ETV Bharat / state

ಲಿಂಗಾಯತ ಧರ್ಮದ ವಿಚಾರಕ್ಕೆ ಕೈ ಹಾಕದಂತೆ ರಾಜ್ಯ ಕಾಂಗ್ರೆಸ್​ ನಾಯಕರಿಗೆ ಹೈಕಮಾಂಡ್ ತಾಕೀತು - mb patil Lingayat is a separate religion statement

ಸಿದ್ದರಾಮಯ್ಯ ಐದು ವರ್ಷ ಯಶಸ್ವಿಯಾಗಿ ಸರ್ಕಾರ ನಡೆಸಿದ್ದರೂ ಸಹ ಸೋಲುವುದಕ್ಕೆ ಕಾರಣವಾಗಿದ್ದೆ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ. ಹೀಗಾಗಿ, ರಾಜ್ಯ ನಾಯಕರಿಗೆ ಸ್ಪಷ್ಟ ಸಂದೇಶ ನೀಡಿ ಎಂದು ಕೆಲ ನಾಯಕರು ಮನವಿ ಮಾಡಿದ್ದರು..

aicc-instruct-kpcc-leader-to-not-speak-about-religion
ರಣದೀಪ್ ಸಿಂಗ್ ಸುರ್ಜೇವಾಲಾ
author img

By

Published : Sep 3, 2021, 4:51 PM IST

ಬೆಂಗಳೂರು : ಲಿಂಗಾಯತ ಪ್ರತ್ಯೇಕ ಧರ್ಮದ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಎಚ್ಚೆತ್ತ ಕಾಂಗ್ರೆಸ್​ ಹೈಕಮಾಂಡ್, ಧರ್ಮದ ವಿಚಾರಕ್ಕೆ ಕೈ ಹಾಕದಂತೆ ರಾಜ್ಯ ನಾಯಕರಿಗೆ ತಾಕೀತು ಮಾಡಿದೆ. ಮಾಜಿ ಸಚಿವ ಎಂ ಬಿ ಪಾಟೀಲ್​ರ ಪ್ರತ್ಯೇಕ ಧರ್ಮದ ಬಗ್ಗೆ ಸೂಚ್ಯವಾಗಿ ಹೇಳಿಕೆ ವಿವಾದಕ್ಕೆ ತಿರುಗುತ್ತಿದ್ದ ಹಾಗೇ ಎಚ್ಚೆತ್ತ ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ, ಈ ಬಗ್ಗೆ ಸೂಚನೆ ನೀಡಿದ್ದಾರೆ.

ನಾಲ್ಕು ದಿನಗಳ ಹಿಂದೆ ಎಂ ಬಿ ಪಾಟೀಲ್, ವಿನಯ್​​ ಕುಲಕರ್ಣಿ ಪ್ರತ್ಯೇಕ ಧರ್ಮದ ವಿಚಾರವಾಗಿ ಹೇಳಿಕೆ ಕೊಟ್ಟಿದ್ದರು. ಈ ಬಗ್ಗೆ ರಾಜ್ಯ ನಾಯಕರು ಹೈಕಮಾಂಡ್​ಗೆ ಮಾಹಿತಿ ನೀಡಿದ್ದರು. ಸಿದ್ದರಾಮಯ್ಯ ಐದು ವರ್ಷ ಯಶಸ್ವಿಯಾಗಿ ಸರ್ಕಾರ ನಡೆಸಿದ್ದರೂ ಸಹ ಸೋಲುವುದಕ್ಕೆ ಕಾರಣವಾಗಿದ್ದೆ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ. ಹೀಗಾಗಿ, ರಾಜ್ಯ ನಾಯಕರಿಗೆ ಸ್ಪಷ್ಟ ಸಂದೇಶ ನೀಡಿ ಎಂದು ಕೆಲ ನಾಯಕರು ಮನವಿ ಮಾಡಿದ್ದರು.

ಈ ಹಿನ್ನೆಲೆ ಸುರ್ಜೇವಾಲಾ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ಗೆ ಕರೆ ಮಾಡಿ, ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ಮಾತನಾಡದಂತೆ ತಾಕೀತು ಮಾಡಿದ್ದಾರೆ. ಇದಾದ ಮೇಲೆ ಎಂ ಬಿ ಪಾಟೀಲ್ ಅವರಿ​ಗೆ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಕರೆ ಮಾಡಿ ತಿಳಿ ಹೇಳಿದ್ದರು ಎನ್ನಲಾಗಿದೆ.

ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ಕೊಡುವಂತೆ ಹೇಳಿದ್ದರು. ಈ ಹಿನ್ನೆಲೆ ಪುಣೆಯಲ್ಲಿದ್ದ ಎಂ ಬಿ ಪಾಟೀಲ್ ಬೆಂಗಳೂರಿಗೆ ಆಗಮಿಸಿ, ಇಂದು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ‌ನಡೆಸಿ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡಿದರು ಎನ್ನಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.