ETV Bharat / state

ಎಐಸಿಸಿ ಅಧ್ಯಕ್ಷರಾಗಿ ಖರ್ಗೆ ಪ್ರಭಾವ.. ರಾಜ್ಯ ವಿಧಾನಸಭೆ ಚುನಾವಣೆಗೆ ಸಹಕಾರಿಯೇ?

author img

By

Published : Apr 10, 2023, 8:11 AM IST

Assembly Polls 2023: ರಾಜ್ಯದ ಹಿರಿಯ ಕಾಂಗ್ರೆಸ್ಸಿಗ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದು ಕಾಂಗ್ರೆಸ್ ಗೆಲುವಿಗೆ ಒಂದಿಷ್ಟು ಸಹಕಾರಿ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

AICC president Mallikarjun Kharge
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: 'ಮಲ್ಲಿಕಾರ್ಜುನ ಖರ್ಗೆ' ರಾಜ್ಯ ಕಾಂಗ್ರೆಸ್​ನಲ್ಲಿ ಮೇಲ್ಪಕ್ತಿಯಲ್ಲಿ ಕೇಳಿಬರುವ ಹೆಸರು. ತಳಮಟ್ಟದ ಸಮುದಾಯದಿಂದ ಬೆಳೆದು ಬಂದು ಉನ್ನತ ಸ್ಥಾನಕ್ಕೇರಿರುವ ಸಂದರ್ಭದಲ್ಲಿಯೇ ರಾಜ್ಯ ವಿಧಾನಸಭೆ ಚುನಾವಣೆ ಬಂದಿರುವುದು ಅತ್ಯಂತ ಪ್ರಶಸ್ತ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಪ್ರಯತ್ನ ನಡೆಸಿರುವ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ದೊಡ್ಡ ಆದರ್ಶ. ಇವರ ಸ್ಥಾನ, ನೇಮಕ, ಆಯ್ಕೆಯ ಪ್ರಭಾವದಿಂದಾಗಿ ರಾಜ್ಯದಲ್ಲಿ ಹಿಂದುಳಿದ ಅದರಲ್ಲೂ ದೊಡ್ಡ ಸಂಖ್ಯೆಯಲ್ಲಿರುವ ದಲಿತ ಸಮುದಾಯದ ಮತದಾರರು ಈ ಬಾರಿ ಕಾಂಗ್ರೆಸ್ ಕಡೆ ನಿಲ್ಲಲಿದ್ದಾರೆ ಎಂಬ ನಂಬಿಕೆಯಲ್ಲಿದ್ದಾರೆ. ದಲಿತ ಬಲಗೈ ಸಮುದಾಯದ ಪ್ರಮುಖ ನಾಯಕರಾಗಿರುವ ಖರ್ಗೆ ಹಿಂದುಳಿದ ವರ್ಗಗಳ ನೇತಾರರಾಗಿ ಗುರುತಿಸಿಕೊಂಡಿದ್ದಾರೆ. ಅವರು ಎಐಸಿಸಿ ಅಧ್ಯಕ್ಷರಾಗಿರುವುದು ಕಾಂಗ್ರೆಸ್ ಗೆಲುವಿಗೆ ಒಂದಿಷ್ಟು ಸಹಕಾರಿ ಆಗಲಿದೆ ಎಂಬ ಮಾತು ಕೇಳಿ ಬರುತ್ತಿದೆ.

ಪೂರಕ ಹೇಳಿಕೆ: ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರಾಜ್ಯದ ಹಿಂದುಳಿದ ವರ್ಗದವರ ಮತ ಸೆಳೆಯುವ ದೃಷ್ಟಿಯಿಂದ ಮಲ್ಲಿಕಾರ್ಜುನ ಖರ್ಗೆ ಪರ ಹೇಳಿಕೆ ನೀಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗೋದಾದರೆ ಖುಷಿ. ನನ್ನ ಸಂಪೂರ್ಣ ಬೆಂಬಲವಿದೆ ಎಂದಿದ್ದಾರೆ. ಈ ಮೂಲಕ ಖರ್ಗೆ ಅವರ ಒಲವು ಗಳಿಸಿದ್ದಾರೆ. ಜತೆಗೆ ಹಿಂದುಳಿದ ವರ್ಗದ ಮತ್ತೋರ್ವ ನಾಯಕ ಹಾಗೂ ಕುರುಬ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

