ಬೆಂಗಳೂರು: ಅವಧಿ ಮುಕ್ತಾಯಗೊಳ್ಳುತ್ತಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತ ಸಮಿತಿ ನೇಮಕ ಮಾಡುವ ವಿಚಾರವಾಗಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸುತ್ತಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಕಾರಜೋಳ ,ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ, ಕಂದಾಯ ಸಚಿವ ಆರ್. ಅಶೋಕ್ ಭಾಗಿಯಾಗಿದ್ದಾರೆ.
ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆ ಇದೆ. ಮೇ ಮತ್ತು ಜೂನ್ ತಿಂಗಳಿನಲ್ಲಿ ಅವಧಿ ಮುಗಿಸುವ ಗ್ರಾಮ ಪಂಚಾಯತ್ಗಳಿಗೆ ಸದ್ಯ ಚುನಾವಣೆ ನಡೆಸದೇ ಇರಲು ನಿರ್ಧಾರ ಕೈಗೊಂಡಿದ್ದು, ಚುನಾವಣೆ ನಡೆಯುವವರೆಗೆ ಗ್ರಾಮ ಪಂಚಾಯತ್ ಉಸ್ತುವಾರಿಯನ್ನು ಯಾರಿಗೆ ವಹಿಸಬೇಕು ಎನ್ನುವ ಕುರಿತು ನಿರ್ಧರಿಸಲಾಗುತ್ತದೆ ಎನ್ನಲಾಗಿದೆ.