ. ಇನ್ನೂ ಕೆಲವು ಪ್ರಕರಣಗಳಲ್ಲಿ ರಸ್ತೆ ಖಾಲಿಯಿದ್ದಾಗ ಅತಿ ವೇಗವಾಗಿ ಚಾಲನೆ ಮಾಡುವುದರಿಂದ ಅಪಘಾತವಾಗುತ್ತದೆ. ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣರಾಗುತ್ತಾರೆ. ಈ ಮೂರು ಕಾರಣಗಳಿಂದ ಹೆಚ್ಚು ಅಪಘಾತಗಳಾಗುತ್ತವೆ. ಮತ್ತು 60%ರಷ್ಟು ರಸ್ತೆ ಅಪಘಾತಗಳಲ್ಲಿ ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪುತ್ತಿದ್ದಾರೆ" ಎಂದರು.

"ದೇಶದಲ್ಲಿ ಕಳೆದ ಹತ್ತು ವರ್ಷಗಳಲ್ಲಿ 15 ಲಕ್ಷ ಜನ ಅಪಘಾತಗಳಿಂದ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ 1 ಲಕ್ಷ ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಜೂನ್ ತಿಂಗಳಿನಲ್ಲಿ 965 ಜನ ಅಪಘಾತಗಳಿಂದ ಪ್ರಾಣ ಕಳೆದುಕೊಂಡರೆ, ಜುಲೈನಲ್ಲಿ 761 ಜನ ಪ್ರಾಣ ಕಳೆದುಕೊಂಡಿರುವುದು ದುಃಖದ ವಿಚಾರ. ಈ ವರ್ಷದ ದ್ವಿತೀಯಾರ್ಧದಲ್ಲಿ 25% ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡುವ ಗುರಿ ನಮ್ಮದು" ಎಂದು ಅವರು ತಿಳಿಸಿದರು.

"ಕೆಲವು ಕಡೆಗಳಲ್ಲಿ ಇಂಜಿನಿಯರಿಂಗ್ ದೋಷಗಳನ್ನು ಸರಿಪಡಿಸಬೇಕಿದೆ. ಅದರ ಜೊತೆಗೆ ಸಂಚಾರಿ ದಂಡ ವಿಧಿಸಿದರಷ್ಟೇ ಅಪಘಾತ ಪ್ರಕರಣಗಳು ಕಡಿಮೆಯಾಗುವುದಿಲ್ಲ. ಜನರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಆಗ ಮಾತ್ರ ಅಪಘಾತದಿಂದ ಸಾಯುವವರು ಹಾಗೂ ಗಾಯಾಳುಗಳ ಪ್ರಮಾಣ ತಗ್ಗಿಸಲು ಸಾಧ್ಯ" ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ‌.

ಇದನ್ನೂ ಓದಿ: ಧಾರವಾಡ: ಹೆದ್ದಾರಿ ಡಿವೈಡರ್​ಗೆ ಕಾರು ಡಿಕ್ಕಿ.. ಇಬ್ಬರು ಸಾವು

Last Updated : Aug 14, 2023, 1:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.