"ಖರ್ಗೆ ಅವರು ಏನು ಇಚ್ಛೆ ಪಡುತ್ತಾರೋ, ಅದನ್ನು ಈಡೇರಿಸುವ ಕೆಲಸ ನನ್ನದು. ಅವರು ಸಿಎಂ ಆಗಲು ಬಯಸಿದರೆ ಅವರೊಟ್ಟಿಗೆ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಅವರ ಹಿರಿತನ, ತ್ಯಾಗವನ್ನು ಗೌರವಿಸುತ್ತೇನೆ. ಖರ್ಗೆ ಅವರು ನನ್ನ ನಾಯಕರು. ಅವರೇ ನನ್ನ ಅಧ್ಯಕ್ಷರು ಮತ್ತು ನನಗಿಂತ 20 ವರ್ಷಗಳ ಹಿರಿಯರು. ಅವರು ರಾಜ್ಯ ಮತ್ತು ದೇಶದ ಆಸ್ತಿ. ಪಕ್ಷ ಯಾವ ತೀರ್ಮಾನ ಮಾಡುತ್ತೋ ಅದಕ್ಕೆ ನಾನು ಬದ್ಧವಾಗಿರುತ್ತೇನೆ" ಎಂದು ಎರಡು ದಿನಗಳ ಹಿಂದೆ ಡಿ ಕೆ ಶಿವಕುಮಾರ್​ ಹೇಳಿರುವುದು ರಾಜ್ಯ ಕಾಂಗ್ರೆಸ್​ನಲ್ಲಿ ಮತ್ತೊಂದು ಕುತೂಹಲಕ್ಕೆ ಕಾರಣವಾಗಿದೆ.

AICC president Mallikarjun Kharge
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಅಲ್ಲಿಗೆ ರಾಜ್ಯ ರಾಜಕಾರಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಛಾಪು ಎಷ್ಟಿದೆ ಎಂಬ ಅರಿವು ಆಗುತ್ತದೆ. ಒಂದು ಹೇಳಿಕೆ ಕಾಂಗ್ರೆಸ್ ಪಾಲಿಗೆ ಈ ಹಿರಿಯ ನಾಯಕ ಎಷ್ಟು ಅನಿವಾರ್ಯ ಎನ್ನುವುದನ್ನು ತೋರಿಸುತ್ತದೆ. ಇವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಎಐಸಿಸಿ ನೇಮಿಸಿರುವುದು ಕೇವಲ ಕಲಬುರಗಿ ಜಿಲ್ಲೆಗೆ ಮಾತ್ರವಲ್ಲ, ಅಕ್ಕಪಕ್ಕದ ಜಿಲ್ಲೆಗಳೂ ಸೇರಿದಂತೆ ಒಟ್ಟಾರೆ ಉತ್ತರ ಕರ್ನಾಟಕ ಭಾಗಕ್ಕೆ ಹೊಸ ಚೈತನ್ಯ ಮೂಡಿದೆ. ಕಾಂಗ್ರೆಸ್ ಕಾರ್ಯಕರ್ತರು ಸಹ ಹೊಸ ಹುರುಪಿನಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ.

ಖರ್ಗೆ ಬೆಳೆದ ರೀತಿ: 1969ರಲ್ಲಿ ಖರ್ಗೆಯವರು ಎಂಎಸ್‌ಕೆ ಮಿಲ್ ಕಾರ್ಮಿಕ ಯೂನಿಯನ್​​ನ ಕಾನೂನು ಸಲಹೆಗಾರರಾಗಿ ನೇಮಕಗೊಂಡರು. ಸಂಯುಕ್ತ ಮಜ್ದೂರ್ ಸಂಘದ ಪ್ರಭಾವಿ ಹೋರಾಟಗಾರರಾಗಿ ಹೊರಹೊಮ್ಮಿದ ಖರ್ಗೆ ಕಾರ್ಮಿಕರ ಹಕ್ಕುಗಳಿಗಾಗಿ ನಿರಂತರ ಶ್ರಮಿಸಿದರು. ಇದೇ ವರ್ಷ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಸೇರಿದ ಇವರು ಕಲಬುರಗಿ ನಗರ ಘಟಕದ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡರು. 1972ರಲ್ಲಿ ಗುರುಮಠಕಲ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ಅಲ್ಲಿಂದ ನಿರಂತರವಾಗಿ ಗೆಲ್ಲುತ್ತಾ 2008ರಲ್ಲಿ 9ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

