ETV Bharat / state

ಶಾಸಕ ಪ್ರೀತಂಗೌಡ ಮೇಲೆ ಹಲ್ಲೆ ಪ್ರಕರಣ: ಎಡಿಜಿಪಿಯಿಂದ ಮಾಹಿತಿ ಪಡೆದ ರಾಜ್ಯಪಾಲರು - Governor

ಬಿಜೆಪಿ ಶಾಸಕ ಪ್ರೀತಂಗೌಡ ಮೇಲೆ ಹಲ್ಲೆ ಪ್ರಕರಣ ಸಂಬಂಧ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ಅವರಿಂದ ರಾಜ್ಯಪಾಲ ವಿ.ಆರ್. ವಾಲಾ ಮಾಹಿತಿ ಪಡೆದುಕೊಂಡಿದ್ದಾರೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ಅವರಿಂದ ಘಟನಾವಳಿ ಕುರಿತಂತೆ ಮಾಹಿತಿ ಪಡೆದ ರಾಜ್ಯಪಾಲ ವಿ.ಆರ್. ವಾಲಾ.
author img

By

Published : Feb 15, 2019, 5:43 PM IST

ಬೆಂಗಳೂರು : ಬಿಜೆಪಿ ಶಾಸಕ ಪ್ರೀತಂಗೌಡ ನಿವಾಸದ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಿದ ಪ್ರಕರಣ ಹಿನ್ನೆಲೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಯೂರಪ್ಪ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಘಟನೆ ಕುರಿತಂತೆ ಸಮಗ್ರ ತನಿಖೆ ಮಾಡಬೇಕೆಂದು ಮನವಿ ಮಾಡಿತ್ತು.

ಘಟನೆಯ ಮರುದಿನ ರಾತ್ರಿ ಬಿಜೆಪಿಯ ಹದಿನೆಂಟಕ್ಕೂ ಹೆಚ್ಚು ಶಾಸಕರು ಪ್ರೀತಂಗೌಡ ನಿವಾಸಕ್ಕೆ ಭೇಟಿ ನೀಡಿ ವಸ್ತುಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ ರಾಜ್ಯಪಾಲರಿಗೆ ದೂರು ನೀಡುವುದಾಗಿ ಹೇಳಿತ್ತು.

ಯಡಿಯೂರಪ್ಪ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ ಶಾಸಕ ಪ್ರೀತಂಗೌಡ ಕುಟುಂಬಕ್ಕೆ ರಕ್ಷಣೆ ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಘಟನೆ ಕುರಿತಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

ಈ ವಿಷಯ ಕುರಿತಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಅವರು ರಾಜ್ಯಪಾಲರಿಗೆ ಮಾಹಿತಿ ನೀಡಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ಅವರಿಂದ ಘಟನಾವಳಿ ಕುರಿತಂತೆ ಇಂದು ರಾಜ್ಯಪಾಲ ವಿ.ಆರ್. ವಾಲಾ ಅವರು ಸಂಪೂರ್ಣ ಮಾಹಿತಿಯನ್ನು ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Intro:Body:

ಶಾಸಕ ಪ್ರೀತಂಗೌಡ ಮೇಲೆ ಹಲ್ಲೆ ಪ್ರಕರಣ : ಎಡಿಜಿಪಿಯಿಂದ ಮಾಹಿತಿ ಪಡೆದ ರಾಜ್ಯಪಾಲರು

ಬೆಂಗಳೂರು : ಕಳೆದ ಮಂಗಳವಾರ ಹಾಸನ ಜಿಲ್ಲೆ ಬಿಜೆಪಿ ಶಾಸಕ ಪ್ರೀತಂಗೌಡ ನಿವಾಸದ ಮೇಲೆ ಜೆಡಿಎಸ್ ಕಾರ್ಯಕರ್ತರು ನಡೆಸಿದರು ಎನ್ನಲಾದ ದಾಳಿ ಹಿನ್ನೆಲೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್. ಯಡಯೂರಪ್ಪ ನೇತೃತ್ವದಲ್ಲಿ ನಿಯೋಗವು ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡಿ ಈ ಘಟನೆ ಕುರಿತಂತೆ ಸಮಗ್ರ ತನಿಖೆ ಮಾಡಬೇಕೆಂದು ಮನವಿ ಮಾಡಿದ್ದರು.

ಘಟನೆ ನಡೆದ ಮರುದಿನ ರಾತ್ರಿ ಬಿಜೆಪಿಯ ಹದಿನೆಂಟಕ್ಕೂ ಹೆಚ್ಚು ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪ್ರೀತಂಗೌಡ ನಿವಾಸಕ್ಕೆ ಭೇ3ಟಿ ನೀಡಿ ವಸ್ತು ಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ ರಾಜ್ಯಪಾಲರಿಗೆ ದೂರು ನೀಡುವುದಾಗಿ ಪ್ರಕಟಿಸಿದ್ದರು.

ಅದೇ ರೀತಿ ನಿನ್ನೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ನಿಯೋಗ ನಿನ್ನೆ ರಾಜಭವನಕ್ಕೆ ತೆರಳಿ ಶಾಸಕ ಪ್ರೀತಂಗೌಡ ಕುಟುಂಬಕ್ಕೆ ರಕ್ಷಣೆ ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಅಲ್ಲದೆ, ಘಟನೆ ಕುರಿತಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಈ ವಿಷಯ ಕುರಿತಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಅವರು ರಾಜ್ಯಪಾಲರಿಗೆ ಮಾಹಿತಿ ಒದಗಿಸಿದ್ದರು. ರಾಜ್ಯದ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಕಮಲ್ ಪಂತ್ ಅವರಿಂದ ಘಟನಾವಳಿ ಕುರಿತಂತೆ ಇಂದು ರಾಜ್ಯಪಾಲ ವಿ.ಆರ್. ವಾಲಾ ಅವರು ಸಂಪೂರ್ಣ ಮಾಹಿತಿಯನ್ನು ಪಡೆದರು ಎಂದು ವರದಿಯಾಗಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.