ETV Bharat / state

ವರದಿ ಬಂದ ನಂತರ ವೃದ್ಧೆ ಅಂತ್ಯಸಂಸ್ಕಾರ: ಬಸವರಾಜ ಬೊಮ್ಮಾಯಿ - ಗೃಹ ಸಚಿವ ಬಸವರಾಜ ಬೊಮ್ಮಾಯಿ

ಮೃತ ವೃದ್ಧೆಗೆ ಕೊರೊನಾ ಸೋಂಕು ಇದೆಯೋ ಇಲ್ಲವೋ ಎನ್ನುವುದು ಇನ್ನೂ ಗೊತ್ತಾಗಿಲ್ಲ. ವರದಿಯಲ್ಲಿ ಪಾಸಿಟಿವ್​ ಬಂದಿದ್ದರೆ ಮಾರ್ಗಸೂಚಿ ಪ್ರಕಾರ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Basavaraja  Bommai
ಗೃಹ ಸಚಿವ ಬಸವರಾಜ ಬೊಮ್ಮಾಯಿ
author img

By

Published : Mar 25, 2020, 1:07 PM IST

Updated : Mar 25, 2020, 1:35 PM IST

ಬೆಂಗಳೂರು: ಚಿಕ್ಕಬಳ್ಳಾಪುರ ವೃದ್ಧೆ ಸಾವು ಕೊರೊನಾದಿಂದ ಸಂಭವಿಸಿದೆಯೋ ಇಲ್ಲವೋ ಎನ್ನುವುದು ವರದಿ ಬಂದ ನಂತರ ಗೊತ್ತಾಗಲಿದೆ ಎಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ಮಹಿಳೆಗೆ ಕೊರೊನಾ ಸೋಂಕು ಇದೆಯೋ ಇಲ್ಲವೋ ಎನ್ನುವುದು ಇನ್ನೂ ಗೊತ್ತಾಗಿಲ್ಲ. ಒಂದು ವೇಳೆ ಕೊರೊನಾದಿಂದ ಮೃತಪಟ್ಟಿದ್ದರೆ ಮಾರ್ಗಸೂಚಿ ಪ್ರಕಾರ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದರು.

ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಹಣ್ಣು, ತರಕಾರಿ, ಹಾಲು, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಗೆ ಸಮಯ ನಿಗದಿ ಮಾಡಲಾಗುತ್ತದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಸಾರ್ವಜನಿಕರಿಗೆ ಸಮಯ ನಿಗದಿ ಮಾಡುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

Last Updated : Mar 25, 2020, 1:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.