2022ರಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನ: 2009ರಲ್ಲಿ ರಾಷ್ಟ್ರ ರಾಜಕಾರಣದತ್ತ ಪಯಣ ಬೆಳೆಸಿದರು. ಸಂಸದರಾಗಿ ಕಲಬುರುಗಿಯಿಂದ ಆಯ್ಕೆಯಾದರು. 2014ರಲ್ಲಿಯೂ ಗೆದ್ದು ಲೋಕಸಭೆ ಪ್ರವೇಶಿಸಿದರು. ಆದರೆ 2019ರ ಚುನಾವಣೆ ಅವರ ಪಾಲಿಗೆ ಕಹಿಯಾಯಿತು. ಆದರೆ ನಂತರ ರಾಜ್ಯಸಭೆಗೆ ಅವರು ನೇಮಕಗೊಂಡು ಅಲ್ಲಿ ಪ್ರತಿಪಕ್ಷ ನಾಯಕರಾದರು. ಎಐಸಿಸಿ ಇವರ ಸೇವೆಯನ್ನು ಪರಿಗಣಿಸಿ 2022ರ ಅಕ್ಟೋಬರ್​ನಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನ ನೀಡಿದೆ. ನಿರಂತರವಾಗಿ ಪ್ರಗತಿಯ ಹಾದಿಯಲ್ಲಿ ಸಾಗುತ್ತಲೇ ಬಂದ ಖರ್ಗೆ ರಾಜ್ಯ ರಾಜಕಾರಣದಲ್ಲಿ ಇಂದಿಗೂ ಆಸಕ್ತಿ ಹೊಂದಿದ್ದಾರೆ. ಇಲ್ಲಿನ ಕಾಂಗ್ರೆಸ್ ಪ್ರಗತಿಗೆ ಕೊಡುಗೆ ನೀಡುತ್ತಿದ್ದಾರೆ. ಈ ಬಾರಿ ವಿಧಾನಸಭೆ ಚುನಾವಣೆಗೆ ಸಹ ಇವರ ಕೊಡುಗೆ ದೊಡ್ಡಮಟ್ಟದಲ್ಲಿ ಇರಲಿದೆ ಎನ್ನಲಾಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಇವರ ಪ್ರಭಾವದಿಂದ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸುವ ನಿರೀಕ್ಷೆಯನ್ನು ಹೊಂದಿದೆ.

ಕಾಂಗ್ರೆಸ್​ ಬಲ: "ಐದು ದಶಕಗಳ ರಾಜಕಾರಣ. ಒಮ್ಮೆಯೂ ಪಕ್ಷಾಂತರ ಮಾಡಿದವರಲ್ಲ. ಪಕ್ಷ ನಿಷ್ಠೆಯ ಕಾರಣ ನೆಹರು-ಗಾಂಧಿ ಕುಟುಂಬದ ಆಪ್ತ ವಲಯಕ್ಕೆ ಸೇರಿದ್ದರು. ಅಧ್ಯಕ್ಷೀಯ ಚುನಾವಣೆ ವಿಚಾರ ಬಂದಾಗ, ಸ್ಪರ್ಧಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿದ್ದೂ ಇದೇ ಕಾರಣಕ್ಕೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಭಾವಿ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ. ಮೂರು ಬಾರಿ ಮುಖ್ಯಮಂತ್ರಿ ಸ್ಥಾನಕ್ಕೆ ಸಮೀಪ ಬಂದಿದ್ದ ಖರ್ಗೆಗೆ ಆ ಪಟ್ಟ ಒಲಿದಿರಲಿಲ್ಲ. ಆದರೆ ಈಗ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗುವ ಭಾಗ್ಯ ಒಲಿದು ಬಂದಿದೆ. ಅದೂ ಚುನಾವಣೆಯ ಮೂಲಕ ಐತಿಹಾಸಿಕ ಗೆಲುವಿನೊಂದಿಗೆ ಎಂಬುದು ಗಮನಾರ್ಹ. ಇವರ ಪ್ರಭಾವ ಉತ್ತರ ಕರ್ನಾಟಕ ಭಾಗಕ್ಕೆ ಮಾತ್ರವಲ್ಲ, ಇಡೀ ರಾಜ್ಯಕ್ಕೂ ಬೀರಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಇವರ ಪಾತ್ರ ಪ್ರಮುಖವಾಗಿರಲಿದೆ" ಎನ್ನುತ್ತಾರೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಅವರ ಜತೆ ಕೆಲಸ ಮಾಡಲು ನಾನು ಸಿದ್ಧ: ಡಿ.ಕೆ. ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.