ETV Bharat / state

ಏಳು ಗ್ಯಾರಂಟಿ ಘೋಷಣೆ ಬಳಿಕ ನಾಳೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

author img

By

Published : May 1, 2023, 7:26 PM IST

Updated : May 1, 2023, 7:51 PM IST

ಚುನಾವಣಾ ಕಣದಲ್ಲಿ ಪಕ್ಷಗಳ ಪ್ರಣಾಳಿಕೆಗಳು ಸದ್ದು ಮಾಡುತ್ತಿವೆ. ಈಗಾಗಲೇ ಅಧಿಕೃತವಾಗಿ ಜೆಡಿಎಸ್​ ಮತ್ತು ಬಿಜೆಪಿ ತಮ್ಮ ತಮ್ಮ ಭರವಸೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದೀಗ ಮುಂದಿನ ಸರದಿ ಕಾಂಗ್ರೆಸ್​ನದ್ದಾಗಿದ್ದು, ಅದಕ್ಕೆ ಮಂಗಳವಾರ ಮುಹೂರ್ತ ಫಿಕ್ಸ್​ ಆಗಿದೆ.

Congress manifesto
ಕಾಂಗ್ರೆಸ್ ಪ್ರಣಾಳಿಕೆ

ಬೆಂಗಳೂರು: ಮತದಾನ ದಿನಕ್ಕೆ 8 ದಿನ ಬಾಕಿ ಇರುವ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೆ ಮುಂದಾಗಿದೆ. ರಾಜ್ಯ ಹಾಗೂ ರಾಷ್ಟ್ರೀಯ ನಾಯಕರಿಂದ ಏಳು ಗ್ಯಾರಂಟಿ ಘೋಷಣೆ ಬಳಿಕ ನಾಳೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ತುಂಬಾ ಅಳೆದು ತೂಗಿ ನಾಳೆ ಬೆಳಗ್ಗೆ 9ಕ್ಕೆ ಖಾಸಗಿ ಹೋಟೆಲ್​ನಲ್ಲಿ ಕಾಂಗ್ರೆಸ್​ ಪ್ರಣಾಳಿಕೆ ಬಿಡುಗಡೆ ಆಗಲಿದೆ.

ನಾಳೆ ಕಾರ್ಯಕ್ರಮದಲ್ಲಿ ಭಾಗವಹಿಸುವ ನಾಯಕರು ಯಾರು?: ನಾಳೆಯ ಸಮಾರಂಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ ಜಿ ಪರಮೇಶ್ವರ ಮತ್ತಿತರ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಜನರನ್ನು ಸೆಳೆಯುವ ದೃಷ್ಟಿಯಿಂದ ತರಬೇಕಿದ್ದ ಪ್ರಣಾಳಿಕೆಯ ಪ್ರಮುಖ ಅಂಶವನ್ನು ಗ್ಯಾರೆಂಟಿ ಹೆಸರಿನಲ್ಲಿ ಅದಾಗಲೇ ಘೋಷಿತವಾಗಿದ್ದು, ನಿಜವಾದ ಪ್ರನಾಳಿಕೆಗೆ ನಿರೀಕ್ಷೆ ಕಡಿಮೆ ಆಗುವಂತೆ ಮಾಡಿದೆ. ಆದಾಗ್ಯೂ 2013ರ ವಿಧಾನಸಭೆ ಚುನಾವಣೆಯಲ್ಲಿ 160 ಭರವಸೆ ನೀಡಿ ಎಲ್ಲವನ್ನೂ ಈಡೇರಿಸಿದ್ದೆವು ಎಂದು ಹೇಳಿಕೊಂಡಿದ್ದ ಪಕ್ಷ, 2018ರಲ್ಲಿ ಮತ್ತಷ್ಟು ಕೊಡುಗೆ ಘೋಷಿಸಿತ್ತು. ಆದರೆ, ಮೈತ್ರಿ ಸರ್ಕಾರದಲ್ಲಿ ಎಲ್ಲವನ್ನೂ ಈಡೇರಿಸಲು ಸಾಧ್ಯವಾಗಿಲ್ಲ. ಇದೀಗ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಈಗಾಗಲೇ ಪ್ರಮುಖ 7 ಘೋಷಣೆಗಳನ್ನು ಮಾಡಿರುವ ಕಾಂಗ್ರೆಸ್, ಈಗ ಇನ್ನಷ್ಟು ಘೋಷಣೆಗಳನ್ನು ನಾಳೆ ಬಿಡುಗಡೆ ಮಾಡಲು ತೀರ್ಮಾನಿಸಿದೆ.

