ETV Bharat / state

ರಾಜ್ಯ ಕಾಂಗ್ರೆಸ್ ನಾಯಕರ ಅಭಿಪ್ರಾಯ ಸಂಗ್ರಹಿಸಲು ಮುಂದಾದ ಎಐಸಿಸಿ

ಎಐಸಿಸಿ ವೀಕ್ಷಕರಾದ ಮಧುಸೂದನ್ ಮಿಸ್ತ್ರಿ ಹಾಗೂ ಭಕ್ತ ಚರಣ್ ದಾಸ್ ರಾಜ್ಯಕ್ಕೆ ಭೇಟಿ ನೀಡಿದ್ದು, ಇಂದು ರಾಜ್ಯದ ಕಾಂಗ್ರೆಸ್ ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಎಐಸಿಸಿ ವೀಕ್ಷಕರು
ಎಐಸಿಸಿ ವೀಕ್ಷಕರು
author img

By

Published : Dec 19, 2019, 5:00 PM IST

ಬೆಂಗಳೂರು: ನಗರದ ಕುಮಾರ ಕೃಪ ಅತಿಥಿಗೃಹಕ್ಕೆ ಇಂದು ಆಗಮಿಸಲಿರುವ ಉಭಯ ನಾಯಕರು ರಾಜ್ಯ ಕಾಂಗ್ರೆಸ್ ನಾಯಕರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ರಾಜ್ಯದಲ್ಲಿ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್​​ ಹಿನ್ನಡೆಗೆ ಕಾರಣವನ್ನು ಅರಿಯಲಿರುವ ನಾಯಕರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಸ್ವೀಕಾರ ಇಲ್ಲವೇ ವಾಪಸ್ ಪಡೆಯುವಂತೆ ಸೂಚಿಸುವ ಕುರಿತು ರಾಜ್ಯ ಕಾಂಗ್ರೆಸ್ ನಾಯಕರಿಂದ ಮಾಹಿತಿ ಪಡೆಯಲಿದ್ದಾರೆ. ಒಂದೊಮ್ಮೆ ರಾಜೀನಾಮೆ ಅಂಗೀಕರಿಸುವ ನಿರ್ಧಾರ ಕೈಗೊಂಡರೆ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರು ಸೂಕ್ತ ಆಗಲಿದ್ದಾರೆ ಎಂಬ ಮಾಹಿತಿ ಪಡೆಯಲಿದ್ದಾರೆ.

ಮಧುಸೂದನ್ ಮಿಸ್ತ್ರಿ ಹಾಗೂ ಭಕ್ತ ಚರಣ್ ದಾಸ್ ರಾಜ್ಯಕ್ಕೆ ಭೇಟಿ

ಮಧುಸೂದನ್ ಮಿಸ್ತ್ರಿ ಅವರು, ಈಗಾಗಲೇ ಭಕ್ತ ಚರಣ ದಾಸ್ ಅವರೊಂದಿಗೆ ಸಿದ್ದರಾಮಯ್ಯ ನಿವಾಸ ಕಾವೇರಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿರುವ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಮಧ್ಯಾಹ್ನ 3 ಗಂಟೆಯಿಂದ ಕುಮಾರಕೃಪ ಅತಿಥಿಗೃಹದಲ್ಲಿ ಅಭಿಪ್ರಾಯ ಸಂಗ್ರಹ ಕಾರ್ಯ ಆರಂಭವಾಗಿದೆ. ರಾಜ್ಯದ ಬಹುತೇಕ ಕಾಂಗ್ರೆಸ್ ನಾಯಕರು ಆಗಮಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ. ಮೂಲ ಕಾಂಗ್ರೆಸ್ಸಿಗರು ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರ ಬದಲಾವಣೆಗೆ ಒತ್ತಡ ಹೇರಿದರೆ ಕಾಂಗ್ರೆಸ್ಸಿಗರು ಇವರ ಪರ ಮಾತನಾಡುವ ಸಾಧ್ಯತೆಯಿದೆ.

