ಬೆಂಗಳೂರು: ಮೆಜೆಸ್ಟಿಕ್ ರೈಲು ನಿಲ್ದಾಣದ ಪಾರ್ಕಿಂಗ್ ಬಳಿ ಗನ್ ಪತ್ತೆಯಾಗಿ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು.
ಯಾರೋ ಅಪರಿಚಿತರು ಇಂದು ಬೆಳಗ್ಗೆ ಪಾರ್ಕಿಂಗ್ ಬಳಿ ಏರ್ ಗನ್ ಎಸೆದು ಹೋಗಿದ್ದಾರೆ. ಈ ವಿಷಯ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದಂತೆ ಸ್ಥಳದಲ್ಲಿದ್ದ ಪ್ರಯಾಣಿಕರಲ್ಲಿ ಕೆಲಕಾಲ ಭಯ ಆವರಿಸಿತ್ತು.
ರೈಲ್ವೇ ಭದ್ರತಾ ವಿಭಾಗದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಏರ್ ಗನ್ ಎಂಬುದು ದೃಢವಾಗಿದೆ. ಈ ಬಗ್ಗೆ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.