ಈಗಾಗಲೇ ಬಿಡುಗಡೆಯಾದ ಬಿಜೆಪಿ ಪ್ರಣಾಳಿಕೆ: ಬಿಜೆಪಿ ಪಕ್ಷ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದಕ್ಕಿಂತ ಮುನ್ನ ಜೆಡಿಎಸ್​ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದೆ. ವಿಶೇಷ ಅಂದರೆ, ಪುತ್ತೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಸಹ ತಮ್ಮ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕರು ದಿನಕ್ಕೊಂದು ಕಡೆ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ನಾಯಕರಾದ ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ ನಿರಂತರ ಪ್ರಚಾರದಲ್ಲಿದ್ದು, ಪ್ರಣಾಳಿಕೆ ಬಿಡುಗಡೆಗೆ ಒಂದೆಡೆ ಸೇರಲು ರಾಜ್ಯ ನಾಯಕರು ಪುರುಸೊತ್ತು ಸಿಕ್ಕಿರಲಿಲ್ಲ. ಆದರೆ, ಸಮಾರಂಭ ಆಯೋಜಿಸಿ ಪ್ರಣಾಳಿಕೆ ಬಿಡುಗಡೆಗೆ ಅಂತಿಮ ತೀರ್ಮಾನ ಕೈಗೊಂಡಿದ್ದಾರೆ.

ಜನಪ್ರಿಯ ಬೇಡಿಕೆಗಳು ಆಗಲೇ ಘೋಷಣೆ: ಈಗಾಗಲೇ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಅಂತ ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ರಾಜ್ಯ ಕಾಂಗ್ರೆಸ್​ ನಾಯಕರು ತಮ್ಮ ಉಪಸ್ಥಿತಿಯಲ್ಲಿ ಐದು ಘೋಷಣೆಗಳನ್ನು ಮಾಡಿದ್ದಾರೆ. ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಿಕೆ ಮೊದಲ ಘೋಷಣೆ. ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಉದ್ಘಾಟನಾ ಸಮಾವೇಶದಲ್ಲಿ ಕಾಂಗ್ರೆಸ್ ಈ ಘೋಷಣೆ ಮಾಡಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಘೋಷಣೆ ಮಾಡಿದ್ದರು.

ಮಹಿಳೆಯರಿಗೆ ಪ್ರತಿ ತಿಂಗಳು ತಲಾ 2000 ರೂ.: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಎರಡನೇ ಘೋಷಣೆಯನ್ನು ಕಾಂಗ್ರೆಸ್ ಮಾಡಿತ್ತು. ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ಈ ಯೋಜನೆಯನ್ನು ಘೋಷಣೆ ಮಾಡಿತ್ತು. ರಾಜ್ಯದ ಎಲ್ಲ ಮಹಿಳೆಯರಿಗೆ ಪ್ರತಿ ತಿಂಗಳು ತಲಾ 2000 ರೂಪಾಯಿ ಉಚಿತವಾಗಿ ನೀಡುವುದು ಕಾಂಗ್ರೆಸ್ ಎರಡನೇ ಗ್ಯಾರಂಟಿಯಾಗಿದೆ. ಉಚಿತ ಅಕ್ಕಿ ನೀಡಿಕೆ ಕಾಂಗ್ರೆಸ್ ಘೋಷಣೆ ಮಾಡಿರುವ ಮೂರನೇ ಗ್ಯಾರಂಟಿ ಆಗಿದೆ. ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಮೊದಲನೆಯದಾಗಿ ಜನಪ್ರಿಯ ಅನ್ನಭಾಗ್ಯ ಘೋಷಣೆ ಮಾಡಿದ್ದರು. ಇದೀಗ ಉಚಿತ ಅಕ್ಕಿಯನ್ನು 10 ಕೆಜಿಗೆ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದೆ. ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಇದು ಅನ್ವಯ ಆಗಲಿದೆ.

