ETV Bharat / state

ರಾಜ್ಯದಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ: ಸಚಿವ ಬಿ.ಸಿ.ಪಾಟೀಲ್ ಅಭಯ

author img

By

Published : Jul 8, 2020, 9:48 AM IST

ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ, ಅಗತ್ಯ ಪ್ರಮಾಣದಷ್ಟು ರಸಗೊಬ್ಬರವನ್ನು ಈಗಾಗಲೇ ರಾಜ್ಯಗಳಿಗೆ ಪೂರೈಸಿದೆ. ದಾಸ್ತಾನು ಸಹ ಮಾಡಲಾಗಿದೆ. ಯಾವುದೇ ಕೊರತೆಯಾಗದಂತೆ ಕ್ರಮವಹಿಸಲಾಗಿದೆ ಎಂದು ಸಚಿವರು ರೈತರಿಗೆ ಭರವಸೆ ನೀಡಿದ್ದಾರೆ.

ಕೃಷಿ ಸಚಿವ ಬಿ.ಸಿ.ಪಾಟೀಲ್
ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ. ರೈತರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ರೈತರಲ್ಲಿ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ, ರಾಜ್ಯಗಳ ಜೊತೆ ಸಮಾಲೋಚನೆ ನಡೆಸಿ, ಅಗತ್ಯ ಪ್ರಮಾಣದಷ್ಟು ರಸಗೊಬ್ಬರವನ್ನು ಈಗಾಗಲೇ ರಾಜ್ಯಗಳಿಗೆ ಪೂರೈಸಿ, ದಾಸ್ತಾನು ಮಾಡಲಾಗಿದೆ. ಯಾವುದೇ ಕೊರತೆಯಾಗದಂತೆ ಕ್ರಮವಹಿಸಲಾಗಿದೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

2020-21 ನೇ ಸಾಲಿನ ಮುಂಗಾರು ಹಂಗಾಮಿನ ಏಪ್ರಿಲ್ 1 ರಿಂದ ಜುಲೈ 6 2020 ರವರೆಗೆ ಯೂರಿಯಾ ರಸಗೊಬ್ಬರಕ್ಕೆ 4,98,000 ಮೆಟ್ರಿಕ್ ಟನ್ ಬೇಡಿಕೆ ಇದೆ. ಇದರಲ್ಲಿ 4,35,700 ಮೆ.ಟನ್ ಸರಬರಾಜಾಗಿದ್ದು 2,06,750 ಮೆ.ಟನ್ ದಾಸ್ತಾನು ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಸುಮಾರು 1,55,468 ಮೆಟ್ರಿಕ್ ಟನ್ ಹೆಚ್ಚುವರಿ ಯೂರಿಯಾ ಪೂರೈಕೆಯಾಗಿದೆ. ಎಲ್ಲ ಜಿಲ್ಲೆಗಳಲ್ಲಿಯೂ ಸುಮಾರು 2,06, 740 ಟನ್ ದಾಸ್ತಾನು ಇದೆ ಎಂದು ಮಾಹಿತಿ ನೀಡಿದ್ದಾರೆ.

ಮೇ ಮತ್ತು ಜೂನ್ ಅವಧಿಯಲ್ಲಿ ದೇಶಾದ್ಯಂತ ನಿರೀಕ್ಷೆಗಿಂತ ಉತ್ತಮ ಮಳೆಯಾಗಿದ್ದರಿಂದ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬೇಡಿಕೆ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ. ಹೆಚ್ಚುವರಿಯಾಗಿ ರಸಗೊಬ್ಬರಕ್ಕೆ ಯಾವುದೇ ಬೇಡಿಕೆ ಎದುರಾದರೂ ಇಲಾಖೆ ಪೂರೈಸಲಿದೆ ಎಂದು ಕೃಷಿ ಸಚಿವರು ಭರವಸೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.