ETV Bharat / state

ದೇವನಹಳ್ಳಿಯಲ್ಲಿ ಏರೋಸ್ಪೇಸ್, ಡಿಫೆನ್ಸ್ ಪಾರ್ಕ್: ವಾಣಿಜ್ಯ ಮತ್ತು ಕೈಗಾರಿಕೆಗೆ ಬಜೆಟ್​ನಲ್ಲಿ ಸಿಕ್ಕಿದ್ದೇನು..? - ಟೆಕ್ನಾಲಜಿ ಇನ್ನೋವೇಷನ್ ಪಾರ್ಕ್

ಸಿಎಂ ಸಿದ್ದರಾಮಯ್ಯ ಶುಕ್ರವಾರ 14ನೇ ಭಾರಿ ಬಜೆಟ್​ ಮಂಡಿ ಮೂಲಕ ದಾಖಲೆ ಬರೆದಿದ್ದಾರೆ. ದೇವನಹಳ್ಳಿಯಲ್ಲಿ ಏರೋಸ್ಪೇಸ್, ಡಿಫೆನ್ಸ್ ಪಾರ್ಕ್ ಘೋಷಿಸಿದರು. ಈ ಕುರಿತ ಪಕ್ಷಿ ನೋಟ ಇಲ್ಲಿದೆ ಓದಿ.

Karnataka Budget 2023
ದೇವಹಳ್ಳಿಯಲ್ಲಿ ಏರೋಸ್ಪೇಸ್, ಡಿಫೆನ್ಸ್ ಪಾರ್ಕ್: ವಾಣಿಜ್ಯ ಮತ್ತು ಕೈಗಾರಿಕೆಗೆ ಬಜೆಟ್​ನಲ್ಲಿ ಸಿಕ್ಕಿದ್ದೇನು..?
author img

By

Published : Jul 7, 2023, 5:45 PM IST

Updated : Jul 7, 2023, 6:24 PM IST

ಬೆಂಗಳೂರು: ಕಾಡುಗೋಡಿಯಲ್ಲಿ 100 ಎಕರೆ ಪ್ರದೇಶದಲ್ಲಿ ಟೆಕ್ನಾಲಜಿ ಇನ್ನೋವೇಷನ್ ಪಾರ್ಕ್ ಸ್ಥಾಪನೆ, ಬಿಇಎಂಎಲ್ ನಲ್ಲಿ ಬೃಹತ್ ಟೌನ್ ಶಿಪ್ ಅಭಿವೃದ್ಧಿ, ದೇವನಹಳ್ಳಿಯಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ ಸ್ಥಾಪನೆ, ಏಳು ಕಡೆ ಕೈಗಾರಿಕಾ ವಸಾಹತು ಸ್ಥಾಪನೆ ಸೇರಿದಂತೆ ಕೈಗಾರಿಕಾ ಇಲಾಖೆಗೆ ಬಜೆಟ್​ನಲ್ಲಿ ಹಲವು ಯೋಜನೆ ಪ್ರಕಟಿಸಲಾಗಿದೆ.

  • "ಸ್ಟಾರ್ಟ್ಅಪ್ ಗಳಿಗೆ ಉತ್ತೇಜನ"

    •ವಿಶ್ವದರ್ಜೆಯ ಪರಿಪೋಷಣ ಕೇಂದ್ರ “INNOVERSE” ಸ್ಥಾಪನೆಗೆ 10 ಕೋಟಿ ರೂ. ಅನುದಾನ.
    •ಸ್ಟಾರ್ಟಪ್‌ ನೀತಿಯಡಿಯಲ್ಲಿ ಅನುದಾನ ನೀಡಿರುವ ಸ್ಟಾರ್ಟ್‌ಅಪ್‌ಗಳ ಪರಿಹಾರಗಳ ಅಳವಡಿಕೆಯನ್ನು ವೇಗಗೊಳಿಸಲು ʻPropelʼ ಯೋಜನೆ ಅನುಷ್ಠಾನ.
    •Global Innovation Alliance- Market Access Programme (GIA-MAP)… pic.twitter.com/0BItWlMNCZ