ನಿರುದ್ಯೋಗಿ ಪದವೀಧರರಿಗೆ ಆರ್ಥಿಕ ನೆರವು: ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಯುವಕ್ರಾಂತಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್​ನ 4ನೇ ಘೋಷಣೆ ಗ್ಯಾರೆಂಟಿ ಮಾಡಿದ್ದಾರೆ. ಕೈ ಪಕ್ಷ ಅಧಿಕಾರಕ್ಕೆ ಬಂದರೆ, ಯುವನಿಧಿ ಎಂಬ ಯೋಜನೆಯಲ್ಲಿ ನಿರುದ್ಯೋಗಿ ಪದವೀಧರರಿಗೆ ಆರ್ಥಿಕ ನೆರವು ನೀಡುವುದು ಇದರ ವಿಚಾರ. ಯುವನಿಧಿ ಯೋಜನೆಯಲ್ಲಿ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3,000 ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ 1,500 ರೂ. ಭತ್ಯೆ ನೀಡಲಿದ್ದಾರೆ. ಕರ್ನಾಟಕಕ್ಕೆ 5ನೇ ದೊಡ್ಡ ಗ್ಯಾರೆಂಟಿ ಘೋಷಿಸಿದ ರಾಹುಲ್ ಗಾಂಧಿ ಮಾಡಿದ್ದಾರೆ.

ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ: ಕೈ ಪಕ್ಷ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ. ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ರೂ. ವರೆಗೆ ವೇತನ ಹೆಚ್ಚಿಸುವುದು ಕಾಂಗ್ರೆಸ್​ನ ಆರನೇ ಘೋಷಣೆ. ಆಶಾ ಕಾರ್ಯಕರ್ತೆಯರಿಗಾಗಿ 8 ಸಾವಿರ ರೂ. ವೇತನ ಹೆಚ್ಚಳ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮೂಲಕ ಘೋಷಣೆ ಮಾಡಿಸಲಾಗಿದೆ. ಖಾನಾಪುರದಲ್ಲಿ ನಡೆದ ಸಮಾವೇಶದಲ್ಲಿ ಈ ಘೋಷಣೆ ಮಾಡಲಾಗಿದೆ.

ವಿಶೇಷ 'ಕೃಷಿ ನಿಧಿ' ಯೋಜನೆ: ಅಂತಿಮವಾಗಿ ಇಂದು ಎಐಸಿಸಿ ನಾಯಕ ರಾಹುಲ್​ ಗಾಂಧಿ ಮೂಲಕ ಏಳನೇ ಘೋಷಣೆ ಮಾಡಿಸಲಾಗಿದೆ. ರೈತರಿಗಾಗಿ ವಿಶೇಷ 'ಕೃಷಿ ನಿಧಿ' ಯೋಜನೆಯನ್ನು ರಾಹುಲ್ ಗಾಂಧಿ ಅರಸಿಕೆರೆಯಲ್ಲಿ ಘೋಷಿಸಿದ್ದಾರೆ. ರೈತರ ಹಿತ ಕಾಯುವ ಉದ್ದೇಶದಿಂದ ಕೃಷಿ ನಿಧಿ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಈ ಯೋಜನೆಯ ಮುಖ್ಯಾಂಶವೆಂದರೆ, 5 ವರ್ಷಗಳಲ್ಲಿ ರೈತರಿಗೆ ಬಜೆಟ್ ನಲ್ಲಿ ₹1.5 ಲಕ್ಷ ಕೋಟಿ, ಪ್ರತಿ ವರ್ಷ ಬಜೆಟ್‌ನಿಂದ ₹30,000 ಕೋಟಿ ರೈತರಿಗೆ ಸೇರಲಿದೆ. ತೆಂಗು ಮತ್ತು ಅಡಿಕೆ ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ, ಹಾಲಿನ ಸಬ್ಸಿಡಿ ₹5ರಿಂದ ₹7ಕ್ಕೆ ಹೆಚ್ಚಳ ಮಾಡುವ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಉಚಿತ ಭರವಸೆ ಮೂಲಕ ಬಿಜೆಪಿ ರಾಜ್ಯದ ಜನರ ಕಿವಿಗೆ ಹೂ ಇಟ್ಟಿದೆ: ಸಿದ್ದರಾಮಯ್ಯ

Last Updated : May 1, 2023, 7:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.