ಬೆಂಗಳೂರು: ಶಾಲಾ ಮಕ್ಕಳಲ್ಲಿ ಸಂಖ್ಯಾಶಾಸ್ತ್ರದ ಕಲಿಕಾ ಸಾಮರ್ಥ್ಯ ಉತ್ತಮಗೊಳಿಸುವುದು ಮತ್ತು ಮಕ್ಕಳ ದಾಖಲಾತಿಗಳನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸತ್ವಂ ಕನ್ಸಲ್ಟಿಂಗ್ ಸಂಸ್ಥೆಯು ಶಿಕ್ಷಣ ಇಲಾಖೆಯ 105 ಶಾಲೆಗಳನ್ನು ದತ್ತು ಪಡೆದುಕೊಂಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮೆ. ಸತ್ವಂ ಕನ್ಸಲ್ಟಿಂಗ್ ಸಂಸ್ಥೆಯು ಶಾಲಾ ಶಿಕ್ಷಣ ಇಲಾಖೆಯ 105 ಶಾಲೆಗಳನ್ನು ದತ್ತು ಪಡೆಯುವ ಕುರಿತು ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಾದ ಬಿ.ಬಿ. ಕಾವೇರಿ ಸಹಿ ಹಾಕಿದರು.
ಈ ಒಪ್ಪಂದದಂತೆ ರಾಜ್ಯದ ಹಾವೇರಿ, ತುಮಕೂರು, ಯಾದಗಿರಿ ಮತ್ತು ದಾವಣಗೆರೆ ಜಿಲ್ಲಿಯಲ್ಲಿನ 105 ಶಾಲೆಗಳು ಮತ್ತು ಶಾಲಾ ಆವರಣದಲ್ಲಿರುವ ಅಂಗನವಾಡಿ ಹಾಗೂ ಪೂರ್ವಪ್ರಾಥಮಿಕ ಶಾಲೆಗಳನ್ನು ಬಲ ವಧರ್ನೆಗೊಳಿಸಿ 2025 ಪ್ರಾಥಮಿಕ ಶಾಲೆಗಳನ್ನು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ತಯಾರಿಸಿರುವ ನೀಲಿ ನಕ್ಷೆ ರೂಪಿಸಲಿವೆ.
ಈ ವೇಳೆ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಸತ್ವಂ ಸಂಸ್ಥೆಯ ಸಿಇಒ ಶ್ರೀಕೃಷ್ಣ ಮತ್ತಿತರರಿದ್ದರು.
ಇದನ್ನೂ ಓದಿ: ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ: ಪ್ರಕರಣ ಸಿಐಡಿ ತನಿಖೆ.. ಸಚಿವ ಬಿ ಸಿ ನಾಗೇಶ್