    — CM of Karnataka (@CMofKarnataka) July 7, 2023 " class="align-text-top noRightClick twitterSection" data=" ">

ಟೆಕ್ನಾಲಜಿ ಇನ್ನೋವೇಷನ್ ಪಾರ್ಕ್: ಬೆಂಗಳೂರಿನ ಕಾಡುಗೋಡಿಯಲ್ಲಿ 100 ಎಕರೆ ಪ್ರದೇಶದಲ್ಲಿ ಟೆಕ್ನಾಲಜಿ ಇನ್ನೋವೇಷನ್ ಪಾರ್ಕ್ ಅನ್ನು ಅಭಿವೃದ್ಧಿಪಡಿಸಲಾಗುವುದು. ಇದರಲ್ಲಿ ತಾಂತ್ರಿಕ ಸಂಶೋಧನಾ ಸಂಸ್ಥೆ ಸ್ಥಾಪನೆ ಜೊತೆಗೆ ಸೆಮಿಕಂಡಕ್ಟರ್‌ ಸಂಶೋಧನೆ ಮತ್ತು ಅಭಿವೃದ್ಧಿ, ಪರೀಕ್ಷೆ, ವಿನ್ಯಾಸ ಇತ್ಯಾದಿಗಳಿಗೆ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಲಾಗುವುದು. ರಾಜ್ಯ ಸರ್ಕಾರವು ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್‌ನಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರದ ಸ್ವಾಧೀನದಲ್ಲಿರುವ ಬಿಇಎಂಎಲ್​ ಜಮೀನಿನಲ್ಲಿ ಬೃಹತ್‌ ʻಕೈಗಾರಿಕಾ ಟೌನ್‌ಷಿಪ್ʼ ಅನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಬಜೆಟ್ ನಲ್ಲಿ ಪ್ರಕಟಿಸಲಾಗಿದೆ.

ಬೆಂಗಳೂರಿನ ದೇವನಹಳ್ಳಿ ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ಪಾರ್ಕ್‌: ವಿಜಯಪುರ ಜಿಲ್ಲೆಯಲ್ಲಿ ಉತ್ಪಾದನಾ ಕ್ಲಸ್ಟರ್‌ ಮತ್ತು ದಕ್ಷಿಣ ಕನ್ನಡದಲ್ಲಿ ರಫ್ತು ಆಧಾರಿತ ಕೈಗಾರಿಕೆಗಳ ಕ್ಲಸ್ಟರ್‌ಗಳ ಅಭಿವೃದ್ಧಿ, ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಸಂಬಂಧಿಸಿದ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಒಂದು ಹೊಸ ನೀತಿಯನ್ನು ಜಾರಿಗೆ, ಕೈಗಾರಿಕೆಗಳ ಸ್ಥಾಪನೆಗೆ ಎರಡು ಎಕರೆವರೆಗಿನ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಪರಿವರ್ತಿಸದೆ ಬಳಸಲು ಅವಕಾಶ ನೀಡಲಾಗುವುದು. ಇದಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ಜೊತೆಗೆ ಬೆಂಗಳೂರಿನ ದೇವನಹಳ್ಳಿ ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ಪಾರ್ಕ್‌ನಲ್ಲಿ ಸ್ಥಾಪಿಸಲಾಗುವುದು ಎಂದು ಬಜೆಟ್ ನಲ್ಲಿ ತಿಳಿಸಲಾಗಿದೆ.

