ETV Bharat / state

ಮುಖ್ಯಮಂತ್ರಿ ಸಿದ್ದರಾಮಯ್ಯಗೆ 2ನೇ ಆಡಳಿತ ಸುಧಾರಣಾ ಆಯೋಗದ ವರದಿ ಸಲ್ಲಿಕೆ - ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ ರಚನೆ

Second Administrative Reforms Commission Report: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎರಡನೇ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ ಎಂ ವಿಜಯಭಾಸ್ಕರ್ ಅವರು ವರದಿ ಸಲ್ಲಿಕೆ ಮಾಡಿದರು.

Second Administrative Reforms Commission Report
ಆಡಳಿತ ಸುಧಾರಣಾ ಆಯೋಗದ ವರದಿ ಸಲ್ಲಿಕೆ
author img

By

Published : Jun 12, 2023, 12:04 PM IST

Updated : Jun 12, 2023, 12:16 PM IST

ಬೆಂಗಳೂರು: ಎರಡನೇ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ. ಎಂ. ವಿಜಯಭಾಸ್ಕರ್ ಅವರು ಇಂದು ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಈ ವೇಳೆ ಆಯೋಗದ ಸದಸ್ಯ ಕಾರ್ಯದರ್ಶಿ ಪ್ರಸನ್ನಕುಮಾರ್ ಉಪಸ್ಥಿತರಿದ್ದರು.

ಕಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಆಯೋಗವು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಆಡಳಿತ ಸುಧಾರಣಾ ಆಯೋಗದ ಎರಡನೇ ಹಾಗೂ ಮೂರನೇ ವರದಿಯನ್ನು ಸಲ್ಲಿಕೆ ಮಾಡಿತ್ತು. ಈ ವರದಿಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಇಂಧನ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಒಳಾಡಳಿತ ಇಲಾಖೆಗಳಿಗೆ ಸಂಬಂಧಿಸಿದ ಶಿಫಾರಸುಗಳನ್ನು ಒಳಗೊಂಡಿತ್ತು.

ಆಯೋಗದ ಶಿಫಾರಸುಗಳು:

  • ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ, ನಿಗಮ ಮಂಡಳಿ ಇತ್ಯಾದಿಗಳಲ್ಲಿ ಆಗುವ ಅನುಪಯುಕ್ತ ವೆಚ್ಚಗಳ ತಡೆಗೆ 'ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ ರಚನೆ'.
  • ಸರ್ಕಾರದ ಸಚಿವಾಲಯದಲ್ಲಿ ಯಾವುದೇ ಇಲಾಖೆಯ ಕಡತಗಳು ಮೂರು ಅಥವಾ ನಾಲ್ಕು ಹಂತಗಳಿಗಿಂತ ಹೆಚ್ಚು ಚಲನವಲನವಾಗಬಾರದು. ಪ್ರಸ್ತುತ ರಾಜ್ಯದಲ್ಲಿ ಕಡತಗಳು 5-10 ಹಂತಗಳಲ್ಲಿ ಚಲಾವಣೆಯಾಗುತ್ತಿವೆ.
  • ಎಲ್ಲಾ ಇಲಾಖೆಗಳು ಸೂಚಿಸಿದ ಗ್ರೂಪ್-ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಗಣಕೀಕೃತ ಕೌನ್ಸೆಲಿಂಗ್‌ ಮೂಲಕ ಮಾಡಲು ಕಾಯ್ದೆ ಜಾರಿಗೆ ತರಬಹುದು.
  • ಪ್ರಸ್ತುತ ಅಂಚೆ ಕಚೇರಿಗಳು ಭಾರತ ಸರ್ಕಾರದ ಸೇವೆಗಳನ್ನು ಒದಗಿಸುತ್ತಿವೆ. ರಾಜ್ಯದಲ್ಲಿರುವ ಎಲ್ಲಾ ಅಂಚೆ ಕಚೇರಿಗಳಲ್ಲಿ ರಾಜ್ಯ ಸರ್ಕಾರದ ಸೇವೆಗಳನ್ನು ಒದಗಿಸಲು ಬಳಸಿಕೊಳ್ಳಬಹುದು.
  • ಗ್ರಾಮ ಮಟ್ಟದ ಉದ್ಯಮಿಗಳಿಂದ (VLE) ಸ್ಥಾಪಿಸಲಾದ ಸಾಮಾನ್ಯ ಸೇವಾ ಕೇಂದ್ರಗಳನ್ನು (CSC) ರಾಜ್ಯವು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳುವುದರ ಮೂಲಕ ಸರ್ಕಾರಿ ಮತ್ತು ಸರ್ಕಾರೇತರ ಸೇವೆಗಳನ್ನು ಮನೆ ಬಾಗಿಲಿಗೆ ಒದಗಿಸಲು VLE ಗಳನ್ನು ಜನಸೇವಕರಾಗಿ ಬಳಸಿಕೊಳ್ಳಬಹುದು.
  • ಜಿಲ್ಲಾಧಿಕಾರಿಯವರಿಗೆ ಸಾರ್ವಜನಿಕ ಉದ್ದೇಶಕ್ಕಾಗಿ ಸರ್ಕಾರದ ಇಲಾಖೆಗಳಿಗೆ ನಾಲ್ಕು ಹೆಕ್ಟೇರ್‌ವರೆಗೆ ಮತ್ತು ಜಮೀನಿನ ಮೌಲ್ಯವು ರೂ.5 ಕೋಟಿ ಮೀರದ ಸರ್ಕಾರಿ ಜಮೀನನ್ನು ಪರಿವರ್ತನಾ ಶುಲ್ಕದ ವಿನಾಯಿತಿ ನೀಡಿ ಉಚಿತವಾಗಿ ಮಂಜೂರು ಮಾಡುವ ಹೆಚ್ಚಿನ ಅಧಿಕಾರವನ್ನು ಪ್ರತ್ಯಾಯೋಜಿಸಬಹುದು.
  • ಸಾರ್ವಜನಿಕ ಉದ್ಯಮಗಳ ಇಲಾಖೆಯನ್ನು(DPE) ಆರ್ಥಿಕ ಇಲಾಖೆಯಲ್ಲಿ ವಿಲೀನಗೊಳಿಸಬಹುದು.
  • ಭೂಸ್ವಾಧೀನಕ್ಕೆ ಪರಿಹಾರಧನದ ಪಾವತಿಯು ಕಾಲಮಿತಿಯದ್ದಾಗಿರಬೇಕು. ಕಾಲಮಿತಿಯಲ್ಲಿ ಪಾವತಿಸದಿದ್ದರೆ ವಿಳಂಬವಾದ ಅವಧಿಗೆ ಅನವಶ್ಯಕಾಗಿ ಹೆಚ್ಚುವರಿ ಪರಿಹಾರ ಧನವನ್ನು ಪಾವತಿಸಬೇಕಾಗುತ್ತದೆ.
  • ಪರಿಹಾರ ಧನವನ್ನು ಆಧಾರ್‌ ಆಧಾರಿತ ಪಾವತಿ ಮಾಡುವಂತೆ ಪ್ರಕ್ರಿಯೆಗೊಳಿಸಬೇಕು, ಇದರಿಂದ ಚೆಕ್‌ ಮೂಲಕ ಪರಿಹಾರ ಧನ ಪಾವತಿಯಲ್ಲಾಗುವ ವಂಚನೆಯನ್ನು ತಡೆಗಟ್ಟಬಹುದು.
  • ಅಧಿಕಾರಿಗಳ ಮತ್ತು ಸಿಬ್ಬಂದಿ ವರ್ಗದವರ ಕಾರ್ಯನಿರ್ವಹಣೆಯನ್ನುಮೌಲ್ಯಮಾಪನ ಮಾಡುವ ನಮೂನೆಯನ್ನು ಪರಿಷ್ಕರಿಸಿದ್ದು, ಅದರಂತೆ ಕ್ರಮ ವಹಿಸಬಹುದು.