Intro:newsBody:ರಾಜ್ಯ ಕಾಂಗ್ರೆಸ್ ನಾಯಕರ ಅಭಿಪ್ರಾಯ ಸಂಗ್ರಹಿಸಲಿರುವ ಎಐಸಿಸಿ ವೀಕ್ಷಕರು

ಬೆಂಗಳೂರು: ಎಐಸಿಸಿ ವೀಕ್ಷಕರಾದ ಮಧುಸೂದನ್ ಮಿಸ್ರಿ ಹಾಗೂ ಭಕ್ತ ಚರಣ್ ದಾಸ್ ರಾಜ್ಯಕ್ಕೆ ಭೇಟಿ ನೀಡಿ ಇಂದು ರಾಜ್ಯದ ಕಾಂಗ್ರೆಸ್ ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.
ನಗರದ ಕುಮಾರ ಕೃಪ ಅತಿಥಿಗೃಹಕ್ಕೆ ಇಂದು ಆಗಮಿಸಲಿರುವ ಉಭಯ ನಾಯಕರು ರಾಜ್ಯ ಕಾಂಗ್ರೆಸ್ ನಾಯಕರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ರಾಜ್ಯದಲ್ಲಿ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮುಂತಾದ ಹಿನ್ನಡೆಗೆ ಕಾರಣವನ್ನು ಅರಿಯಲಿರುವ ನಾಯಕರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿರುವ ದಿನೇಶ್ ಗುಂಡೂರಾವ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಸ್ವೀಕಾರ ಇಲ್ಲವೇ ವಾಪಸ್ ಪಡೆಯುವಂತೆ ಸೂಚಿಸುವ ಕುರಿತು ರಾಜ್ಯ ಕಾಂಗ್ರೆಸ್ ನಾಯಕರಿಂದ ಮಾಹಿತಿ ಪಡೆಯಲಿದ್ದಾರೆ. ಒಂದೊಮ್ಮೆ ರಾಜೀನಾಮೆ ಅಂಗೀಕರಿಸುವ ನಿರ್ಧಾರ ಕೈಗೊಂಡರೆ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರು ಸೂಕ್ತ ಆಗಲಿದ್ದಾರೆ ಎಂಬ ಮಾಹಿತಿ ಪಡೆಯಲಿದ್ದಾರೆ.
ಎಐಸಿಸಿ ವೀಕ್ಷಕರಾಗಿ ಆಗಮಿಸಿರುವ ಭಕ್ತಚರಣ್ ದಾಸ್ ಕುಮಾರ ಕೃಪ ಅತಿಥಿ ಗೃಹಕ್ಕೆ ಈಗಾಗಲೇ ಆಗಮಿಸಿದ್ದು ಬೆಂಗಳೂರಿಗೆ ಆಗಮಿಸಿರುವ ಮಧುಸೂಧನ್ ಮಿಸ್ತ್ರಿ ಅವರ ಆಗಮನ ನಿರೀಕ್ಷೆಯಲ್ಲಿದ್ದಾರೆ. ಅವರು ಬಂದ ನಂತರ ಕಾಂಗ್ರೆಸ್ ನಾಯಕರಿಂದ ಅಭಿಪ್ರಾಯ ಸಂಗ್ರಹ ಆರಂಭವಾಗಲಿದೆ.
ಮಧುಸೂದನ್ ಮಿಸ್ತ್ರಿ ಈಗಾಗಲೇ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು ನೇರವಾಗಿ ಭಕ್ತ ಚರಣ ದಾಸ್ ಅವರೊಂದಿಗೆ ಸಿದ್ದರಾಮಯ್ಯ ನಿವಾಸ ಕಾವೇರಿಗೆ ತೆರಳಿದ್ದಾರೆ. ವಿಶ್ರಾಂತಿ ಪಡೆಯುತ್ತಿರುವ ಸಿದ್ದರಾಮಯ್ಯರನ್ನು ಬೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಸಂಜೆ 3 ಗಂಟೆಯಿಂದ ಕುಮಾರಕೃಪ ಅತಿಥಿಗೃಹದಲ್ಲಿ ಅಭಿಪ್ರಾಯ ಸಂಗ್ರಹ ಕಾರ್ಯ ಆರಂಭವಾಗಲಿದೆ. ರಾಜ್ಯದ ಬಹುತೇಕ ಕಾಂಗ್ರೆಸ್ ನಾಯಕರು ಆಗಮಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ. ಮೂಲ ಕಾಂಗ್ರೆಸ್ಸಿಗರು ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರ ಬದಲಾವಣೆಗೆ ಒತ್ತಡ ಹೇರಿದರೆ ಕಾಂಗ್ರೆಸ್ಸಿಗರು ಇವರ ಪರ ಮಾತನಾಡುವ ಸಾಧ್ಯತೆ ಇದೆ.Conclusion:news

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.