ETV Bharat / state

ನಕಲಿ ಬೀಜ, ಗೊಬ್ಬರ ತಡೆಗೆ ಬಿಗಿ ಕ್ರಮ: ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಚಿವ ಬಿ.ಸಿ.ಪಾಟೀಲ್ - ವಿಚಕ್ಷಣ ಅಧಿಕಾರಿಗಳ ಜೊತೆ ಬಿಸಿ ಪಾಟೀಲ್​ ಸಭೆ

ರಾಜ್ಯದಲ್ಲಿ ಬಿತ್ತನೆ ಚುರುಕುಗೊಂಡಿದೆ. ಇಂತಹ ಸಮಯದಲ್ಲಿ ಕಾಳಸಂತೆ ಮಾರಾಟಗಾರರು ರೈತರಿಗೆ ಮೋಸ ಮಾಡಲು ನಕಲಿ ಬೀಜ, ಗೊಬ್ಬರಗಳನ್ನು ಮಾರಾಟ ಮಾಡುತ್ತಾರೆ. ಅಂಥವರ ವಿರುದ್ದ ಕಠಿಎ ಕ್ರಮ ಜರುಗಿಸಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿಚಕ್ಷಣಾ ದಳಕ್ಕೆ ಸೂಚಿಸಿದ್ದಾರೆ.

bc patil meeting with vigilance officers
ವಿಚಕ್ಷಣಾ ಅಧಿಕಾರಿಗಳ ಜೊತೆ ಕೃಷಿ ಸಚಿವ ಸಭೆ
author img

By

Published : Jun 28, 2022, 5:41 PM IST

ಬೆಂಗಳೂರು: ರಾಜ್ಯದಲ್ಲಿ ನಕಲಿ ಬೀಜ ಮತ್ತು ಗೊಬ್ಬರ ಪೂರೈಕೆ ಆಗದಂತೆ ಕೃಷಿ ವಿಚಕ್ಷಣಾ ದಳಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್​ ಎಚ್ಚರಿಕೆ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಂದು ಕೃಷಿ ವಿಚಕ್ಷಣಾ ದಳ (ಜಾಗೃತ ಕೋಶ)ವನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಅವರು ಸಭೆ ನಡೆಸಿದರು.
ರಾಜ್ಯದಲ್ಲಿ ಬಿತ್ತನೆ ಚುರುಕುಗೊಳ್ಳುತ್ತಿದೆ. ಕಾಳಸಂತೆ ಮಾರಾಟಗಾರರು ರೈತರಿಗೆ ಮೋಸ ಮಾಡಲೆಂದೇ ನಕಲಿ ಬೀಜ, ಗೊಬ್ಬರ ಮಾರಲು ಮಾರುಕಟ್ಟೆಯಲ್ಲಿ ಕಾಯುತ್ತಿರುತ್ತಾರೆ. ಅಂಥವರ ಮೇಲೆ ಸದಾ ಗಮನಹರಿಸಬೇಕು. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎನ್ನುವಂತಾಗದೇ ನಕಲಿ ಜಾಲದ ಮೂಲವನ್ನೇ ನಾಶಪಡಿಸಬೇಕು. ಬರೀ ಚಾರ್ಜ್ ಶೀಟ್ ಹಾಕಿ ಸುಮ್ಮನಾದರೆ ಸಾಲದು. ನಕಲಿಕೋರರಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಯಾವುದೇ ಕಂಪನಿ ಇರಲಿ, ಅದು ಎಷ್ಟೇ ಹೆಸರು ಮಾಡಿರಲಿ, ಆ ಕಂಪನಿ ರೈತರಿಗೆ ಮಾರುವ ಉತ್ಪನ್ನ, ಬೀಜ, ಗೊಬ್ಬರ ಅಧಿಕೃತವಾಗಿರಬೇಕು. ಎಲ್ಲಾ ಉತ್ಪನ್ನಗಳ ಮಾರಾಟಕ್ಕೆ ಪರವಾನಿಗೆ ಹೊಂದಿರಬೇಕು. ಯಾವುದೋ ಒಂದಕ್ಕೆ ಪರವಾನಿಗೆ ಪಡೆದು ಅದರ ಹೆಸರಿನಲ್ಲಿ ಮತ್ತೊಂದು ಉತ್ಪನ್ನ ಮಾರಾಟ ಮಾಡಿದರಾಯಿತು ಎನ್ನುವುದನ್ನು ತಪ್ಪಿಸಬೇಕು ಎಂದು ನಿರ್ದೇಶನ ನೀಡಿದರು.

ಇಂತಹ ಕಂಪನಿಗಳು ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೇ ನೋಟಿಸ್ ನೀಡಿ, ಅವುಗಳ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಬೇಕು. ನಿಗದಿತ ಸೂಚಿತ ಪ್ರದೇಶಗಳಲ್ಲಿ ಸೂಚಿಸಿದ ಕಂಪನಿ ಮಾರಾಟಗಾರರು ಮಾತ್ರ ಕೃಷಿ ಉತ್ಪನ್ನ, ಬೀಜ ಗೊಬ್ಬರ ಮಾರಾಟ ಮಾಡಬೇಕು. ರೈತರಿಗೆ ಇಂತವರಿಂದ ಮೋಸವಾದ ಮೇಲೆ ಎಚ್ಚೆತ್ತುಕೊಂಡು ಪರಿಹಾರ ನೀಡುವುದಕ್ಕಿಂತ “ಪ್ರಿವೆನ್ಷನ್ ಈಸ್ ದ್ಯಾನ್ ಕ್ಯೂರ್’ ಎಂಬ ಮಾತಿನಂತೆ ರೈತರಿಗೆ ಅನ್ಯಾಯವಾಗುವ ಮೊದಲೇ ಕೃಷಿ ವಿಚಕ್ಷಣಾ ದಳ ಸನ್ನದ್ಧವಾಗಿರಬೇಕು ಎಂದು ಹೇಳಿದರು.

ಕೃಷಿ ವಿಚಕ್ಷಣಾ ದಳವನ್ನು ಇನ್ನಷ್ಟು ಬಲಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವಿಚಕ್ಷಣಾ ದಳದ ಕಚೇರಿಯನ್ನು ವಿಸ್ತರಿಸಲಾಗಿದ್ದು, ಹೊಸದಾಗಿ ಮೈಸೂರು ಹಾಗೂ ಕಲಬುರಗಿಯಲ್ಲಿ ಕೃಷಿ ವಿಚಕ್ಷಣಾ ದಳದ ನೂತನ ಕಚೇರಿಯನ್ನು ಆರಂಭಿಸಲಾಗುವುದು. ಮುಂದಿನ ಜುಲೈ 5 ರಂದು ಮೈಸೂರಿನಲ್ಲಿ ಕೃಷಿ ವಿಚಕ್ಷಣಾ ದಳದ ನೂತನ ಕಚೇರಿ ಉದ್ಘಾಟನೆಗೊಳ್ಳಲಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಸಭೆಯಲ್ಲಿ ಕೃಷಿ ಇಲಾಖೆ ಆಯುಕ್ತ ಶರತ್ ಪಿ, ವಿಚಕ್ಷಣಾ ದಳದ ಅನೂಪ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ಶಿವಸೇನೆ ಮುಖಂಡ ಸಂಜಯ್​ ರಾವತ್​ಗೆ ಎರಡನೇ ಸಮನ್ಸ್​ ಜಾರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.