  • ಸಾಧನೆ (ಕಾರ್ಯಕ್ಷಮತೆ ನಿರ್ವಹಣೆ ಮತ್ತು ಮೌಲ್ಯಮಾಪನ ಪದ್ಧತಿ) ಇಲಾಖೆಗಳ ಕಾರ್ಯಕ್ಷಮತೆ ನಿರ್ವಹಣೆ ಮತ್ತು ಮೌಲ್ಯಮಾಪನ ಪದ್ಧತಿಯನ್ನು ಜಾರಿಗೊಳಿಸಿ ಇಲಾಖೆಗಳ ಮೌಲ್ಯಮಾಪನ ಮಾಡಬಹುದು.
  • ರಾಷ್ಟ್ರಮಟ್ಟದಲ್ಲಿ ರಾಜ್ಯದ ಸೂಚ್ಯಾಂಕವನ್ನು ಸುಧಾರಿಸಲು ಬಹುವಲಯ, ವಲಯ ಸೂಚ್ಯಂಕಗಳ ವಿಶ್ಲೇಷಣೆ, ಸುಧಾರಣೆ, ಮೇಲ್ವಿಚಾರಣೆ ಮಾಡಲು ಸಮಿತಿ ರಚಿಸಲು ಕ್ರಮ ತೆಗೆದುಕೊಳ್ಳಬಹುದು ಮತ್ತು ಇವೇ ಸೂಚ್ಯಂಕಗಳ ಆಧಾರದ ಮೇಲೆ ಜಿಲ್ಲಾ ಮತ್ತು ತಾಲೂಕುಗಳ ಶ್ರೇಣಿಗಳನ್ನು ಪ್ರಕಟಿಸುವುದು.
  • ಅತಿ ಹೆಚ್ಚಿನ ಮೌಲ್ಯದ ಟೆಂಡರ್‌ಗಳನ್ನು ಕರೆಯುವ ಮೊದಲು ಕರಡು ಬಿಡ್‌ ಡಾಕ್ಯುಮೆಂಟ್‌ ಇ-ಪ್ರೊಕ್ಯುರ್‌ಮೆಂಟ್‌ ವೆಬ್‌ಸೈಟ್‌ ಮೂಲಕ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಬಹುದು. ಆಕ್ಷೇಪಣೆಗಳಿಗೆ ಇಲಾಖೆಗಳು ತಮ್ಮ ನಿರ್ಧಾರಗಳನ್ನು ದಾಖಲಿಸಬೇಕು ನಂತರವೇ ಬಿಡ್‌ ಡಾಕ್ಯುಮೆಂಟ್‌ ಅಂತಿಮಗೊಳಿಸಬೇಕು.
  • ಎಲ್ಲ ಇಲಾಖೆಗಳು ಸಿಬ್ಬಂದಿಯನ್ನು ಹೊರಗುತ್ತಿಗೆಯ ಆಧಾರದ ಮೇಲೆ ನಿಯೋಜಿಸಿಕೊಳ್ಳುತ್ತಿದ್ದು, ನಿಯೋಜಿಸಿಕೊಳ್ಳುವಾಗ ಯಾವುದೇ ರೀತಿಯ ಮೀಸಲಾತಿ ಪದ್ಧತಿಯನ್ನು ಅಳವಡಿಸಿಕೊಳ್ಳದೆ ಇರುವುದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಅನಾನುಕೂಲವಾಗುತ್ತಿರುವುದು ಕಂಡುಬಂದಿರುತ್ತದೆ. ಸರ್ಕಾರವು ಹೊರ ಗುತ್ತಿಗೆ ಮೇಲೆ ಸಿಬ್ಬಂದಿ ನಿಯೋಜಿಸಿಕೊಳ್ಳುವಾಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಅಗತ್ಯ ಪ್ರಾತಿನಿಧ್ಯ ನೀಡಿ ನಿಯೋಜಿಸುವಂತೆ ಸೂಕ್ತ ಆದೇಶವನ್ನು ಹೊರಡಿಸಬಹುದು.
  • ವಿವಿಧ ಕಚೇರಿಗಳಲ್ಲಿ ಕಾರ್ಯಭಾರದ ಆಧಾರದ ಮೇಲೆ ಹುದ್ದೆಗಳ ಸ್ಥಳಾಂತರ ಮಾಡಬಹುದು ಎಂಬ ಈ ಎಲ್ಲಾವಿಚಾರಗಳನ್ನು ಆಯೋಗದ ವರದಿ ಹೊಂದಿತ್ತು. ಸರ್ಕಾರ ಬದಲಾದ ಸಂದರ್ಭದಲ್ಲಿ ಆಯೋಗದ ಅಧ್ಯಕ್ಷರು ಹೊಸ ಮುಖ್ಯಮಂತ್ರಿಗಳಿಗೆ ಎರಡನೇ ಆಡಳಿತ ಸುಧಾರಣಾ ಆಯೋಗದ ವರದಿ ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ : ಆಡಳಿತ ಸುಧಾರಣಾ ಆಯೋಗ-2ರ ಎರಡು ಮತ್ತು ಮೂರನೇ ವರದಿ ಸಲ್ಲಿಕೆ

Last Updated : Jun 12, 2023, 12:16 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.