ETV Bharat / state

ಕೌಶಲ್ಯಾಭಿವೃದ್ಧಿಗಾಗಿ 100 ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಿಗೆ 100 ಎಂಜನಿಯರಿಂಗ್‌ ಕಾಲೇಜುಗಳ ದತ್ತು - ಶರಣಪ್ರಕಾಶ್‌ ಪಾಟೀಲ್‌

ರಾಜ್ಯ ವಿವಿಧ ಮಾಹಿತಿ ತಂತ್ರಜ್ಞಾನ ಸಂಸ್ಥೆಯೊಂದಿಗೆ ವಿವಿಧ ಎಂಜಿನಿಯರಿಂಗ್ ಕಾಲೇಜುಗಳನ್ನು ಜೋಡಿಸಿ ಯುವ ಜನರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲಾಗುವುದು ಎಂದು ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ.​

adoption-of-engineering-colleges-to-information-technology-institutes-for-skill-development-minister-priyank-kharge
ಕೌಶಲ್ಯಾಭಿವೃದ್ಧಿಗಾಗಿ 100 ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಿಗೆ 100 ಎಂಜನಿಯರಿಂಗ್‌ ಕಾಲೇಜುಗಳ ದತ್ತು: ಸಚಿವ ಸಚಿವ ಪ್ರಿಯಾಂಕ್‌ ಖರ್ಗೆ
author img

By ETV Bharat Karnataka Team

Published : Nov 11, 2023, 9:34 AM IST

ಬೆಂಗಳೂರು : ರಾಜ್ಯದ 100 ವಿವಿಧ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳೊಂದಿಗೆ ವಿವಿಧ 100 ಎಂಜನಿಯರಿಂಗ್‌ ಕಾಲೇಜುಗಳನ್ನು ಜೋಡಿಸಿ ಕೌಶಲ್ಯ ಅಭಿವೃದ್ಧಿಯಲ್ಲಿ ತರಬೇತಿ ನೀಡುವ ಮೂಲಕ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಲ್ಲಿ ಬೇಡಿಕೆಯಿರುವ ಉದ್ಯೋಗಗಳಿಗೆ ಸೂಕ್ತವಾಗಿ ಯುವ ಜನಾಂಗವನ್ನು ಸಜ್ಜುಗೊಳಿಸಲು ಚಿಂತಿಸಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಾಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರೊಂದಿಗೆ ಶುಕ್ರವಾರ ನಡೆದ ಮಾಹಿತಿ ತಂತ್ರಜ್ಞಾನ ಕೌಶಲ್ಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ, ಬೆಂಗಳೂರಿನಲ್ಲಿರುವ ಮಾಹಿತಿ ತಂತ್ರಜ್ಞಾನ ಕಂಪೆನಿಗಳಲ್ಲಿ ಲಭ್ಯವಿರುವ ವಿಫುಲ ಹುದ್ದೆಗಳಿಗೆ ಕೌಶಲ್ಯ ನಿಪುಣತೆಯಿರುವ ಅಭ್ಯರ್ಥಿಗಳ ಅವಶ್ಯಕತೆಯಿದೆ. ಅನಿಮೇಷನ್‌, ಗೇಮಿಂಗ್‌, ಕೃತಕ ಬುದ್ಧಿಮತ್ತೆ, ರೊಬೋಟ್ಸ್‌, ಆಟೋಮೆಷಿನ್‌, ಡ್ರೋನ್ ಮುಂತಾದ ಕ್ಷೇತ್ರಗಳಲ್ಲಿ ಈಗ ಉದ್ಯೋಗಾವಕಾಶಗಳು ಹೇರಳವಾಗಿದೆ. ಅಂತಹ ಹುದ್ದೆಗಳಿಗೆ ಯುವಕ ಯುವತಿಯರನ್ನು ಕುಶಲಿಗಳನ್ನಾಗಿ ಸಿದ್ಧ ಮಾಡಲು ತರಬೇತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ಸರ್ಕಾರದ ಐಟಿಐ ತರಬೇತಿ ಸಂಸ್ಥೆಗಳು ಸ್ಥಳೀಯ ಉದ್ಯೋಗಕ್ಕೆ ಅನುಗುಣವಾಗಿ ವೃತ್ತಿ ತರಬೇತಿ ನೀಡುವಂತೆ ಮಾರ್ಪಾಟು ಮಾಡಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದರು.

ಸಭೆಯಲ್ಲಿ ಭಾಗಿಯಾಗಿದ್ದ ಪ್ರತಿಷ್ಠಿತ ಕಂಪನಿಗಳ ಉನ್ನತ ಅಧಿಕಾರಿಗಳು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಹುದ್ದೆಗಳ ಬೇಡಿಕೆಯಿದೆಯಾದರೂ, ಅಭ್ಯರ್ಥಿಗಳಲ್ಲಿ ಕೌಶಲ್ಯ, ಪರಿಣಿತಿ ಇಲ್ಲದಿರುವುದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗುತ್ತಿಲ್ಲ. ಸರ್ಕಾರದ ವತಿಯಿಂದ ತಾಂತ್ರಿಕ ವಿದ್ಯಾರ್ಹತೆ ಇರುವ ಯುವಕ, ಯುವತಿಯರಿಗೆ ವಿವಿಧ ಕೌಶಲ್ಯ ತರಬೇತಿ ನೀಡಿ ಸಜ್ಜುಗೊಳಿಸಿದಲ್ಲಿ ಐಟಿ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳಿಗೆ ಪೂರಕವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಕೌಶಲ್ಯ ಅಭಿವೃದ್ಧಿ ಮಂಡಳಿ ಪ್ರಾಧಿಕಾರದ ಅಧ್ಯಕ್ಷರಾದ ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಡಾ ಇ ವಿ ರಮಣರೆಡ್ಡಿ, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕರೂಪ್ ಕೌರ್‌ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ : 2 ಸಾವಿರ ಎಕರೆಯಲ್ಲಿ ವಿಶ್ವ ದರ್ಜೆಯ ಕೆಹೆಚ್ಐಆರ್ ಸಿಟಿ ನಿರ್ಮಾಣ, 1 ಲಕ್ಷ ಉದ್ಯೋಗ ಸೃಷ್ಟಿ: ಸಚಿವ ಎಂ ಬಿ ಪಾಟೀಲ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.