ಮಗ್ಗಗಳಿಗೆ 250 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್‌: ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ರಾಜ್ಯದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ (ಕೆಎಸ್​ಎಸ್​ಐಡಿಸಿ) ವತಿಯಿಂದ ಹುಬ್ಬಳ್ಳಿ, ಕಲಬುರಗಿಯ ಚಿತ್ತಾಪುರ, ಉತ್ತರ ಕನ್ನಡದ ಕೋಡ್ಕಣಿ, ಬೆಳಗಾವಿಯ ಕಣಗಲಾ, ಚಾಮರಾಜನಗರದ ಬದನಗುಪ್ಪೆ, ವಿಜಯಪುರದ ಇಂಡಿ ಮತ್ತು ಯಾದಗಿರಿಯ ಶಹಪೂರ ಹೀಗೆ ಏಳು ಸ್ಥಳಗಳಲ್ಲಿ ಹೊಸದಾಗಿ ಕೈಗಾರಿಕಾ ವಸಾಹತುಗಳನ್ನು ಹಂತ ಹಂತವಾಗಿ ಸ್ಥಾಪನೆ, ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಮಹಾತ್ಮಾ ಗಾಂಧಿ ವಸ್ತ್ರೋದ್ಯಮ ಕೋಶವನ್ನು ಸ್ಥಾಪನೆ, 10 ಹೆಚ್.ಪಿ ವರೆಗಿನ ವಿದ್ಯುತ್‌ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ, ಮಾಸಿಕ ಗರಿಷ್ಠ 250 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್‌ ನೀಡುವ ಘೋಷಣೆ ಮಾಡಲಾಗಿದೆ.

ಮೈಸೂರು ಷುಗರ್‌ ಕಂಪನಿ ಪುನರುಜ್ಜೀವನಕ್ಕೆ ಒತ್ತು: ಮಂಡ್ಯದಲ್ಲಿರುವ ಮೈಸೂರು ಷುಗರ್‌ ಕಂಪನಿ ಪುನರುಜ್ಜೀವನಗೊಳಿಸಲು ಮತ್ತು 2023-24ನೇ ಸಾಲಿನಲ್ಲಿಯೇ ಕಬ್ಬು ಅರೆಯುವಿಕೆಯನ್ನು ಪ್ರಾರಂಭಿಸಿ ಲಾಭದಾಯಕವಾಗಿ ನಡೆಸಲು ಈಗಾಗಲೇ ನಮ್ಮ ಸರ್ಕಾರ 50 ಕೋಟಿ ರೂ. ಬಂಡವಾಳ ನೀಡಿದೆ. ದುಡಿಯುವ ಬಂಡವಾಳ ನೀಡುವ ಜೊತೆಗೆ ಕಾರ್ಖಾನೆಯ ಸುಸ್ಥಿರತೆ ಮತ್ತು ಉನ್ನತೀಕರಣಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.

ರಾಜ್ಯದಲ್ಲಿ ಸುಸ್ಥಿರ, ಸುರಕ್ಷಿತ ಮತ್ತು ವೈಜ್ಞಾನಿಕ ಗಣಿಗಾರಿಕೆಯನ್ನು ಉತ್ತೇಜಿಸಿ, ರಾಜಸ್ವ ಸಂಗ್ರಹಣೆಯನ್ನು ಹೆಚ್ಚಿಸಲು ನಮ್ಮ ಸರ್ಕಾರ ಆದ್ಯತೆ ನೀಡಲಿದೆ. ಈ ನಿಟ್ಟಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ವೈಜ್ಞಾನಿಕ ಮತ್ತು ತಾಂತ್ರಿಕ ವಿಧಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಅವಶ್ಯಕ ಸುಧಾರಣೆಗಳನ್ನು ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ರೇರ್​ ಅರ್ಥ್ ಎಲಿಮೆಂಟ್ಸ್​ಗಳಲ್ಲಿ ಒಂದಾದ ಲೀಥಿಯಂ ಖನಿಜಾನೆ ಅನ್ವೇಷಣೆಯನ್ನು ಕೈಗೊಂಡು ಹೊಸ ಖನಿಜ ನಿಕ್ಷೇಪಗಳನ್ನು ಪತ್ತೆ ಹಚ್ಚಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಕ್ರಮವಹಿಸಲಾಗುವುದು ಎಂದು ಸಿಎಂ ತಿಳಿಸಿದೆ.

ಇದನ್ನೂ ಓದಿ: ಇದು ಪೂರ್ಣ ಬಜೆಟ್​, ಪಂಚ ಗ್ಯಾರಂಟಿಗಳಿಗೆ ಅಗತ್ಯ ಹಣ ಮೀಸಲು: ಸಿಎಂ ಸಿದ್ದರಾಮಯ್ಯ

Last Updated : Jul 7, 2023, 6:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.